9:18 PM Monday23 - November 2026
ಬ್ರೇಕಿಂಗ್ ನ್ಯೂಸ್
ಮೂಡಿಗೆರೆ | ಮುತ್ತಿಗೆಪುರ ಗ್ರಾಮದ ವಿಂಧನ್ ಮನೆ ಮೇಲೆ ಗುಂಡಿನ ದಾಳಿ: ಕೂದಲೆಳೆಯ… ಆಫ್ರಿಕಾದ ಕಾಂಗೋದಲ್ಲಿ 95 ಕನ್ನಡಿಗರ ಬಂಧನ: ಶಿವಮೊಗ್ಗ, ದಾವಣಗೆರೆಯ ಹಕ್ಕಿಪಿಕ್ಕಿ ಸಮುದಾಯ ಏಜೆಂಟರ… ಚಿಕ್ಕಮಗಳೂರು | ಬಸವ ಮಂಟಪ ಪುಸ್ತಕದ ವಿವಾದ: ಬಾಳೆಹೊನ್ನೂರಿನ ರಂಭಾಪುರಿ ಪೀಠ ಖಂಡನೆ ಕರ್ನಾಟಕದಲ್ಲಿ ಬೈಕ್‌ ಟ್ಯಾಕ್ಸಿ ಸೇವೆಗೆ ಗ್ರೀನ್ ಸಿಗ್ನಲ್: ರಾಜ್ಯ ಸರ್ಕಾರದ ಮೇಲ್ಮನವಿ‌ ವಜಾಗೊಳಿಸಿದ… ಕಾವೇರಿ ನದಿ ನೀರು ಹಂಚಿಕೆ | ಕರ್ನಾಟಕಕ್ಕೆ ಬಿಗ್ ರಿಲೀಫ್: ತಮಿಳನಾಡು 2… ತಲಕಾವೇರಿ ಅನ್ನದಾನ ಮಹಾಯಜ್ಞ ಸಂಪನ್ನ: ಕೊಡಗು ಏಕೀಕರಣ ರಂಗದ ವತಿಯಿಂದ ಒಂದು ತಿಂಗಳ… ಸಿನಿಮಾ ನಟರನ್ನು ನೋಡಿ ಸಿಗರೇಟ್ ಸೇದಬೇಡಿ, ಐಸಿಯು ಸೇರುವ ಪರಿಸ್ಥಿತಿ ಬರಬಹುದು: ಆರೋಗ್ಯ… ಉತ್ತರಾಖಂಡ | ಸುಮಾರು 100 ಮೀಟರ್‌ ಆಳದ ಕಂದಕಕ್ಕೆ ಉರುಳಿದ ಬಸ್: 8… ಸಚಿವ ಸಂಪುಟದಲ್ಲಿ ಮಹಿಳಾ ಪ್ರಾತಿನಿಧ್ಯ ಹೈಕಮಾಂಡ್ ತೀರ್ಮಾನಿಸಲಿದೆ: ಸಿಎಂ ಡಿ. ಕೆ. ಶಿವಕುಮಾರ್ ತಿಪಟೂರು | ಕೆಎಸ್​ಆರ್​ಟಿಸಿ ಬಸ್ ರೂಪದಲ್ಲಿ ಬಂದ ಮೃತ್ಯು: ಭೀಕರ ಅಪಘಾತದಲ್ಲಿ ಯುವಕರಿಬ್ಬರು…

ಇತ್ತೀಚಿನ ಸುದ್ದಿ

ರಾಜ್ಯದ ಸ್ವಸಹಾಯ ಗುಂಪು, ಸಣ್ಣ ಉದ್ಯಮಕ್ಕೆ ಸಿಗಲಿದೆ ವಾಲ್‌ಮಾರ್ಟ್‌ ಬಲ: ಒಪ್ಪಂದಕ್ಕೆ ಸಚಿವ ಡಾ. ಶರಣಪ್ರಕಾಶ್‌ ಸಹಿ

05/11/2025, 14:16

* ವಿಮಾನ ನಿಲ್ದಾಣದಲ್ಲಿ ತಲೆ ಎತ್ತಲಿದೆ ವಿಶೇಷ ಸ್ವಸಹಾಯ ಗುಂಪುಗಳ ಉತ್ಪನ್ನ ಮಳಿಗೆ

* ವಿದೇಶಿ ಮಾರುಕಟ್ಟೆಯಲ್ಲೂ ಪ್ರದರ್ಶನವಾಗಲಿದೆ ನಾಡಿನ ಉತ್ಪನ್ನಗಳು

ಬೆಂಗಳೂರು(reporterkarnataka.com):ಕರ್ನಾಟಕದಾದ್ಯಂತ ಮಹಿಳಾ ನೇತೃತ್ವದ ಸ್ವಸಹಾಯ ಗುಂಪುಗಳಿಗೆ (SHGs) ಈಗ ಜಾಗತಿಕ ಮಾರುಕಟ್ಟೆಯಲ್ಲಿಯೂ ತಮ್ಮ ಉತ್ಪನ್ನಗಳನ್ನು ಪ್ರದರ್ಶಿಸುವ ಮತ್ತು ಮಾರಾಟ ಮಾಡುವ ಅವಕಾಶ ದೊರೆತಿದೆ.
ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಅಡಿಯಲ್ಲಿ ರಾಷ್ಟ್ರೀಯ ಜೀವನೋಪಾಯ ಮಿಷನ್ (NLM) ಈಗ ಸ್ವಸಾಹಯ ಗುಂಪುಗಳ ಡಿಜಿಟಲ್ ಸಾಮರ್ಥ್ಯ ಹೆಚ್ಚಿಸಲು ಅಂತಾರಾಷ್ಟ್ರೀಯ ಖ್ಯಾತಿಯ “ವಾಲ್‌ಮಾರ್ಟ್‌” ಜೊತೆ ಒಪ್ಪಂದ ಮಾಡಿಕೊಂಡಿದೆ.
ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣಪ್ರಕಾಶ ಆರ್. ಪಾಟೀಲ್ ಮತ್ತು ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅವರು ಮಂಗಳವಾರ “ವಾಲ್‌ಮಾರ್ಟ್‌ ವೃದ್ಧಿ” ಒಪ್ಪಂದಕ್ಕೆ ಸಹಿ ಹಾಕಿದರು.
ಎನ್‌ಎಲ್‌ಎಂ ನಿರ್ದೇಶಕಿ ಆರ್. ಸ್ನೇಹಲ್ ಮತ್ತು ಐ2ಐ ಫೌಂಡೇಶನ್‌ನ ಟ್ರಸ್ಟಿ ಪಾರುಲ್ ಸೋನಿ ಸಹಿ ಹಾಕಿದರು.
ಈ ಒಪ್ಪಂದದ ಅವಧಿ ಮೂರು ವರ್ಷಗಳಾಗಿರುತ್ತದೆ. ವಾಲ್ಮಾರ್ಟ್ ವೃದ್ಧಿಯ ಅನುಷ್ಠಾನ ಪಾಲುದಾರರಾದ “ಐಡಿಯಾಸ್ ಟು ಇಂಪ್ಯಾಕ್ಟ್” ಫೌಂಡೇಶನ್ ಮೂಲಕ ಸ್ವಸಹಾಯ ಗುಂಪುಗಳಿಗೆ ಉಚಿತ ಡಿಜಿಟಲ್ ಕಲಿಕೆ ತರಬೇತಿ, ವ್ಯಾಪಾರ ಪರಿಕರ ಮತ್ತು ಮಾರ್ಗದರ್ಶನ ದೊರೆಯಲಿದೆ.
ಫ್ಲಿಪ್‌ಕಾರ್ಟ್ ಮತ್ತು ವಾಲ್‌ಮಾರ್ಟ್‌ ಸಂಸ್ಥೆಯ ಮಾರುಕಟ್ಟೆ ಜೊತೆ ಇ-ಕಾಮರ್ಸ್ ಸಂಪರ್ಕವನ್ನು ಸಾಧಿಸಲು ಈ ಒಪ್ಪಂದ ಅವಕಾಶ ಕಲ್ಪಿಸುತ್ತಿದೆ. ಸ್ವಸಹಾಯ ಗುಂಪುಗಳಿಗೆ ಡಿಜಿಟಲ್ ವ್ಯವಸ್ಥೆ, ಇ-ಕಾಮರ್ಸ್ ಮತ್ತು ಮಾರ್ಕೆಟಿಂಗ್ ಮತ್ತು ಇತರ ಸಾಮರ್ಥ್ಯಗಳಲ್ಲಿ ವಿಶೇಷ ತರಬೇತಿ ದೊರೆಯಲಿದೆ.
“ಈ ಒಪ್ಪಂದದಿಂದ ಸ್ವಸಹಾಯ ಗುಂಪುಗಳಿಗೆ ಹೆಚ್ಚಿನ ಅನುಕೂಲವಾಗಲಿದೆ. ಹೊಸ ಮಾರುಕಟ್ಟೆಗಳಿಗೆ ಅವಕಾಶ ದೊರೆಯಲಿದೆ. ಸಾವಿರಾರು ಮಹಿಳೆಯರಿಗೆ ಉತ್ತಮ ಆದಾಯ ದೊರೆಯಲಿದೆ. ಈ ಹಿಂದೆ, ಸ್ವಸಹಾಯ ಗುಂಪುಗಳಿಗೆ ಡಿಜಿಟಲ್ ಮಾರ್ಕೆಟಿಂಗ್ ಕೊರತೆಯಿತ್ತು. ವಾಲ್ಮಾರ್ಟ್ ವೃದ್ಧಿಯ ಬೆಂಬಲದೊಂದಿಗೆ, ಅವರ ಉತ್ಪನ್ನಗಳನ್ನು ಜಾಗತಿಕ ಮಟ್ಟದಲ್ಲಿಯೂ ಪ್ರದರ್ಶಿಸಬಹುದು ಎಂದು ಡಾ. ಶರಣಪ್ರಕಾಶ್‌ ಪಾಟೀಲ್‌ ತಿಳಿಸಿದರು.
ಡಾ. ಶಾಲಿನಿ ರಜನೀಶ್‌ ಮಾತನಾಡಿ, ಈ ಒಪ್ಪಂದವು ನಮ್ಮ ಕರ್ನಾಟಕದ ಸ್ವಸಹಾಯ ಗುಂಪುಗಳ ಮಹಿಳೆಯರಿಗೆ ಹೆಚ್ಚು ನೆರವಾಗಲಿದೆ. ಇಲ್ಲಿಯವರೆಗೆ, ಅವರ ಉತ್ಪನ್ನಗಳನ್ನು ಇಲಾಖಾ ಕಾರ್ಯಕ್ರಮಗಳಲ್ಲಿ ಮಾತ್ರ ಮಾರಾಟ ಮಾಡಲಾಗುತ್ತಿತ್ತು. ಈಗ ಇದರ ವಿಸ್ತಾರ ಹೆಚ್ಚಾಗಿದೆ. ವರ್ಷವಿಡೀ ಮಾರಾಟಕ್ಕೆ ಅವಕಾಶ ದೊರೆಯುತ್ತದೆ ಎಂದು ಹೇಳಿದರು.
ವಾಲ್ಮಾರ್ಟ್‌ನ ಹಿರಿಯ ಉಪಾಧ್ಯಕ್ಷ ಜೇಸನ್ ಫ್ರೆಮ್‌ಸ್ಟಾಡ್ ಮಾತನಾಡಿ, ಸ್ವಸಹಾಯ ಗುಂಪುಗಳ ಉತ್ಪನ್ನಗಳನ್ನು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರದರ್ಶಿಸಲು ಅವಕಾಶ ದೊರೆಯಲಿದೆ ಎಂದರು.

*ವಿಮಾನ ನಿಲ್ದಾಣದಲ್ಲಿ ವಿಶೇಷ ಕೇಂದ್ರ*
ದೇಶೀಯ ಮತ್ತು ಅಂತಾರಾಷ್ಟ್ರೀಯ ಪ್ರಯಾಣಿಕರನ್ನು ಆಕರ್ಷಿಸಲು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಶೇಷ ಸ್ವಸಹಾಯ ಗುಂಪುಗಳ ಉತ್ಪನ್ನಗಳ ಕೇಂದ್ರವನ್ನು ಸ್ಥಾಪಿಸಲಾಗುವುದು ಎಂದು ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್‌ ಪ್ರಕಟಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು