10:39 AM Friday6 - February 2026
ಬ್ರೇಕಿಂಗ್ ನ್ಯೂಸ್
ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ* ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7… ಎಸಿ ಕೋರ್ಟ್ ಕೇಸ್: ಎರಡೂವರೆ ವರ್ಷದಲ್ಲಿ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದೇವೆ: ಸಚಿವ ಕೃಷ್ಣ ಬೈರೇಗೌಡರು… ತೀರ್ಥಹಳ್ಳಿ ಸಮೀಪದ ಮೇಗರವಳ್ಳಿಯಲ್ಲಿ ಭೀಕರ ಅಪಘಾತ: ಗಾಯಾಳು ಮಹಿಳೆ ಸಾವು Madikeri | ಕುಶಾಲನಗರ ಬಳಿ ಬೈಕ್ ಡಿಕ್ಕಿ: ಪಾದಚಾರಿ ಯುವಕ ದಾರುಣ ಸಾವು ಪೊಲೀಸರಿಗೆ ತಲೆನೋವಾದ ಕೇರಳದ ‘ಮಲ್ಲು’ ಗ್ಯಾಂಗ್: ಚಿನ್ನದ ಉದ್ಯಮಿಗಳೇ ಇವರ ಟಾರ್ಗೆಟ್ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ಕೇಂದ್ರ ವಿತ್ತ ಸಚಿವೆಗೆ ಕೇರಳ ಸಿಎಂ… ವರನಿಗೆ ಚಾಕು ಇರಿದ ಕೇಸ್‌ಗೆ ಬಿಗ್ ಟ್ವಿಸ್ಟ್ : ಸ್ಕೆಚ್ ಹಾಕಿದ್ದು ಅವರಲ್ಲ,… ಕಂಬನಿ ನಡುವೆ ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿ.ಜೆ ರಾಯ್‌ ಅಂತಿಮವಿಧಿ: ಬನ್ನೇರುಘಟ್ಟದ ಕಾಸಾಗ್ರೌಂಡ್…

ಇತ್ತೀಚಿನ ಸುದ್ದಿ

ಸಾರ್ವಜನಿಕ ಆರೋಗ್ಯ ಸುರಕ್ಷತೆಗಾಗಿ ಬೀದಿಬದಿ, ಹೋಟೆಲ್ ಆಹಾರದ ಮೇಲೆ ಕಟ್ಟುನಿಟ್ಟಿನ ನಿಗಾ ಅಗತ್ಯ: ಸಚಿವ ಡಾ. ಶರಣ್‌ ಪ್ರಕಾಶ್‌ ಪಾಟೀಲ್

07/06/2025, 20:21

*ಬೆಂಗಳೂರಿನ ನಿಮ್ಹಾನ್ಸ್‌ ನಲ್ಲಿ ವಿಶ್ವ ಆಹಾರ ಸುರಕ್ಷತಾ ದಿನಾಚರಣೆ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಜೆ.ಪಿ. ನಡ್ಡಾ ಭಾಗಿ*

ಬೆಂಗಳೂರು(reporterkarnataka.com): ಆಹಾರದ ಗುಣಮಟ್ಟದ ಮೇಲೆ ಕಠಿಣ ನಿಯಂತ್ರಣ ಅಗತ್ಯವಿದೆ. ಬೀದಿಬದಿ ಮತ್ತು ಹೋಟೆಲ್ ಆಹಾರದ ಗುಣಮಟ್ಟವನ್ನು ರಾಜ್ಯ ಮತ್ತು ಕೇಂದ್ರ ಆಹಾರ ಮತ್ತು ಔಷಧ ಅಧಿಕಾರಿಗಳು ನಿರಂತರವಾಗಿ ಪರಿಶೀಲಿಸಬೇಕು. ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಇದು ಅತ್ಯಗತ್ಯ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್‌ ಹೇಳಿದರು.
ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ನಿಮ್ಹಾನ್ಸ್‌ನಲ್ಲಿ ಶನಿವಾರ ಆಯೋಜಿಸಿದ್ದ ವಿಶ್ವ ಆಹಾರ ಸುರಕ್ಷತಾ ದಿನಾಚರಣೆ ಕಾರ್ಯಕ್ರಮದಲ್ಲಿ ಸಚಿವರು ಮಾತನಾಡಿದರು.
ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಮತ್ತು ಇಲಾಖೆಯ ಕಾರ್ಯದರ್ಶಿ ಪುಣ್ಯ ಸಲೀಲಾ ಶ್ರೀವಾಸ್ತವ ಅವರ ಸಮ್ಮುಖದಲ್ಲಿ ಭಾಷಣ ಮಾಡಿದ ಸಚಿವ ಡಾ. ಪಾಟೀಲ್‌, ಅನೈರ್ಮಲ್ಯ ಮತ್ತು ಕಲಬೆರಕೆ ಆಹಾರದಿಂದ ಉಂಟಾಗುವ ಗಂಭೀರ ಆರೋಗ್ಯ ಅಪಾಯಗಳನ್ನು ತಡೆಗಟ್ಟಬೇಕಾಗಿದೆ ಎಂದರು.
“ಸಾರ್ವಜನಿಕ ಸ್ಥಳಗಳಲ್ಲಿ ಮಾರಾಟವಾಗುವ ಕಡಿಮೆ ಗುಣಮಟ್ಟದ ಆಹಾರದಿಂದ ಮಕ್ಕಳು ಮತ್ತು ವೃದ್ಧರ ಮೇಲೆ ಹೆಚ್ಚಾಗಿ ಪರಿಣಾಮ ಬೀರುತ್ತಿದೆ. ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರಿ ಸಂಸ್ಥೆಗಳಿಂದ ಕಟ್ಟುನಿಟ್ಟಿನ ಜಾರಿ ಅತ್ಯಗತ್ಯ” ಎಂದು ಅವರು ಕರೆ ನೀಡಿದರು.

ಮಾರಾಟಗಾರರು ಆಹಾರದ ರುಚಿ ಮತ್ತು ಅದನ್ನು ಚೆಂದಗಾಣಿಸಲು ಆಗಾಗ್ಗೆ ನಿಷೇಧಿತ ಬಣ್ಣಗಳು ಮತ್ತು ರಾಸಾಯನಿಕಗಳನ್ನು ಬಳಸುತ್ತಾರೆ, ಇದು ಆರೋಗ್ಯ ತೊಡಕುಗಳಿಗೆ ಕಾರಣವಾಗುತ್ತದೆ. ಕೆಲವೊಮ್ಮೆ ಮಾರಕವೂ ಆಗಿರಬಹುದು. ಬೀದಿ ಆಹಾರಕ್ಕಿಂತ ಮನೆಯಲ್ಲಿ ತಯಾರಿಸಿದ ಊಟವನ್ನು ಆಯ್ಕೆ ಮಾಡಿಕೊಳ್ಳಬೇಕು. ಯುವಕರು ಮತ್ತು ಮಕ್ಕಳು ಇದನ್ನು ಅಭ್ಯಾಸ ಮಾಡಿಕೊಳ್ಳಬೇಕು. ನಮ್ಮ ಪೂರ್ವಜರು ಆರೋಗ್ಯಕರ ಆಹಾರ ಪದ್ಧತಿಗಳನ್ನು ಕಲಿಸಿದ್ದಾರೆ. ನಾವು ಆ ಪದ್ಧತಿಗಳಿಗೆ ಮರಳುವ ಸಮಯ ಇದು. ಸರಿಯಾಗಿ ತಿನ್ನುವುದು ಪ್ರಗತಿಪರ ರಾಷ್ಟ್ರದ ಸಂಕೇತ” ಎಂದು ಸ್ವತಃ ವೈದ್ಯರಾಗಿರುವ ಡಾ. ಪಾಟೀಲ್ ತಿಳಿಸಿದ್ದಾರೆ.
ಶಾಲಾ ಮಕ್ಕಳು ಮತ್ತು ಸಮುದಾಯಗಳಲ್ಲಿ ಆಹಾರ ಸುರಕ್ಷತೆ, ನೈರ್ಮಲ್ಯ ಮತ್ತು ಪೋಷಣೆಯ ಕುರಿತು ಜಾಗೃತಿ ಮೂಡಿಸುವ ಗುರಿಯನ್ನು ಹೊಂದಿರುವ ಭಾರತೀಯ ಆಹಾರ ಸುರಕ್ಷತೆ ಮತ್ತು ಮಾನದಂಡಗಳ ಪ್ರಾಧಿಕಾರ (FSSAI) ಹೊರತಂದಿರುವ ‘ಈಟ್‌ ರೈಟ್‌ ಆಕ್ಟಿವಿಟಿ ಬುಕ್‌ʼ ಅನ್ನು ಸಚಿವರು ಬಿಡುಗಡೆ ಮಾಡಿದರು.
ಆರೋಗ್ಯಕರ ಆಹಾರ ಪದ್ಧತಿಗಳ ಕುರಿತು ತರಬೇತಿ, ಪರೀಕ್ಷೆ ಮತ್ತು ಸಾರ್ವಜನಿಕ ಜಾಗೃತಿ ಮೂಡಿಸುವ ‘ಫುಡ್‌ ಸೇಫ್ಟಿ ಆನ್ ವೀಲ್ಸ್’ ಮೊಬೈಲ್ ಘಟಕವನ್ನು ಉದ್ಘಾಟಿಸಿದರು.
ಕೇಂದ್ರ ಸಚಿವ ಜೆ.ಪಿ. ನಡ್ಡಾ ಅಧ್ಯಕ್ಷತೆಯಲ್ಲಿ ನಡೆದ ನಿಮ್ಹಾನ್ಸ್‌ನ ಸಂಸ್ಥೆ ಮತ್ತು ಆಡಳಿತ ಮಂಡಳಿ ಪದಾಧಿಕಾರಿಗಳ ಸಭೆಗಳೊಂದಿಗೆ ಕಾರ್ಯಕ್ರಮ ಸಂಪನ್ನಗೊಂಡಿತು.
ಸಂಸದರಾದ ಪಿ.ಸಿ. ಮೋಹನ್ ಮತ್ತು ಲೆಹರ್ ಸಿಂಗ್ ಮತ್ತು ನಿಮ್ಹಾನ್ಸ್ ನಿರ್ದೇಶಕಿ ಡಾ. ಪ್ರತಿಮಾ ಮೂರ್ತಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು