1:02 PM Thursday20 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಇರಾನ್‌ನಲ್ಲಿ ನಾಪತ್ತೆಯಾಗಿದ್ದ ಚಿಕ್ಕಮಗಳೂರಿನ ಕೊಪ್ಪ ಮೂಲದ ವಿದ್ಯಾರ್ಥಿ ಪತ್ತೆ: ನಿಟ್ಟುಸಿರು ಬಿಟ್ಟ ಹೆತ್ತವರು

05/03/2026, 15:21

ಚಿಕ್ಕಮಗಳೂರು(reporterkarnataka.com):ಇರಾನ್ ದೇಶದ ಮರ್ಚಂಟ್ ನೇವಿಯಲ್ಲಿ ತರಬೇತಿಗೆ ತೆರಳಿದ್ದ ಜಿಲ್ಲೆಯ ವಿದ್ಯಾರ್ಥಿ ನಿಶ್ಚಿತ್ ಸುರಕ್ಷಿತವಾಗಿದ್ದಾನೆ ಎಂದು ತಿಳಿದು ಬಂದಿದೆ. ಇರಾನ್ ಯುದ್ಧ ಆರಂಭಗೊಂಡ ಬಳಿಕ ಆತ ಸಂಪರ್ಕಕ್ಕೆ ಸಿಗದೆ ನಾಪತ್ತೆಯಾಗಿದ್ದ ಹಿನ್ನೆಲೆಯಲ್ಲಿ ಆತನ ಪೋಷಕರು ಆತಂಕಕ್ಕೊಳಗಾಗಿ ಸರಕಾರದ ನೆರವು ಕೋರಿದ್ದರು. ಈ ವಿಚಾರವನ್ನು ಮಾಧ್ಯಮಗಳ ಮೂಲಕ ತಿಳಿದು ವಿದ್ಯಾರ್ಥಿಯ ಪತ್ತೆಗೆ ಕಾರ್ಯ ಪ್ರವೃತ್ತರಾದ ಅನಿವಾಸಿ ಭಾರತೀಯ ಸಮಿತಿಯ ಮಾಜಿ ಉಪಾಧ್ಯಕ್ಷೆ ಡಾ.ಆರತಿ ಕೃಷ್ಣ ಅವರು ಇರಾನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಸಂಪರ್ಕಿಸಿದ್ದು, ವಿದ್ಯಾರ್ಥಿ ಸುರಕ್ಷಿತವಾಗಿರುವುದನ್ನು ಖಚಿತ ಪಡಿಸಿದ್ದಾರೆ.
ಜಿಲ್ಲೆಯ ಕೊಪ್ಪ ತಾಲೂಕಿನ ಗಡಿಕಲ್ಲು ಗ್ರಾಮದ ನಿವಾಸಿ ಮಹೇಶ್ ಎಂಬವರ ಮಗ ನಿಶ್ಚಿತ್ ಇರಾನ್‌ನಲ್ಲಿ ನಾಪತ್ತೆಯಾಗಿದ್ದ ಯುವಕನಾಗಿದ್ದು, ಈತ ಕಳೆದ 5 ತಿಂಗಳ ಹಿಂದೆ ಇರಾನ್‌ನ ಮರ್ಚಂಟ್ ನೇವಿಯಲ್ಲಿ 5 ತಿಂಗಳ ತರಬೇತಿಗೆ ತೆರಳಿದ್ದ. ಸದ್ಯ ಇಸ್ರೇಲ್, ಅಮೆರಿಕ ಹಾಗೂ ಇರಾನ್ ನಡುವೆ ಯುದ್ಧ ಆರಂಭಗೊಂಡಿದ್ದು, ಯುದ್ಧ ಆರಂಭಕ್ಕೂ ಮುನ್ನ ಪೋಷಕರ ಸಂಪರ್ಕದಲ್ಲಿದ್ದ ನಿಶ್ಚಿತ್ ಯುದ್ಧ ಆರಂಭವಾದ ಬಳಿಕ ಪೋಷಕರ ಸಂಪರ್ಕಕ್ಕೆ ಬಂದಿರಲಿಲ್ಲ. ಈ ಹಿನ್ನೆಲೆಯಲ್ಲಿ ಕೊಪ್ಪದಲ್ಲಿರುವ ಆತನ ಪೋಷಕರು ತೀವ್ರ ಆತಂಕಕ್ಕೊಳಗಾಗಿದ್ದರು. ಅಲ್ಲದೆ ಜಿಲ್ಲಾಡಳಿತ, ರಾಜ್ಯ ಸರಕಾರ ಹಾಗೂ ಕೇಂದ್ರ ಸರಕಾರ ನಿಶ್ಚಿತ್‌ನನ್ನು ಶೀಘ್ರ ಪತ್ತೆ ಹಚ್ಚಿ ಸ್ವದೇಶಕ್ಕೆ ಕರೆ ತರಬೇಕು ಎಂದು ಮನವಿ ಮಾಡಿದ್ದರು. ಸದ್ಯ ನಿಶ್ಚಿತ್ ಇರಾನ್‌ನಲ್ಲಿ ಸುರಕ್ಷಿತವಾಗಿದ್ದಾನೆಂಬ ಖಚಿತ ಮಾಹಿತಿ ಲಭ್ಯವಾಗಿದ್ದು, ಈ ವಿಚಾರ ತಿಳಿದ ನಿಶ್ಷಿತ್ ಪೋಷಕರು ನಿಟ್ಟುಸಿರುವ ಬಿಟ್ಟಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು