7:28 PM Thursday18 - December 2025
ಬ್ರೇಕಿಂಗ್ ನ್ಯೂಸ್
ಉರುಳಿಗೆ ಸಿಲುಕಿ ಹುಲಿ ಸಾವಿನ ಪ್ರಕರಣ: ಆರೋಪಿಗಳ ಪತ್ತೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ… ಇಂಜಿನಿಯರಿಂಗ್ ಸೀಟುಗಳನ್ನು ನುಂಗುತ್ತಿರುವ ಖಾಸಗಿ ವಿಶ್ವವಿದ್ಯಾಲಯಗಳು: ಸದನದ ಗಮನ ಸೆಳೆದ ಶಾಸಕ ಡಾ.… Kodagu | ಭಾಗಮಂಡಲ ಮೀಸಲು ಅರಣ್ಯದಲ್ಲಿ ಅಕ್ರಮ ಜಿಂಕೆ ಬೇಟೆ: ಆರೋಪಿಗಳು ಅರಣ್ಯ… 1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ…

ಇತ್ತೀಚಿನ ಸುದ್ದಿ

ಸ್ಥಿರಾಸ್ತಿ; ಕೋಲಾರ ಜಿಲ್ಲೆಯಲ್ಲಿ ಎನಿವೇರ್ ನೋಂದಣಿ ವ್ಯವಸ್ಥೆ ಜಾರಿ: ಜಿಲ್ಲಾಧಿಕಾರಿ ಅಕ್ರಂ ಪಾಷ

30/08/2024, 14:07

ಶಬ್ಬೀರ್ ಅಹಮ್ಮದ್ ಕೋಲಾರ

info.reporterkarnataka@gmail.com

ನಾಗರೀಕ ಕೇಂದ್ರಿತ ಸುಧಾರಣೆ ಭಾಗವಾಗಿ ಪ್ರಸಕ್ತ 2024-25ನೇ ಸಾಲಿನ ಆಯವ್ಯಯ ಭಾಷಣದಲ್ಲಿ ಘೋಷಿಸಿರುವಂತೆ ಕೋಲಾರ ಜಿಲ್ಲೆಯಾದ್ಯಂತ ಸ್ಥಿರಾಸ್ತಿಯನ್ನು ಜಿಲ್ಲೆಯ ಯಾವುದೇ ಉಪ ನೊಂದಣಿ ಕಚೇರಿಯಲ್ಲಿ ನೋಂದಣಿ ಮಾಡಲು ಅನುಕೂಲವಾಗುವಂತೆ “ಎನಿವೇರ್ ನೋಂದಣಿ” ವ್ಯವಸ್ಥೆ ಜಾರಿಗೆ ತರಲಾಗಿದೆ ಎಂದು ಜಿಲ್ಲಾಧಿಕಾರಿ ಅಕ್ರಂ ಪಾಷ ಹೇಳಿದ್ದಾರೆ.
ನೋಂದಣಿ ಕಾಯ್ದೆ-1908ರ ಕಲಂ (5) ಹಾಗೂ ಕಲಂ(6)ರಂತೆ 2011ರಲ್ಲಿ ಬೆಂಗಳೂರು ನಗರ ಜಿಲ್ಲೆಯಲ್ಲಿ ಮತ್ತು ಕಳೆದ ಮಾರ್ಚ್ ಮಾಹೆಯಲ್ಲಿ ತುಮಕೂರು ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ಈ ವ್ಯವಸ್ಥೆಯನ್ನು ಪ್ರಾಯೋಗಿಕವಾಗಿ ಜಾರಿಗೆ ತರಲಾಗಿತ್ತು. ಅಲ್ಲಿ ಯಶಸ್ವಿಯಾಗಿರುವ ಹಿನ್ನೆಲೆಯಲ್ಲಿ ಇದೀಗ ಎನಿವೇರ್ ನೋಂದಣಿ ವ್ಯವಸ್ಥೆಯನ್ನು ರಾಜ್ಯದ ಎಲ್ಲಾ ಜಿಲ್ಲಾ ಘಟಕವನ್ನು ಒಂದು ಯೂನಿಟ್ ಎಂದು ಪರಿಗಣಿಸಿ ಆ ಜಿಲ್ಲೆಯ ಎಲ್ಲಾ ಉಪ ನೋಂದಣಿ ಕಛೇರಿಗಳಿಗೂ ವಿಸ್ತರಿಸಿ ಸರ್ಕಾರ ಆದೇಶಿಸಿದೆ ಎಂದರು.
ಪ್ರಸ್ತುತ ಸಾರ್ವಜನಿಕರು ಸ್ಥಿರಾಸ್ತಿ ಇರುವ ವ್ಯಾಪ್ತಿಯ ಉಪ ನೋಂದಣಿ ಕಛೇರಿಯಲ್ಲಿ ಮಾತ್ರ ದಸ್ತಾವೇಜನ್ನು ನೋಂದಣಿ ಮಾಡಲು ಅವಕಾಶವಿದೆ. ಎನಿವೇರ್ ನೋಂದಣಿ ವ್ಯವಸ್ಥೆ ಜಾರಿಯಿಂದ ಸಿರಾಸ್ತಿ ಇರುವ ಕೋಲಾರ ಜಿಲ್ಲೆಯ ಯಾವುದಾದರೂ ಉಪ ನೋಂದಣಿ ಕಛೇರಿಯಲ್ಲಿ ದಸ್ತಾವೇಜು
ನೋಂದಾಯಿಸಿಕೊಳ್ಳಬಹುದಾಗಿದೆ.
ಸಾರ್ವಜನಿಕರು ಎನಿವೇರ್ ನೋಂದಣಿ ವ್ಯವಸ್ಥೆಯ
ಸದುಪಯೋಗಪಡಿಸಿಕೊಂಡು ತಮಗೆ ಹತ್ತಿರದ ಅಥವಾ ನೋಂದಣಿಗೆ ಸ್ಲಾಟ್ ಲಭ್ಯವಿರುವಂತಹ ಕಛೇರಿ ಆಯ್ಕೆ ಮಾಡಿಕೊಂಡು ದಸ್ತಾವೇಜನ್ನು ನೋಂದಾಯಿಸಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಅಕ್ರಂ ಪಾಷ ಅವರು ಮನವಿ ಮಾಡಿದ್ದಾರೆ. ಎನಿವೇರ್ ನೋಂದಣಿ ವ್ಯವಸ್ಥೆಯು ಸಾರ್ವಜನಿಕರಿಗೆ ಹಲವಾರು ರೀತಿಯಲ್ಲಿ ಉಪಯುಕ್ತವಾಗಿದ್ದು, ನೋಂದಣಿ ಪ್ರಕ್ರಿಯೆ ಸುಲಭವಾಗುವುದಲ್ಲದೆ ಸಮಯವು ಸಹ ಉಳಿತಾಯವಾಗಲಿದೆ. ನೋಂದಣಿಯಲ್ಲಿ ಪಾರದರ್ಶಕತೆ ಹೆಚ್ಚಲಿದ್ದು, ವಿಳಂಬವನ್ನು ತಡೆಗಟ್ಟಲಿದೆ. ಸಾರ್ವಜನಿಕರು ಸ್ಲಾಟ್ ಲಭ್ಯವಿರುವಂತಹ ಸಮೀಪದ ನೋಂದಣಿ ಕಚೇರಿಯನ್ನು ಆಯ್ಕೆ ಮಾಡಿಕೊಂಡು ದಸ್ತಾವೇಜನ್ನು ನೋಂದಾಯಿಸಬಹುದು. ಇದರಿಂದ ಉಪ ನೋಂದಣಿ ಕಛೇರಿಗಳಲ್ಲಿ ಜನದಟ್ಟಣೆ ಕಡಿಮೆಯಾಗುವುದಲ್ಲದೆ ಕಛೇರಿ ಸಿಬ್ಬಂದಿಗಳ ಮೇಲಿನ ಕೆಲಸದ ಒತ್ತಡ ಸಹ ಕಡಿಮೆಯಾಗಲಿದೆ ಎಂದು ಅವರು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು