9:40 AM Wednesday22 - April 2026
ಬ್ರೇಕಿಂಗ್ ನ್ಯೂಸ್
ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ…

ಇತ್ತೀಚಿನ ಸುದ್ದಿ

ಸುಖಾನಂದ ಶೆಟ್ಟಿ ಕೊಲೆ ಪ್ರಕರಣ: 19 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿ ಬಂಧನ

19/11/2025, 20:57

ಮಂಗಳೂರು(reporterkarnataka.com):ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಹೊಸಬೆಟ್ಟು ಬಳಿ ನಡೆದ ಸುಖಾನಂದ ಶೆಟ್ಟಿ ಕೊಲೆ ಪ್ರಕರಣದ ಆರೋಪಿಯಾಗಿ ತಲೆ ಮರೆಸಿಕೊಂಡಿದ್ದ ಅಬ್ದುಲ್ ಸಲಾಂ ಅಡ್ಡೂರು ಎಂಬಾತನನ್ನು 19 ವರ್ಷದ ಬಳಿಕ ಬಂಧಿಸಲಾಗಿದೆ.
2006, ಡಿಸೆಂಬರ್ 1ರಂದು ಹೊಸಬೆಟ್ಟು ಬಳಿ ಸುಖಾನಂದ್ ಶೆಟ್ಟಿ ಎಂಬವರನ್ನು ಕಬೀರ್ ಹಾಗೂ ಆತನ ಸಹಚರರು ಕೊಲೆ ಮಾಡಿ ಪರಾರಿಯಾಗಿದ್ದರು. ಪ್ರಕರಣದ ಪ್ರಮುಖ ಆರೋಪಿ ಕಬೀರ್ ಎಂಬಾತನಿಗೆ ಲತೀಫ್ ಅಲಿಯಾಸ್ ಅಡ್ಡೂರು ಲತೀಫ್ ಹಾಗೂ ಪ್ರಸ್ತುತ ಕಿನ್ನಿಪದವು ನಿವಾಸಿ ಅಬ್ದುಲ್ ಸಲಾಂ ಅಡ್ಡೂರು ಎಂಬ ಸಹೋದರರು ಅಡ್ಡೂರ್ ಟಿಬೇಟ್ ಕಾಲೋನಿಯಲ್ಲಿರುವ ಮನೆಯಲ್ಲಿ ಆಶ್ರಯ ನೀಡಿ 2 ದಿನ ಮನೆಯಲ್ಲಿರಿಸಿಕೊಂಡು ಪೊಲೀಸರಿಂದ ತಪ್ಪಿಸಿ ತಲೆಮರೆಸಿಕೊಳ್ಳಲು ಸಹಕಾರ ನೀಡಿದ್ದರು. ನಂತರ ಕಬೀರ್ ನನ್ನು ವಾಹನದಲ್ಲಿ ಕೇರಳದ ಕಾಸರಗೋಡು ಬಳಿ ಬಿಟ್ಟು ನಂತರ ತಲೆ ಮರೆಸಿಕೊಂಡಿದ್ದರು. ಅಬ್ದುಲ್ ಸಲಾಂ ಅಡ್ಡೂರು ಕೃತ್ಯ ನಡೆದ ಮೂರು ತಿಂಗಳ ಬಳಿಕ ವಿದೇಶಕ್ಕೆ ತೆರಳಿ ತಲೆಮರೆಸಿಕೊಂಡಿದ್ದ. ಸದ್ರಿ ಆರೋಪಿತನು ಪ್ರಕರಣದಲ್ಲಿ ದಸ್ತಗಿರಿಯಾಗದೇ ತಲೆಮರೆಸಿಕೊಂಡಿದ್ದರಿಂದ ಆರೋಪಿತನ ಮೇಲೆ ದೋಷಾರೋಪಣಾ ಪತ್ರವನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿತ್ತು. ಇದೀಗ
ಅಬ್ದುಲ್ ಸಲಾಂ ಅಡ್ಡೂರು
ಎಂಬಾತನು ಸುಮಾರು 19 ವರ್ಷಗಳಿಂದ ದಸ್ತಗಿರಿಗೆ ಸಿಗದೇ ಮಾನ್ಯ ನ್ಯಾಯಾಲಯಕ್ಕೆ ಹಾಜರಾಗದೇ ಇರುವುದರಿಂದ ಸದ್ರಿ ಆರೋಪಿಯ ಬಜಪೆ ಠಾಣಾ ವ್ಯಾಪ್ತಿಯಲ್ಲಿ ಇರುವ ಬಗ್ಗೆ ಮಾಹಿತಿಯನ್ನು ಕಲೆ ಹಾಕಿ
ನವಂಬರ್ 18 ರಂದು ಸಂಜೆ ಬಜಪೆ ಕಿನ್ನಿಪದವು ಬಳಿ ಪೊಲೀಸರು ಬಂಧಿಸಿದ್ದಾರೆ.
ಈತನು 2007ನೇ ಇಸವಿಯಲ್ಲಿ ಪಾಸ್ ಪೋರ್ಟ್ ಮಾಡಿ ಕೆಲವು ವರ್ಷಗಳ ಕಾಲ ವಿದೇಶದಲ್ಲಿ ತಲೆಮರೆಸಿಕೊಂಡು ಇತ್ತೀಚಿಗೆ ವಾಪಸ್ಸು ಬಂದಿದ್ದಾನೆ. ಈತನು ಅಡ್ಡೂರಿನಲ್ಲಿರುವ ತನ್ನ ಮನೆಯನ್ನು ನೆಲಸಮಗೊಳಿಸಿ ಅಲ್ಲಿಂದ ಬಜಪೆಯ ಕಿನ್ನಿಪದವಿನ ಬಾಡಿಗೆ ಮನೆಯಲ್ಲಿ ವಾಸ ಮಾಡಿಕೊಂಡಿದ್ದ. ಈತನ ಸಹೋದರ ಲತೀಫ್ ಅಲಿಯಾಸ್ ಅಡ್ಡೂರು ಲತೀಫ್ ಈತನು ವಿದೇಶದಲ್ಲಿ ತಲೆಮರೆಸಿಕೊಂಡಿರುತ್ತಾನೆ. ಈ ಪ್ರಕರಣದಲ್ಲಿ 16 ಆರೋಪಿಗಳನ್ನು ಈ ಹಿಂದೆ ಬಂದಿಸಿದ್ದು ಉಳಿದ 11 ಜನ ಆರೋಪಿಗಳು ತಲೆಮರೆಸಿಕೊಂಡಿದ್ದಾರೆ.
ಈತನ ಮೇಲೆ ಬಜಪೆ ಠಾಣೆಯಲ್ಲಿ ಕೊಲೆಯತ್ನ ಪ್ರಕರಣ ದಾಖಲಾಗಿದ್ದು ಈತನ ಮೇಲೆ ಬಜಪೆ ಪೊಲೀಸ್ ಠಾಣೆಯಲ್ಲಿ ರೌಡಿ ಹಾಳೆಯನ್ನು ತೆರೆಯಲಾಗಿದೆ. ಈತನ ಮೇಲೆ ನ್ಯಾಯಾಲಯದಿಂದ ಹಲವಾರು ಬಾರಿ ವಾರಂಟ್ ಗಳನ್ನು ಹೊರಡಿಸಿದ್ದು ಸದ್ರಿ ಆರೋಪಿಯು ಸುಮಾರು 19 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ಇದ್ದುದರಿಂದ ಈತನ ವಿರುದ್ಧ ಠಾಣೆಯಲ್ಲಿ ಕಲಂ 209 ಬಿಎನ್.ಎಸ್ ರಂತೆ ಪ್ರಕರಣವನ್ನು ದಾಖಲಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಆರೋಪಿ ಪತ್ತೆಯ ಬಗ್ಗೆ ಸಹಾಯಕ ಪೊಲೀಸ್ ಆಯುಕ್ತರು (ಉತ್ತರ ಉಪ ವಿಭಾಗ) ಶ್ರೀಕಾಂತ್ ಕೆ ರವರ ಮಾರ್ಗದರ್ಶನದಲ್ಲಿ ಪೊಲೀಸ್ ನಿರೀಕ್ಷಕರಾದ ಪ್ರಮೋದ್ ಕುಮಾರ್ ಪಿ, ಪಿಎಸ್.ಐ ರಘುನಾಯಕ್ ಹಾಗೂ ಠಾಣಾ ಸಿಬ್ಬಂದಿಗಳಾದ ಅಣ್ಣಪ್ಪ, ಅಜಿತ್ ಮ್ಯಾಥ್ಯೂ, ರಾಜೇಂದ್ರ ಪ್ರಸಾದ್, ವಿನೋದ್ ನಾಯ್ಕ್, ಸುನೀಲ್ ಕುಸನಾಳ ಪತ್ತೆಯ ಬಗ್ಗೆ ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು