ಇತ್ತೀಚಿನ ಸುದ್ದಿ
ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಶಾಶ್ವತವಾಗಿ ಕುಡಿಯುವ ನೀರು ಪೂರೈಸಲು ಕ್ರಮ: ಡಿಸಿಎಂ ಡಿ.ಕೆ.ಶಿವಕುಮಾರ್
12/08/2025, 19:36

ಬೆಂಗಳೂರು(reporterkarnataka.com): ಎತ್ತಿನಹೊಳೆ ಯೋಜನೆಯಡಿ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಿ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಮೊದಲ ಆದ್ಯತೆ ಮೇರೆಗೆ ಶಾಶ್ವತವಾಗಿ ಕುಡಿಯುವ ನೀರು ಪೂರೈಸಲು ಕ್ರಮಕೈಗೊಳ್ಳಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.
ಅವರು ಇಂದು ವಿಧಾನಸಭಾ ಅಧಿವೇಶನದಲ್ಲಿ ಸದಸ್ಯರಾದ ಜಿ.ಕೆ.ವೆಂಕಟಶಿವಾ ರೆಡ್ಡಿ ಅವರು ಗಮನ ಸೆಳೆಯುವ ಸೂಚನೆ ವೇಳೆಯಲ್ಲಿ ಪ್ರಸ್ತಾಪಿಸಿದ ವಿಷಯಕ್ಕೆ ಮಾಹಿತಿ ನೀಡಿದರು.