12:12 PM Wednesday17 - December 2025
ಬ್ರೇಕಿಂಗ್ ನ್ಯೂಸ್
Kodagu | ಭಾಗಮಂಡಲ ಮೀಸಲು ಅರಣ್ಯದಲ್ಲಿ ಅಕ್ರಮ ಜಿಂಕೆ ಬೇಟೆ: ಆರೋಪಿಗಳು ಅರಣ್ಯ… 1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ…

ಇತ್ತೀಚಿನ ಸುದ್ದಿ

ಸುದ್ದಿಲೋಕದ ಮೇರು ಪರ್ವತ, ಹಿರಿಯ ಪತ್ರಕರ್ತ ಮನೋಹರ್ ಪ್ರಸಾದ್ ಇನ್ನಿಲ್ಲ

01/03/2024, 11:04

ಮಂಗಳೂರು(reporterkarnataka.com): ಕರಾವಳಿ ಕರ್ನಾಟಕ ಪತ್ರಿಕಾ ರಂಗದ ಮೇರು ಶಿಖರ, ಹಿರಿಯ ಪತ್ರಕರ್ತ ಮನೋಹರ್ ಪ್ರಸಾದ್ ಅವರು ಶುಕ್ರವಾರ ಮುಂಜಾನೆ ನಿಧನರಾದರು.
ಮನೋಹರ ಪ್ರಸಾದ್ ಅವರು ನವ ಭಾರತ ಪತ್ರಿಕೆ ಸೇರಿದಂತೆ ಹಲವು ದೈನಿಕಗಳಲ್ಲಿ ಕೆಲಸ ಮಾಡಿದ್ದರು. ದೀರ್ಘ ಕಾಲ ಉದಯವಾಣಿ ಮಂಗಳೂರು ಆವೃತ್ತಿಯ ಮುಖ್ಯಸ್ಥನಾಗಿ ಸೇವೆ ಸಲ್ಲಿಸಿದ್ದರು. ದ.ಕ. ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು. ಅವರ ನಿಧನಕ್ಕೆ ದ.ಕ. ಜಿಲ್ಲಾ ಪತ್ರಕರ್ತರ ಸಂಘ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಸೇರಿದಂತೆ ಪದಾಧಿಕಾರಿಗಳು ಕಂಬನಿ ಮಿಡಿದಿದ್ದಾರೆ.

ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಏರ್ಲಪಾಡಿ ಕರ್ಮಾಲದಲ್ಲಿ ಜನಿಸಿದ ಮನೋಹರ್ ಪ್ರಸಾದ್ ಅವರ ತಂದೆ ರಾಷ್ಟ್ರಪತಿ ಚಿನ್ನದ ಪದಕ ವಿಜೇತ ಶಿಕ್ಷಕ ದೇವರಾವ್ ಅವರು. ಮನೋಹರ್ ಪ್ರಸಾದ್ ಉತ್ತಮ ಮಾತುಗಾರರು, ನಿರೂಪಕನಾಗಿಯೂ ಚಿರಪರಿಚಿತರು.

ಇತ್ತೀಚಿನ ಸುದ್ದಿ

ಜಾಹೀರಾತು