4:54 PM Friday16 - October 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3…

ಇತ್ತೀಚಿನ ಸುದ್ದಿ

ಸುಳ್ಯ | ಸಂಪಾಜೆ ಚೌಕಿ ಬಳಿ ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ

09/08/2026, 19:46

ಸುಳ್ಯ(reporterkarnataka.com): ಸಂಪಾಜೆ – ಮಾಣಿ ರಾಷ್ಟ್ರೀಯ ಹೆದ್ದಾರಿಯ ಚೌಕಿ ಬಳಿಯ ತಿರುವಿನಲ್ಲಿ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಸಂಭವಿಸಿದೆ.
ಮಂಗಳೂರಿನಿಂದ ಮೈಸೂರಿನತ್ತ ಗೇರುಬೀಜ ಸಾಗಿಸುತ್ತಿದ್ದ ಲಾರಿ ಸಂಪಾಜೆ ಚೌಕಿ ಬಳಿಯ ತಿರುವಿನಲ್ಲಿ ತಲುಪಿದಾಗ ಚಾಲಕನ ನಿಯಂತ್ರಣ ತಪ್ಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಡ್ಡಲಾಗಿ ಪಲ್ಟಿಯಾಗಿದೆ. ಪರಿಣಾಮವಾಗಿ ಕೆಲವು ಗಂಟೆಗಳ ಕಾಲ ವಾಹನ ಸಂಚಾರ ಸ್ಥಗಿತವಾಗಿತ್ತು. ವಿಷಯ ತಿಳಿದ ಮಾಜಿ ಗ್ರಾಮ ಪಂಚಾಯತ್ ಜಿ .ಕೆ ಹಮೀದ್ ,ತಾಜುದ್ದೀನ್ ಟರ್ಲಿ , ಸಾಜಿದ್, ಪೊಲೀಸ್ ಪ್ರಕಾಶ್ , ಹಾಗೂ ಸಿಬ್ಬಂದಿ ವರ್ಗ, ಊರಿನವರು ಘಟನಾ ಸ್ಥಳಕ್ಕೆ ಆಗಮಿಸಿ ಕ್ರೇನ್ ಮೂಲಕ ಲಾರಿಯನ್ನು ಎತ್ತಲಾಯಿತು. ಬಳಿಕ ವಾಹನ ಸಂಚಾರಕ್ಕೆ ಮುಕ್ತ ಅವಕಾಶ ನೀಡಲಾಯಿತು. ಅದೃಷ್ಟವಶಾತ್ ಲಾರಿ ಚಾಲಕ ಸಣ್ಣ ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು