ಇತ್ತೀಚಿನ ಸುದ್ದಿ
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ : ಇಂದು ಜಿಲ್ಲಾ ಬಂದ್‌ಗೆ ಕರೆ ನೀಡಿದ ವಿಎಚ್‌ಪಿ: ಮೇ 6ರವರೆಗೆ ನಿಷೇಧಾಜ್ಞೆ ಜಾರಿಗೊಳಿಸಿದ ಪೊಲೀಸ್ ಕಮೀಷನರ್
02/05/2025, 07:02

ಮಂಗಳೂರು (ReporterKarnataka.com)
ಮಂಗಳೂರು ನಗರ ಹೊರವಲಯದ ಬಜಪೆಯ ಕಿನ್ನಿಪದವಿನಲ್ಲಿ ಸುಹಾಸ್ ಶೆಟ್ಟಿ ಭೀಕರ ಹತ್ಯೆ ನಡೆದಿದ್ದು, ಈ ಹಿನ್ನಲೆಯಲ್ಲಿ ವಿಶ್ವ ಹಿಂದೂ ಪರಿಷತ್ ದ.ಕ.ಜಿಲ್ಲೆಯಲ್ಲಿ ಇಂದು(ಮೇ.2) ಬಂದ್ ಘೋಷಣೆ ಮಾಡಿದೆ.
ಕೊಲೆಯ ಬಳಿಕ ನಗರದಾದ್ಯಂತ ಉದ್ವಿಗ್ನ ವಾತಾವರಣ ನಿರ್ಮಾಣಗೊಂಡಿರುವ ಹಿನ್ನೆಲೆಯಲ್ಲಿ ಮಂಗಳೂರು ನಗರ ಪೊಲೀಸ್ ಕಮೀಷನರ್ ಸಾರ್ವಜನಿಕ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮೇ.2ರ ಬೆಳಿಗ್ಗೆ 6 ಗಂಟೆಯಿಂದ ಮೇ.6ರ ಬೆಳಿಗ್ಗೆ 6ಗಂಟೆಯ ವರೆಗೆ ನಗರ ಕಮೀಷನರೇಟ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ.