3:22 PM Wednesday23 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ಶ್ರಮ ಜೀವಿಗಳಿಗೆ ಸೀರೆ ನೀಡಿ ಗೌರವಿಸಿದ ಸುಳ್ಯದ ಹೆಸರಾಂತ ಚಿನ್ನದ ಮಳಿಗೆ ಸ್ವರ್ಣಂ ಜ್ಯುವೆಲ್ಲರಿ

08/03/2026, 17:23

ಸುಳ್ಯ(reporterkarnataka.com): ಸುಳ್ಯದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಎದುರಿನ ಸೂಂತೋಡು ಎಂಪೋರಿಯಮ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವ ಹೆಸರಾಂತ ಚಿನ್ನದ ಮಳಿಗೆ ಸ್ವರ್ಣಂ ಜ್ಯುವೆಲ್ಲರಿಯಲ್ಲಿ ವಿಶ್ವ ಮಹಿಳಾ ದಿನಾಚರಣೆಯನ್ನು ಮಾ.8ರಂದು ವೈಶಿಷ್ಟ್ಯಪೂರ್ಣವಾಗಿ ಆಚರಿಸಲಾಯಿತು.

ಶ್ರಮಜೀವಿಗಳಾದ ಖಾಸಗಿ ಬಸ್ ನಿರ್ವಾಹಕಿ ಜಯಂತಿ, ಗೃಹರಕ್ಷಕ ದಳದ ಸಿಬ್ಬಂದಿಗಳಾದ ಪುಷ್ಪಾವತಿ ಆಲೆಟ್ಟಿ, ಗೀತಾ ಜಯನಗರ, ಅಟೋ ಚಾಲಕಿ ಗೀತಾ ಜಯನಗರ, ಪೌರ ಕಾರ್ಮಿಕೆಯವರಾದ ಮಾಲಾಬಾಯಿ, ಮಮತಾ, ಲತಾ ಅವರನ್ನು ಸುಳ್ಯ ಪಯಸ್ವಿನಿ ಜೇಸಿಐ ಅಧ್ಯಕ್ಷೆ ಲತಾಶ್ರೀ ಸುಪ್ರೀತ್ ಮೋಂಟಡ್ಕರವರು ಸ್ವರ್ಣಂ ವತಿಯಿಂದ ನೀಡಿದ ಸೀರೆ, ಸ್ಮರಣಿಕೆ ನೀಡಿ ಗೌರವಿಸಿ, ಮಾತನಾಡಿ ಮಹಿಳಾ ದಿನಾಚರಣೆಯ ಮಹತ್ವವನ್ನು ತಿಳಿಸಿ ಶುಭಹಾರೈಸಿದರು. ಬಿಲ್ಡಿಂಗ್ ಮಾಲಕ ಸೂರಯ್ಯ ಸೂಂತೋಡು ಉಪಸ್ಥಿತರಿದ್ದು, ಶುಭ ಹಾರೈಸಿದರು. ಕರ್ನಾಟಕ ಜರ್ನಲಿಸ್ಟ್ ಯೂನಿಯನ್‌ನ ಸುಳ್ಯ ತಾಲೂಕು ಘಟಕದ ಅಧ್ಯಕ್ಷ ಯಶ್ಚಿತ್ ಕಾಳಂಮನೆ ಕಾರ್ಯಕ್ರಮ ನಿರೂಪಿಸಿದರು. ಸಂಸ್ಥೆಯ ಪಾಲುದಾರ ಲೋಕೇಶ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಪಾಲುದಾರರಾದ ಸಂಜೀವ, ಭವಿತ್ , ಪ್ರವೀಣ್ ಗೌಡ, ಸಿಬ್ಬಂದಿಗಳಾದ ಶೋಧನ್, ನಿತೇಶ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು