5:35 PM Thursday24 - September 2026
ಬ್ರೇಕಿಂಗ್ ನ್ಯೂಸ್
ಬಂಗಾಳ ಕೊಲ್ಲಿಯಲ್ಲಿ ವಾಯಭಾರ ಕುಸಿತ: ಮಂಗಳೂರು ಸೇರಿದಂತೆ ಕರಾವಳಿ, ಮಲೆನಾಡಿನಲ್ಲಿ ಮಳೆ ಅ.11ರಿಂದ ಕೆಆರ್‌ಎಸ್‌ನಲ್ಲಿ ಸಂಪ್ರದಾಯಬದ್ಧ ಕಾವೇರಿ ಆರತಿ: ಮುಖ್ಯಮಂತ್ರಿ ಉದ್ಘಾಟನೆ *ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ

ಇತ್ತೀಚಿನ ಸುದ್ದಿ

ಮುಧೋಳದಲ್ಲಿ ತೀವ್ರ ಸ್ವರೂಪ ಪಡೆದ ಕಬ್ಬು ಬೆಳೆಗಾರರ ಪ್ರತಿಭಟನೆ: 20ಕ್ಕೂ ಅಧಿಕ ಟ್ರ್ಯಾಕ್ಟರ್‌ ಟ್ರಾಲಿಗಳಿಗೆ ಬೆಂಕಿಗಾಹುತಿ

13/11/2025, 21:45

ಬಾಗಲಕೋಟೆ(reporterkarnataka.com): ಜಿಲ್ಲೆಯ ಮುಧೋಳ ತಾಲ್ಲೂಕಿನಲ್ಲಿ ಕಬ್ಬು ಬೆಳೆಗಾರರ ಪ್ರತಿಭಟನೆ ತೀವ್ರ ಸ್ವರೂಪ ಪಡೆದಿದ್ದು, ರೈತರು ತಮ್ಮ ಬೇಡಿಕೆ ಆಗ್ರಹಿಸಿ ಗೋದಾವರಿ ಸಕ್ಕರೆ ಕಾರ್ಖಾನೆ ಬಳಿ ನಿಂತಿದ್ದ ಸುಮಾರು 20 ಕ್ಕೂ ಅಧಿಕ ಟ್ರ್ಯಾಕ್ಟರ್‌ ಟ್ರಾಲಿಗಳಿಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದರು. ಘಟನೆಯ ಬಗ್ಗೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಆಘಾತ ವ್ಯಕ್ತಪಡಿಸಿದ್ದಾರೆ.
*ಕುಮಾರಸ್ವಾಮಿ ಆಘಾತ:*
ಮುಧೋಳದಲ್ಲಿ ಕಬ್ಬು ತುಂಬಿದ್ದ ಟ್ರ್ಯಾಕ್ಟರುಗಳು ಬೆಂಕಿಗೆ ಆಹುತಿಯಾಗಿರುವ ಘಟನೆಯ ಬಗ್ಗೆ ತೀವ್ರ ಆಘಾತ ವ್ಯಕ್ತಪಡಿಸಿರುವ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು; ರಾಜ್ಯ ಸರಕಾರ ತಕ್ಷಣವೇ ಮಧ್ಯಪ್ರವೇಶಿಸಿ ಬಿಕ್ಕಟ್ಟನ್ನು ತಿಳಿಗೊಳಿಸಬೇಕು. ಕಬ್ಬು ಬೆಳೆಗಾರರ ಸಂಕಷ್ಟ ಮತ್ತೆ ಸೃಷ್ಟಿಯಾಗದಂತೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕು ಎಂದು ರಾಜ್ಯ ಸರಕಾರವನ್ನು ಒತ್ತಾಯಿಸಿದ್ದಾರೆ.
ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು; ಕಬ್ಬು ಬೆಳೆಗಾರರ ಸಂಕಷ್ಟ ಬಿಗಡಾಯಿಸಿದೆ. ಮುದೋಳದ ಸಕ್ಕರೆ ಕಾರ್ಖಾನೆಯ ಯಾರ್ಡ್‌ʼನಲ್ಲಿ ನಿಂತಿದ್ದ ಕಬ್ಬು ತುಂಬಿದ್ದ ಟ್ರಾಕ್ಟರುಗಳು ಬೆಂಕಿಗೆ ಆಹುತಿ ಆಗಿರುವುದು ನನಗೆ ತೀವ್ರ ದಿಗ್ಭ್ರಮೆ ಉಂಟು ಮಾಡಿದೆ. ಕಾಂಗ್ರೆಸ್ ಸರಕಾರದ ವೈಫಲ್ಯಕ್ಕೆ ಇದು ಸ್ಪಷ್ಟ ನಿದರ್ಶನ ಎಂದು ಟೀಕಿಸಿದರು.


ಬೆಳಗಾವಿಯಲ್ಲಿ ರೈತರು ಹೋರಾಟಕ್ಕಿಳಿದಾಗ ಆ ಕ್ಷಣಕ್ಕೇನೋ ಅವರ ಮೂಗಿಗೆ ತುಪ್ಪ ಸವರಿದ ಸರಕಾರವು, ಇಡೀ ಕಬ್ಬು ಬೆಳೆಗಾರರ ಬಿಕ್ಕಟ್ಟನ್ನು ನಿರ್ವಹಿಸುವಲ್ಲಿ ಘೋರ ವೈಫಲ್ಯ ಕಂಡಿತು. ಅದರ ಪರಿಣಾಮವೇ ಮುಧೋಳದಲ್ಲಿ ರೈತರ ತಾಳ್ಮೆಯ ಕಟ್ಟೆಯೊಡೆಯುಂತೆ ಮಾಡಿದೆ ಎಂದು ಸಚಿವರು ದೂರಿದ್ದಾರೆ.
ಅಕ್ಕಿ ಮೇಲೆ ಆಸೆ, ನೆಂಟರ ಮೇಲೆ ಪ್ರೀತಿ ಅನ್ನುವ ಲಾಭಕೋರ ಧೋರಣೆಯನ್ನು ಸರಕಾರ ಬಿಡಬೇಕು. ರೈತರ ಸಂಕಷ್ಟವನ್ನು ಅಧಿಕಾರದ ಅಮುಲುಗಣ್ಣಿನಿಂದ ನೋಡಬಾರದು. ಹೃದಯ ವೈಶಾಲ್ಯದಿಂದ ಕಾಣುವ ಔದಾರ್ಯ ತೋರಬೇಕು. ಮುಧೋಳದ ರೈತರ ಜತೆ ನಾನೂ ಇದ್ದೇನೆ ಎಂದು ಸಚಿವರು ಕಬ್ಬು ಬೆಳೆಗಾರರಿಗೆ ಧೈರ್ಯ ತುಂಬಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು