3:07 AM Saturday3 - October 2026
ಬ್ರೇಕಿಂಗ್ ನ್ಯೂಸ್
ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು ನೈಸ್ ಯೋಜನೆ | 1995ರಿಂದ ಯೋಜನೆ ನಡೆದು ಬಂದ ಹಾದಿಯನ್ನು ಜನರ ಮುಂದಿಡುತ್ತೇನೆ:… ಕಾಡಿನಲ್ಲಿ ಕಾದಾಟದಿಂದ ತೀವ್ರ ಗಾಯ | ದುಬಾರೆ ಶಿಬಿರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಂಡಾನೆ… ದೋಷಪೂರಿತ ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಗೊಳಿಸಿ: ನಟ ಪ್ರಕಾಶ್ ರೈ ಆಗ್ರಹ ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣ ಹುದ್ದೆಯಿಂದ ವಜಾಗೊಳಿಸಿ ಬಂಧಿಸಿ: ಕಾಂಗ್ರೆಸ್ ಪಾದಯಾತ್ರೆಯಲ್ಲಿ ಆಗ್ರಹ ಖಾಸಗಿ ಆಸ್ಪತ್ರೆ ಕೈಚೆಲ್ಲಿದ ಪ್ರಕರಣ: ಲೇಡೀಗೋಶನ್ ನಲ್ಲಿ ಪುನರ್ಜನ್ಮ ಪಡೆದ ಗರ್ಭಿಣಿ ಮಹಿಳೆ;… ಸೈಬರ್ ವಂಚನೆಗೆ ಬ್ರೇಕ್: 9,840 ಕೋಟಿ ಸ್ಪ್ಯಾಮ್ ಕರೆ ಪತ್ತೆಹಚ್ಚಿದ ಏರ್‌ಟೆಲ್ ಮಡಿಕೇರಿ ಮತ್ತು ಕುಶಾಲನಗರ ತಾಲೂಕು ಬರಪೀಡಿತ ಎಂದು ಘೋಷಣೆ: ಶಾಸಕ ಡಾ.ಮಂತರ್ ಗೌಡ…

ಇತ್ತೀಚಿನ ಸುದ್ದಿ

Sulia | ಪೆರಾಜೆ: ಕೆರಳಿದ ಕಣಜದ ಹಿಂಡು ಕಚ್ಚಿ ತೀವ್ರ ಗಾಯಗೊಂಡಿದ್ದ ಕೃಷಿಕ ಆಸ್ಪತ್ರೆಯಲ್ಲಿ ಸಾವು

22/05/2026, 18:04

ಸುಳ್ಯ(reporterkarnataka.com): ಅರಂತೋಡು ಸಮೀಪದ ಪೆರಾಜೆ ಗ್ರಾಮದ ಹೊದ್ದೆಟ್ಟಿ ಎಂಬಲ್ಲಿ ಅತ್ಯಂತ ದುರದೃಷ್ಟಕರ ಘಟನೆಯೊಂದು ಸಂಭವಿಸಿದ್ದು, ಕಣಜದ ಹುಳುಗಳ ಹಿಂಡು ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.
ಕೃಷಿ ತೋಟದಲ್ಲಿ ಕೆಲಸ ನಿರತರಾಗಿದ್ದ ಜಗದೀಶ್ ಎಂಬುವವರೇ ಈ ಕಣಜದ ಹುಳುಗಳ ಭೀಕರ ದಾಳಿಗೆ ಸಿಲುಕಿ ಅಕಾಲಿಕ ಮರಣ ಹೊಂದಿದ ದುರ್ದೈವಿಯಾಗಿದ್ದಾರೆ. ಮೃತ ಜಗದೀಶ್ ಅವರು ತಮ್ಮ ತೋಟದ ಜಾಗದಲ್ಲಿ ಕಳೆ ಕಟಾವು ಯಂತ್ರದ (ಗ್ರಾಸ್ ಕಟ್ಟರ್) ಸಹಾಯದಿಂದ ಕಾಡು ಮತ್ತು ಅನಗತ್ಯ ಗಿಡಗಂಟಿಗಳನ್ನು ಕಡಿಯುವ ಕಾಯಕದಲ್ಲಿ ತೊಡಗಿದ್ದರು. ಈ ಸಂದರ್ಭದಲ್ಲಿ ಪೊದೆಯಲ್ಲಿದ್ದ ಕಣಜದ ಗೂಡಿಗೆ ಯಂತ್ರವು ತಗುಲಿದ ಪರಿಣಾಮ ಕೆರಳಿದ ನೂರಾರು ಕಣಜದ ಹುಳುಗಳ ಗುಂಪು ಒಮ್ಮೆಲೇ ಜಗದೀಶ್ ಅವರ ಮೇಲೆರಗಿ ದೇಹದಾದ್ಯಂತ ಮನಬಂದಂತೆ ಕಚ್ಚಿ ತೀವ್ರವಾಗಿ ಗಾಯಗೊಳಿಸಿವೆ.
ದಾಳಿಯಿಂದಾಗಿ ತೀವ್ರ ಅಸ್ವಸ್ಥಗೊಂಡು ಜಾಗದಲ್ಲೇ ಕುಸಿದು ಬಿದ್ದಿದ್ದ ಇವರನ್ನು ತೋಟದ ಬಳಿಯಿದ್ದ ಸ್ಥಳೀಯರು ಗಮನಿಸಿ, ಕೂಡಲೇ ರಕ್ಷಣೆಗೆ ಧಾವಿಸಿ ಸುಳ್ಯದ ಸರ್ಕಾರಿ ಆಸ್ಪತ್ರೆಗೆ ತುರ್ತಾಗಿ ದಾಖಲಿಸಿದ್ದರು. ಆದರೆ ದೇಹದಾದ್ಯಂತ ಕಣಜದ ವಿಷದ ಪ್ರಭಾವ ತೀವ್ರವಾಗಿದ್ದರಿಂದ ಆಸ್ಪತ್ರೆಯಲ್ಲಿ ನೀಡಿದ ಯಾವುದೇ ಚಿಕಿತ್ಸೆಗಳು ಫಲಕಾರಿಯಾಗದೆ ಜಗದೀಶ್ ಅವರು ಕೊನೆಯುಸಿರೆಳೆದಿದ್ದಾರೆ ಎಂದು ವೈದ್ಯಕೀಯ ಮೂಲಗಳು ತಿಳಿಸಿವೆ.

ಇತ್ತೀಚಿನ ಸುದ್ದಿ

ಜಾಹೀರಾತು