11:56 AM Wednesday14 - October 2026
ಬ್ರೇಕಿಂಗ್ ನ್ಯೂಸ್
ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು

ಇತ್ತೀಚಿನ ಸುದ್ದಿ

ವಿದ್ಯಾರ್ಥಿಗಳಿಗೆ ಮಾದಕ ದ್ರವ್ಯದ ದುಷ್ಪರಿಣಾಮಗಳು, ಸೈಬರ್ ಹಾಗೂ ರಸ್ತೆ ಸುರಕ್ಷತೆ ಬಗ್ಗೆ ಅರಿವು ಅಗತ್ಯ: ಪಿಎಸ್ಐ ಶಿವನಗೌಡ

10/04/2026, 12:37

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ಮಕ್ಕಳೇ ದೇಶದ ಬಹುದೊಡ್ಡ ಆಸ್ತಿ. ಇಂದಿನ ಮಕ್ಕಳೇ ಮುಂದಿನ ಪ್ರಜೆಗಳು. ಮಕ್ಕಳಿಗೆ ಸಿಗುವ ಸೌಲಭ್ಯಗಳನ್ನು ನೀಡುವುದರ ಮೂಲಕ ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಎಲ್ಲರೂ ಪಾತ್ರರಾಗಬೇಕು. ಮಕ್ಕಳಿಗೆ ಒಳ್ಳೆಯ ಹಾಗೂ ಕೆಟ್ಟದರ ಗುಣಸ್ವಭಾವದ ವ್ಯತ್ಯಾಸದ ಅರಿವು ಮೂಡಿಸುವುದು ಅಗತ್ಯವಿದೆ ಎಂದು ಆಗುಂಬೆ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಶಿವನಗೌಡ ಪಾಟೀಲ್ ಹೇಳಿದರು.
ಆರಕ್ಷಕ ದಿನದ ಅಂಗವಾಗಿ ಮೇಗರವಳ್ಳಿ ಸರ್ಕಾರಿ ಶಾಲೆನಲ್ಲಿ, ಕಾನೂನು ಅರಿವು ಕಾರ್ಯಕ್ರಮವನ್ನು ಹಮ್ಮಿಕೊಂಡು, ವಿದ್ಯಾರ್ಥಿಗಳಿಗೆ ಮಾದಕ ದ್ರವ್ಯದ ದುಷ್ಪರಿಣಾಮಗಳು, ರಸ್ತೆ ಸುರಕ್ಷತೆ ಹಾಗೂ ಸೈಬರ್ ಮತ್ತು ರಸ್ತೆ ಸುರಕ್ಷತೆಯ ಕುರಿತು ಮಾಹಿತಿಯನ್ನು ನೀಡಿದರು.
ಶಾಲಾ ಹಂತದಲ್ಲಿಯೇ ಮಕ್ಕಳಿಗೆ ಕಾನೂನಿನ ಬಗ್ಗೆ ಅರಿವು ಮೂಡಿಸಿದರೆ ಅಪರಾಧಗಳಿಗೆ ಪ್ರಾಥಮಿಕ ಹಂತದಲ್ಲಿ ಕಡಿವಾಣ ಹಾಕಲು ಸಾಧ್ಯ, ದೇಶದ ನಾಳಿನ ಭವಿಷ್ಯವಾಗಿರುವ ವಿದ್ಯಾರ್ಥಿಗಳು ಕಾನೂನಿನ ಅರಿವು ಹೊಂದುವುದು ಮುಖ್ಯ. ಮಕ್ಕಳಿಗೆ ಕಾನೂನು ಅರಿವಿನ ಮಹತ್ವವನ್ನು ತಿಳಿಸಬೇಕು. ಬಾಲ್ಯವಿವಾಹ, ಬಾಲಕಾರ್ಮಿಕ ಪದ್ಧತಿ, ಸಂಚಾರಿ ನಿಯಮದ ಬಗ್ಗೆ ತಿಳಿದುಕೊಳ್ಳಬೇಕು. ವಿದ್ಯಾರ್ಥಿ ದಿಸೆಯಲ್ಲಿ ಸಂವಿಧಾನವನ್ನು ತಿಳಿದು ಕಾನೂನಿಗೆ ಗೌರವ ನೀಡುತ್ತಾ ಜೀವನವನ್ನು ಸುಂದರ ಮತ್ತು ಸಾರ್ಥಕವಾಗಿ ರೂಪಿಸಿಕೊಳ್ಳಬೇಕು. ಕಾನೂನು ಅರಿತು ನಡೆದರೆ ಸಮಸ್ಯೆಗಳನ್ನು ಸರಳವಾಗಿ ನಿಭಾಯಿಸಬಹುದು. ಕಾನೂನಿಗೆ ಗೌರವ ನೀಡಿದರೆ ವ್ಯಕ್ತಿತ್ವ ಬೆಳವಣಿಗೆಗೆ ಪೂರಕವಾಗುತ್ತದೆ. ಆದ್ದರಿಂದ ಪಠ್ಯದ ಜತೆ ಕಾನೂನು ಅರಿವನ್ನು ಹೊಂದುವುದು ಮುಖ್ಯವಾಗಿದೆ ಎಂದರು. ಇಂದಿನ ವಿದ್ಯಾರ್ಥಿಗಳು ಮೊಬೈಲ್ ಹಾಗೂ ಇತರ ಅನವಶ್ಯಕ ಕಾರ್ಯಗಳನ್ನು ಮಾಡದೇ ಕೇವಲ ಶಿಕ್ಷಣದತ್ತ ಗಮನ ಹರಿಸಬೇಕು. ಎಲ್ಲರೂ ಕೀಳರಿಮೆ ಬಿಟ್ಟು ಶಿಕ್ಷಣಕ್ಕೆ ಹೆಚ್ಚನ ಮಹತ್ವ ನೀಡಬೇಕು, ಶಾಲಾ ಮಕ್ಕಳು ತಮ್ಮ ಉತ್ತಮ ವಿದ್ಯಾಭ್ಯಾಸವನ್ನು ಮಾಡಿ ಶೈಕ್ಷಣಿಕ ಪ್ರಗತಿ ಹೊಂದಬೇಕು ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಶಾಲಾ ಆಡಳಿತ ಮಂಡಳಿ ಸದಸ್ಯರು, ಶಿಕ್ಷಕರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು