3:26 PM Wednesday2 - September 2026
ಬ್ರೇಕಿಂಗ್ ನ್ಯೂಸ್
ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ

ಇತ್ತೀಚಿನ ಸುದ್ದಿ

ಚುಡಾಯಿಸಿದ್ದನ್ನು ಪ್ರಶ್ನಿಸಿದ್ದಕ್ಕೆ ವಿದ್ಯಾರ್ಥಿನಿ ಮನೆ ಮೇಲೆ ಕಲ್ಲು ತೂರಾಟ: ಚಾಕುವಿನಿಂದ ಹಲ್ಲೆ; ಕತ್ತು ಕೊಯ್ಯಲು ಯತ್ನ

02/07/2026, 21:12

ಚಿಕ್ಕಬಳ್ಳಾಪುರ(reporterkarnataka.com):ಜಿಲ್ಲೆಯ ಚಿಂತಾಮಣಿ ನಗರದಲ್ಲಿ ವಿದ್ಯಾರ್ಥಿನಿಯನ್ನು ಚುಡಾಯಿಸಿದ್ದನ್ನು ಪ್ರಶ್ನಿಸಿದ್ದಕ್ಕೆ ಆಕ್ರೋಶಗೊಂಡ ಪುಂಡರ ಗುಂಪೊಂದು ವಿದ್ಯಾರ್ಥಿನಿಯ ಮನೆಗೆ ನುಗ್ಗಿ ದಾಂಧಲೆ ನಡೆಸಿ, ಚಾಕುವಿನಿಂದ ಹಲ್ಲೆ ನಡೆಸಿದ ಘಟನೆ ನಡೆದಿದೆ.
ಗಾಯಗೊಂಡ ವಿದ್ಯಾರ್ಥಿನಿಗೆ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದ್ದು, ಪ್ರಕರಣ ಸಂಬಂಧ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಮಾಹಿತಿಯ ಪ್ರಕಾರ, ವಿದ್ಯಾರ್ಥಿನಿ ಮೇಘನಾ ತನ್ನ ತಂಗಿಯೊಂದಿಗೆ ಹೋಗುತ್ತಿದ್ದ ವೇಳೆ ಕೆಲ ಯುವಕರು ಚುಡಾಯಿಸಿದ್ದಾರೆ ಎನ್ನಲಾಗಿದೆ. ಇದಕ್ಕೆ ಮೇಘನಾ ಆಕ್ಷೇಪ ವ್ಯಕ್ತಪಡಿಸಿ, ಒಬ್ಬ ಯುವಕನಿಗೆ ಕಪಾಳಕ್ಕೆ ಹೊಡೆದಿದ್ದಾಳೆ ಎಂದು ಹೇಳಲಾಗಿದೆ. ಇದರಿಂದ ಕೆರಳಿದ ಯುವಕರ ಗುಂಪು ಬಳಿಕ ಮೇಘನಾ ಮನೆಗೆ ತೆರಳಿ ಗಲಾಟೆ ನಡೆಸಿದೆ. ಮನೆ ಮೇಲೆ ಕಲ್ಲು ತೂರಾಟ ನಡೆಸಿ, ದಾಂಧಲೆ ಸೃಷ್ಟಿಸಿದ ಪುಂಡರು ಮೇಘನಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಮನೆಗೆ ನುಗ್ಗಿದ ಪುಂಡರು ವಿದ್ಯಾರ್ಥಿನಿಯ ಮೇಲೆ ಹಲ್ಲೆ ನಡೆಸಿ ಕತ್ತು ಕೊಯ್ಯಲು ಕೂಡ ಯತ್ನಿಸಿದ್ದು, ಕೂಡಲೇ ಸ್ಥಳೀಯರು ಆಕೆಯನ್ನು ರಕ್ಷಿಸಿದ್ದಾರೆ ಎನ್ನಲಾಗಿದೆ. ಹಲ್ಲೆಯಲ್ಲಿ ಗಾಯಗೊಂಡ ಮೇಘನಾಳನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ವೇಳೆ ಮನೆಯಲ್ಲಿದ್ದ ಕುಟುಂಬಸ್ಥರು ಆತಂಕಕ್ಕೆ ಒಳಗಾಗಿದ್ದಾರೆ.ಪ್ರಾಥಮಿಕ ಮಾಹಿತಿಯ ಪ್ರಕಾರ, ಹಲ್ಲೆ ನಡೆಸಿದ ಯುವಕರು ಅದೇ ಊರಿನ ನಿವಾಸಿಗಳಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಪ್ರಕ್ರಿಯೆ ನಡೆಯುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು