2:05 AM Tuesday6 - January 2026
ಬ್ರೇಕಿಂಗ್ ನ್ಯೂಸ್
ಇನ್ಫೋಸಿಸ್ ನಿಂದ 53.5 ಎಕರೆ ಭೂಮಿ ರಿಯಲ್ ಎಸ್ಟೇಟ್ ಸಂಸ್ಥೆಗೆ ಮಾರಾಟ: ತನಿಖೆಗೆ… ಕ್ವಾಂಟಮ್ ತಂತ್ರಜ್ಞಾನ ಮತ್ತು ಸೆಮಿಕಂಡಕ್ಟರ್ ಸಹಭಾಗಿತ್ವಕ್ಕೆ ಪೆನಾಂಗ್ ಉಪಮುಖ್ಯಮಂತ್ರಿ ಒಲವು ಲಾರಿ- ಬೈಕ್ ಡಿಕ್ಕಿ: ಗಾಯಾಳು ಬೈಕ್ ಸವಾರ ಗೋಣಿಕೊಪ್ಪಲು ಲೋಪಮುದ್ರ ಆಸ್ಪತ್ರೆಯಲ್ಲಿ ಸಾವು ಸುದೀರ್ಘ ಅವಧಿಗೆ ಸಿಎಂ ಎಂಬ ದಾಖಲೆ ಜನರ ಆಶೀರ್ವಾದಿಂದ ಸಾಧ್ಯವಾಗಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಕಲೆ ರಾಜ್ಯದ ಸಂಸ್ಕೃತಿಯ ಕನ್ನಡಿ; ಕಲಾವಿದರು,ಕಲಾಸಕ್ತರಿಗೆ ಚಿತ್ರಸಂತೆ ವೇದಿಕೆ ಕಲ್ಪಿಸಿದೆ: ಮುಖ್ಯಮಂತ್ರಿ Kodagu | ಸಾರ್ವಜನಿಕವಾಗಿ ಬಂದೂಕು ಪ್ರದರ್ಶನ: 3 ಮಂದಿ ಆರೋಪಿಗಳ ಬಂಧನ ಸೋಶಿಯಲ್ ಮೀಡಿಯಾ ಪವರ್: 60 ವರ್ಷದ ವೃದ್ದನನ್ನು ಕುಟುಂಬದೊಂದಿಗೆ ಮತ್ತೆ ಒಂದಾಗಿಸಿದ ರೀಲ್ಸ್! ಜಗತ್ತಿನ 3ನೇ ಅತಿ ಎತ್ತರದ ಮೌಂಟ್ ಕೆನ್ಯಾ ಪರ್ವತ ಏರಿದ ಮಂಗಳೂರು ಮೂಲದ… Bangalore | ವಿಶ್ವಗುರು ಬಸವಣ್ಣ ಜೀವವೈವಿಧ್ಯ ಉದ್ಯಾನಕ್ಕೆ ಸಂಪುಟದ ಸಮ್ಮತಿ: 153 ಎಕರೆ… ಬಳ್ಳಾರಿ ಫೈಯರಿಂಗ್ | ಕೊಲೆ ಪ್ರಕರಣ ದಾಖಲಿಸಿ ಶಾಸಕರ ಕೂಡಲೇ ಬಂಧಿಸಿ: ಆರ್.ಅಶೋಕ್…

ಇತ್ತೀಚಿನ ಸುದ್ದಿ

ಮೈಸೂರಿನಲ್ಲಿ ರಾಜ್ಯ ಕುಂಬಾರರ ಮಹಾ ಸಮ್ಮೇಳನ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ ಚಾಲನೆ

05/01/2026, 21:49

ಮೈಸೂರು(reporterkarnataka.com): ಶಿಕ್ಷಣವಿಲ್ಲದಿದ್ದರೆ ಮನುಷ್ಯರಾಗಿ, ಸ್ವಾಭಿಮಾನಿಗಳಾಗಿ ಬದುಕಲು ಸಾಧ್ಯವಿಲ್ಲ. ಸಮಾಜದಲ್ಲಿ ಬದಲಾವಣೆ ತರಬೇಕಾದರೆ ವಿದ್ಯಾವಂತರಾಗಲೇಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಅವರು ಇಂದು ಮೈಸೂರು ಜಿಲ್ಲಾ ಕುಂಬಾರ ಸಂಘ ಮೈಸೂರು ಇವರ ವತಿಯಿಂದ ಆಯೋಜಿಸಲಾಗಿದ್ದ ರಾಜ್ಯ ಕುಂಬಾರರ ಮಹಾ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದರು.


ಕುಂಬಾರ ಸಮುದಾಯದವರು ಅತ್ಯಂತ ಹಿಂದುಳಿದ ಮತ್ತು ಕಡಿಮೆ ಜನಸಂಖ್ಯೆಯಿರುವ ಸಮುದಾಯವಾಗಿದೆ. ಕಾಯಕ ಯೋಗಿಗಳಾಗಿರುವ ಕುಂಬಾರ ಸಮಾಜದವರು ಮಣ್ಣಿನ ಕಲಾಕೃತಿಗಳನ್ನು ನಿರ್ಮಿಸುವ ಕಲೆಯ ಪರಿಣಿತಿ ವಿಶೇಷವಾಗಿದೆ. ಜ್ಞಾನದ ಬೆಳಕು ನೀಡಿದ ಕವಿ ಸರ್ವಜ್ಞರು, ಈ ಸಮುದಾಯಕ್ಕೆ ಸೇರಿರುವುದು ಹೆಮ್ಮೆಯ ವಿಷಯ. 12 ನೇ ಶತಮಾನದಲ್ಲಿ ಬಸವಣ್ಣನವರು ಕಾಯಕ ಮತ್ತು ದಾಸೋಹಗಳನ್ನು ಸಮಾಜಕ್ಕೆ ನೀಡಿದರು. ಚತುರ್ವರ್ಣ ವ್ಯವಸ್ಥೆ ಹಿಂದಿನಿಂದಲೂ ಬಂದಿರುವ ವ್ಯವಸ್ಥೆ. ಆರ್ಥಿಕವಾಗಿ ಹಿಂದುಳಿದ ಶೂದ್ರ ವರ್ಗದವರು ಜನಸಂಖ್ಯೆಯ ಸುಮಾರು ಶೇ.80 ರಷ್ಟಿದ್ದುಅಕ್ಷರ ಸಂಸ್ಕೃತಿಯಿಂದ ವಂಚಿತರಾಗಿದ್ದಾರೆ ಎಂದರು.
ಶಿಕ್ಷಣವಿಲ್ಲದಿದ್ದರೆ ಮನುಷ್ಯರಾಗಲು, ಸ್ವಾಭಿಮಾನಿಗಳಾಗಿ ಬದುಕಲು ಸಾಧ್ಯವಿಲ್ಲ. ಶಿಕ್ಷಣದ ಮಹತ್ವವನ್ನು ಮನಗಂಡು ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಶಿಕ್ಷಣವನ್ನು ಮೂಲಭೂತ ಹಕ್ಕನ್ನಾಗಿಸಿದರು. ಶಿಕ್ಷಣವಿಲ್ಲದಿದ್ದರೆ ನಾವು ಮನುಷ್ಯರಾಗಲು ಸಾಧ್ಯವಿಲ್ಲ ಹಾಗೂ ಸ್ವಾಭಿಮಾನಿಗಳಾಗಿ ಬದುಕಲಾಗುವುದಿಲ್ಲ ಎಂದರು.
ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಸಂವಿಧಾನ ನೀಡಿದ ಮೇಲೆ ಎಲ್ಲರಿಗೂ ಸಮಾನ ಅವಕಾಶಗಳು ದೊರಕಿತು. ಸ್ವಾತಂತ್ರ್ಯ ಬಂದ ನಂತರ ನಮ್ಮಲ್ಲಿ ಅನೇಕರು ವಿದ್ಯಾವಂತರಾಗಲು ಸಾಧ್ಯವಾಯಿತು ಎಂದರು.

*ವಿದ್ಯೆ ಯಾರ ಸ್ವತ್ತೂ ಅಲ್ಲ:*
ಎಲ್ಲರೂ ವಿದ್ಯಾವಂತರಾಗಲೇಬೇಕು ಎಂದು ಕರೆ ನೀಡಿದ ಮುಖ್ಯಮಂತ್ರಿಗಳು, ರಾಜಕೀಯ ಸ್ವಾತಂತ್ರ್ಯ ಯಶಸ್ವಿಯಾಗಬೇಕಾದರೆ ಎಲ್ಲರಿಗೂ ಸಾಮಾಜಿಕ, ಆರ್ಥಿಕ ಸ್ವಾತಂತ್ರ್ಯ ಬರಬೇಕು ಎಂದರು.
ವಿದ್ಯೆ ಯಾರ ಸ್ವತ್ತೂ ಅಲ್ಲ. ಪಟ್ಟಭದ್ರ ಹಿತಾಸಕ್ತರು, ವಿದ್ಯೆ ಒಂದು ವರ್ಗಕ್ಕೆ ಮಾತ್ರ ಸೀಮಿತ ಎನ್ನುವ ಭಾವನೆಯನ್ನು ಬಿತ್ತಿದ್ದರು. ಬದಲಾವಣೆ ತರಬೇಕಾದರೆ ವಿದ್ಯಾವಂತರಾಗಲೇಬೇಕು ಎಂದರು. ನಿಮ್ಮಲ್ಲೂ ವೈದ್ಯರು, ಇಂಜಿನಿಯರ್, ಪ್ರೊಫೆಸರ್ ಗಳಾಗಬೇಕು ಎಂದರು.
ಜಾತಿ ವ್ಯವಸ್ಥೆಯನ್ನು ತಂದು ಜನರ ದಾರಿ ತಪ್ಪಿಸಲಾಯಿತು.
ಬೇಡರ ಜಾತಿಗೆ ಸೇರಿದ ವಾಲ್ಮೀಕಿ ರಾಮಾಯಣ ಬರೆದರು. ಬೆಸ್ತರ ಜಾತಿಗೆ ಸೇರಿದ ವ್ಯಾಸ ಮಹರ್ಷಿಗಳು ಮಹಾಭಾರತವನ್ನು ಬರೆದರು. ಸಂವಿಧಾನ ರಚನಾ ಸಮಿತಿಯ ಸದಸ್ಯರಾಗಿದ್ದ ರತ್ನಪ್ಪ ಭರಮಪ್ಪ ಕುಂಬಾರರು ಸಮುದಾಯದ ಧೀಮಂತ ನಾಯಕರಾಗಿದ್ದರು. ಜಾತಿವ್ಯವಸ್ಥೆಯನ್ನು ತಂದು ಜನರ ದಾರಿ ತಪ್ಪಿಸಲಾಯಿತು. ನಾನು ವಕೀಲ ಶಿಕ್ಷಣ ಪಡೆದಿದ್ದರಿಂದಲೇ ಇಂದು ಮುಖ್ಯಮಂತ್ರಿಯಾಗಿ ನಿಮ್ಮೆದುರಿರಲು ಸಾಧ್ಯವಾಗಿದೆ. ಮಹಾನ್ ಜ್ಞಾನಿಯಾಗಿದ್ದ ಶ್ರೀ ನಾರಾಯಣ ಗುರುಗಳು, ಒಂದೇ ಧರ್ಮ, ಒಂದೇ ಜಾತಿ ಎಂದು ಪ್ರತಿಪಾದಿಸಿದರು. ಅಸ್ಪೃಶ್ಯತೆಯಿಂದ ದೇಗುಲಗಳಿಗೆ ಪ್ರವೇಶ ನಿರ್ಬಂಧಿಸುತ್ತಿದ್ದ ಕಾಲದಲ್ಲಿ, ‘ನಿಮ್ಮದೇ ದೇವಾಲಯಗಳನ್ನು ನಿರ್ಮಿಸಿಕೊಳ್ಳಿ’ ಎಂದು ಜನರಿಗೆ ಕರೆ ನೀಡಿದ್ದರು. ಸ್ವಾತಂತ್ರ್ಯ ಯಶಸ್ವಿಯಾಗಲು ಶಿಕ್ಷಣ ಅತ್ಯಗತ್ಯ ಎಂದರು.

*ಕುಂಬಾರ ಸಮಾಜದ ಅಭಿವೃದ್ಧಿ ಸರ್ಕಾರ ಬದ್ಧ:*
ಸಮುದಾಯದ ಬೇಡಿಕೆಗಳಿಗೆ ಸ್ಪಂದಿಸಲು ಕ್ರಮ ಕೈಗೊಳ್ಳಲಾಗುವುದು. ಸಮುದಾಯದವರಿಗೆ ಬಿಡಿಎ ನಿವೇಶನ ಪಡೆಯಲು ಸೂಕ್ತ ಅನುದಾನ ನೀಡುವ ಬೇಡಿಕೆಗೆ ಸಕಾರಾತ್ಮಕವಾಗಿ ಸ್ಪಂದಿಸಲಾಗುವುದು. ಕುಂಬಾರ ಅಭಿವೃದ್ಧಿ ನಿಗಮಕ್ಕೆ ಸೂಕ್ತ ಅನುದಾನ ನೀಡಲಾಗುವುದು. ಕುಂಬಾರ ಸಮಾಜದ ಅಭಿವೃದ್ಧಿ ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು