ಇತ್ತೀಚಿನ ಸುದ್ದಿ
ಸುಹಾಸ್ ಶೆಟ್ಟಿ ಕೊಲೆ: ಎ.ಜೆ. ಆಸ್ಪತ್ರೆ ಎದುರು ಭಾರೀ ಸಂಖ್ಯೆಯಲ್ಲಿ ನೆರೆದ ಕಾರ್ಯಕರ್ತರು; ಬಿಗಿ ಭದ್ರತೆ
01/05/2025, 22:26

ಮಂಗಳೂರು(reporterKarnataka.com):
ರೌಡಿ ಶೀಟರ್, ಹಿಂದೂ ಕಾರ್ಯಕರ್ತನ ಸುಹಾಸ್ ಶೆಟ್ಟಿ
ಹತ್ಯೆ ಹಿನ್ನೆಲೆಯಲ್ಲಿ ನಗರದ ಎ.ಜೆ. ಆಸ್ಪತ್ರೆ ಎದುರು ಭಾರೀ ಸಂಖ್ಯೆಯಲ್ಲಿ ಹಿಂದೂ ಕಾರ್ಯಕರ್ತರು ನೆರೆದಿದ್ದು, ಮಾಜಿ ಸಂಸದ ನಳಿನ್ ಕುಮಾರ್ ಕಟೀಲು ಹಾಗೂ ಶಾಸಕ ಡಾ.ವೈ. ಭರತ್ ಶೆಟ್ಟಿ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.
ಮುನ್ನೆಚ್ಚರಿಕಾ ಕ್ರಮವಾಗಿ ಆಸ್ಪತ್ರೆ ಎದುರು ಬಿಗು ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಆಸ್ಪತ್ರೆಯ ಎಮರ್ಜೆನ್ಸಿ ವಾರ್ಡ್ ಎದುರು ಕಾರ್ಯಕರ್ತರು ನೆರೆದಿದ್ದಾರೆ.
ಸುಹಾಸ್ ಶೆಟ್ಟಿ ಅವರ ಮೇಲೆ ಬಜಪೆ ಸಮೀಪ ತಂಡವೊಂದು ಮಾರಕಾಯುಧದಿಂದ ದಾಳಿ ನಡೆಸಿತ್ತು. ರಕ್ತದ ಮಡುವಿನಲ್ಲಿ ಬಿದ್ದಿದ್ದ ಅವರನ್ನು ಮಂಗಳೂರಿನ ಎ.ಜೆ. ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರು ಮೃತಪಟ್ಟಿದ್ದಾರೆ.