11:11 AM Friday27 - February 2026
ಬ್ರೇಕಿಂಗ್ ನ್ಯೂಸ್
ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ… ಖಾಲಿಯಿರುವ ಹುದ್ದೆಗಳ ಹಂತ ಹಂತವಾಗಿ ಭರ್ತಿ: ಕಾರ್ಕಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಿಎಂ, ಡಿಸಿಎಂ ಕುರ್ಚಿ ಕಾಳಗದಲ್ಲಿ ಬ್ಯುಸಿ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೊನ್ನಾರು ರಂಗೋತ್ಸವ: 26ರ ವರೆಗೆ ಕಲಾಸಕ್ತರಿಗೆ ನಾಟಕ ವೀಕ್ಷಿಸುವ ಸದಾವಕಾಶ ಇಬ್ಬರು ಅಂತರ್ ರಾಜ್ಯ ಗಾಂಜಾ ಮಾರಾಟಗಾರರ ಸಹಿತ 4 ಮಂದಿ ಬಂಧನ: 12… ಯುವ ಕಾಂಗ್ರೆಸ್ಸಿಗರು ಬೇಷರತ್ ಕ್ಷಮೆ ಕೇಳಲಿ: ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಧೀರಜ್… ಸಿದ್ದಾಪುರ: ವಾಹನಗಳ ಮೇಲೆ ಮುಂದುವರೆದ ಕಾಡಾನೆ ದಾಳಿ; ಕೂದಲು ಎಳೆ ಅಂತರದಲ್ಲಿ ಕಾರ್ಮಿಕರು… ಪಿರಿಯಾಪಟ್ಟಣದ ರಾಷ್ಟ್ರೀಯ ಹೆದ್ದಾರಿ 275 ನಲ್ಲಿ ಅರಣ್ಯ ಬೆಂಕಿಗೆ ಅಹುತಿ:ಅಪಾರ ಪ್ರಮಾಣದ ಬಿದಿರು… ಸಿದ್ದಾಪುರ ಸಮೀಪದ ಕರಡಿಗೋಡು ಗ್ರಾಮದಲ್ಲಿ ವಾಹನ ಡಿಕ್ಕಿ: ಕಾಡುಕೋಣ ಕಾಲು ಮುರಿತ

ಇತ್ತೀಚಿನ ಸುದ್ದಿ

ಸ್ಟೀಲ್ ಸಿಟಿ ಮ್ಯಾರಥಾನ್: ವಾಸವಿ ವಿದ್ಯಾಲಯದ ವಿದ್ಯಾರ್ಥಿಗಳು ಭಾಗಿ

04/08/2024, 19:05

ಗಣೇಶ ಇನಾಂದಾರ ಬಳ್ಳಾರಿ

info.reporterkarnataka@gmail.com

ಬಳ್ಳಾರಿ ನಗರದಲ್ಲಿನ ಬಳ್ಳಾರಿ ಸೈರ್ಲೆಸ್ಟ್ ರನರ್ಸ್ ಫೌಂಡೇಶನ್ ಮತ್ತು ಜೆ ಎಸ್ ಡಬ್ಲು ಸಹಯೋಗದೊಂದಿಗೆ ಅಗಸ್ಟ್ 4ರಂದು ಸ್ಟೀಲ್ ಸಿಟಿ ಮ್ಯಾರಥಾನ್ ಹಮ್ಮಿಕೊಂಡಿದ್ದು ಇದರಲ್ಲಿ ವಾಸವಿ ವಿದ್ಯಾಲಯದ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ಶಾಲೆಯ ವಿದ್ಯಾರ್ಥಿಗಳು ಮ್ಯಾರಥಾನ್ ನಲ್ಲಿ ತೋರಿದ ಉತ್ಸಾಹ ಮತ್ತು ಕ್ರೀಡಾಸಕ್ತಿಯಿಂದ ಶ್ಲಾಘನೆಗೆ ಪಾತ್ರರಾಗಿದ್ದಾರೆ. ಈ ಓಟದಿಂದ ಮಕ್ಕಳಲ್ಲಿ ದೈಹಿಕ ಸುಸ್ಥಿತಿಯನ್ನು ಮಾನಸಿಕ ಆರೋಗ್ಯವನ್ನು ಉತ್ತೇಜಿಸುವ ಉದ್ದೇಶ ಹೊಂದಿತ್ತು.
ವಿದ್ಯಾರ್ಥಿಗಳು ತಮ್ಮ ದೈಹಿಕ ಸಾಮರ್ಥ್ಯವನ್ನು ತೋರಿಸುದಷ್ಟೇ ಅಲ್ಲದೇ, ಆರೋಗ್ಯಕರ ಜೀವನ ಶೈಲಿಯನ್ನು ಅನುಸರಿಸುವ ಮಹತ್ವದ ಅನುಭವವನ್ನು ಹೊಂದಿದರು. ಸಾಧನೆ ಮತ್ತು ಆತ್ಮ ವಿಶ್ವಾಸದ ಭಾವನೆಯನ್ನು ಶಾಲೆಯ ಮಕ್ಕಳು ಹೊಂದಿದ್ದರು. ಶಿಕ್ಷಕರು ಮತ್ತು ಪೋಷಕರು ವಿದ್ಯಾರ್ಥಿಗಳು ಭಾಗವಹಿಸುವಿಕೆಯನ್ನು ಹೆಮ್ಮೆ ಪಟ್ಟರು. ಮಕ್ಕಳ ಸಮಗ್ರ ವ್ಯಕ್ತಿತ್ವ ವಿಕಾಸಕ್ಕೆ ಪೂರಕವಾಗಿ ಬೌದ್ಧಿಕ ಉನ್ನತಿಗೆ ಸಮಾನ ಪ್ರಾಮುಖ್ಯತೆಯನ್ನು ನೀಡುತ್ತಿದೆ ಮತ್ತು ವಿದ್ಯಾರ್ಥಿಗಳ ಉತ್ಸಾಹದ ಪ್ರತಿಕ್ರಿಯೆಯು ಸಂತೃಪ್ತವಾಗಿದೆ ಎಂದು ವಾಸವಿ ಎಜ್ಯುಕೇಷನ್ ಟ್ರಸ್ಟ್ ನ ಕಾರ್ಯದರ್ಶಿಗಳಾದ ಪಿ. ಎನ್. ಸುರೇಶ್ ರವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.
ಓಟವು ಕ್ರೀಡೆಗಳಲ್ಲಿ ಅತ್ಯುತ್ತಮವಾದದ್ದು, ಓಟದ ಮುಖಾಂತರ ಮಕ್ಕಳಲ್ಲಿ ಆತ್ಮಸ್ಥೈರ್ಯ ಹಾಗೂ ಮನೋಬಲವನ್ನು ಹೆಚ್ಚಿಸುತ್ತದೆ. ನಮ್ಮ ಶಾಲೆಯಲ್ಲಿ ಕ್ರೀಡೆಗಳಿಗೆ ಹೆಚ್ಚು ಮಹತ್ವವನ್ನು ನೀಡುವುದರ ಮೂಲಕ ವಿದ್ಯಾರ್ಥಿಗಳಿಗೆ ಕ್ರೀಡಾಕೂಟಗಳು ಹಾಗೂ ಕ್ರೀಡಾಪಟುಗಳ ಬಗ್ಗೆ ಸವಿವರವಾಗಿ ಶಾಲೆಯ ಮುಖ್ಯಗುರುಗಳಾದ ವಿರೇಶ್ ರವರು ತಮ್ಮ ಮಾತುಗಳಲ್ಲಿ ತಿಳಿಸಿಕೊಟ್ಟರು.
ಈ ಮ್ಯಾರಥಾನ್ ನಲ್ಲಿ ಶಾಲೆಯ ವಿದ್ಯಾರ್ಥಿಗಳು
5 ಕಿಮೀ ಓಟಕ್ಕೆ ನೊಂದಾಯಿಸಿಕೊಂಡಿದ್ದರು. ವಿದ್ಯಾರ್ಥಿಗಳು ದೈಹಿಕ ಆರೋಗ್ಯಕ್ಕೆ ವಿದ್ಯಾಭ್ಯಾಸದಷ್ಟೇ ಪ್ರಾಮುಖ್ಯತೆಯನ್ನು ನೀಡುವ ಸಮತೋಲನಾತ್ಮಕ ಶಿಕ್ಷಣದತ್ತ ಶ್ರೀ ವಾಸವಿ ವಿದ್ಯಾಲಯವು 42 ವರ್ಷಗಳಿಂದ ಬದ್ದತೆಯನ್ನು ಹೊಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು