7:49 PM Saturday12 - September 2026
ಬ್ರೇಕಿಂಗ್ ನ್ಯೂಸ್
ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;…

ಇತ್ತೀಚಿನ ಸುದ್ದಿ

Student Missing | ಚಿಕ್ಕಮಗಳೂರು: ವಸತಿ ಶಾಲೆಯಿಂದ ಇಬ್ಬರು 9ನೇ ತರಗತಿ ಬಾಲಕರು ನಾಪತ್ತೆ

13/03/2025, 18:16

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ಜಿಲ್ಲೆಯ ತೇಗೂರು ಗ್ರಾಮದಲ್ಲಿರುವ ಎ.ಪಿ.ಜೆ. ಅಬ್ದುಲ್ ಕಲಾಂ ವಸತಿ ಶಾಲೆಯಿಂದ ಇಬ್ಬರು 9ನೇ ತರಗತಿಯ ವಿದ್ಯಾರ್ಥಿಗಳು ತರುಣ್ ಮತ್ತು ಯಶ್ವಿತ್ ಸಾಲಿಯಾನ್ ನಾಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ.
*ಘಟನೆ ವಿವರ:* ನಾಪತ್ತೆಯಾದ ವಿದ್ಯಾರ್ಥಿಗಳು ಕಳೆದ 10 ದಿನಗಳ ಹಿಂದೆ ಮಧ್ಯರಾತ್ರಿ ಶಾಲೆಯಿಂದ ಕಾಣೆಯಾಗಿದ್ದಾರೆ. ಅವರು ಮನೆಗೂ ತೆರಳಿಲ್ಲ, ಅವರ ಆಸರೆಯ ಬಗ್ಗೆ ಯಾವುದೇ ಮಾಹಿತಿ ದೊರೆತಿಲ್ಲ.


ಈ ಹಿಂದೆಯೂ ಈ ಇಬ್ಬರು ಮಕ್ಕಳು ವಸತಿ ಶಾಲೆಯಲ್ಲಿ ಇರಲು ಹಿಂದೇಟು ಹಾಕಿ ಓಡಿ ಹೋಗಿದ್ದ ಬಗ್ಗೆ ಮಾಹಿತಿ ಲಭ್ಯವಾಗಿದೆ.
ಶಾಲಾ ಆಡಳಿತ ಮಂಡಳಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದೆ. ಪೊಲೀಸ್ ತನಿಖೆ ಮುಂದುವರಿಯುತ್ತಿದೆ.
ಈ ಪ್ರಕರಣದ ಕುರಿತು ಪೊಲೀಸರು ತನಿಖೆ ಕೈಗೊಂಡಿದ್ದು, ವಿದ್ಯಾರ್ಥಿಗಳ ಪತ್ತೆಗೆ ಕ್ರಮ ಕೈಗೊಳ್ಳಲಾಗಿದೆ. ಇದೀಗ, ಮಂಗಳೂರು ಬಾಲಕನ ನಾಪತ್ತೆ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಘಟನೆ ನಡೆದಿರುವುದು ಪೋಷಕರ ಆತಂಕ ಹೆಚ್ಚಿಸಿದೆ.
ಈ ಸಂಬಂಧ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು