12:12 PM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದು ಸರಕಾರಿ ನೌಕರಿ ಗಿಟ್ಟಿಸಿಕೊಂಡವರಿಗೆ ಕಾದಿದೆ ಗ್ರಹಚಾರ: ತನಿಖೆಗೆ ರಾಜ್ಯ ಸರಕಾರ ಆದೇಶ

25/04/2022, 15:30

ಬೆಂಗಳೂರು(reporterkarnataka.com): ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದು ಸರಕಾರಿ ನೌಕರಿ ಗಿಟ್ಟಿಸಿಕೊಂಡವರಿಗೆ ಮುಂದೆ ಕಾದಿದೆ ಗ್ರಹಚಾರ. ಕೆಲಸ ವಜಾಗೊಳ್ಳುವುದಲ್ಲದೆ, ಜೈಲು ಶಿಕ್ಷೆಯೂ ಆಗಲಿದೆ.

ರಾಜ್ಯದಿಂದ ಬೇಡ ಜಂಗಮ ಸುಳ್ಳು ಜಾತಿ ಪ್ರಮಾಣಪತ್ರ ಪಡೆದಿರೋ ವಿಚಾರವನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರಕಾರ ಹೀಗೆ ಸುಳ್ಳು ಮಾಹಿತಿ ನೀಡಿ, ಜಾತಿ ಪ್ರಮಾಣಪತ್ರವನ್ನು ಪಡೆದಿರುವ ಕುರಿತಂತೆ ಮಾಹಿತಿ ಸಂಗ್ರಹಿಸಿ ನೀಡಲು ಆದೇಶಿಸಿದೆ.

ಈ ಕುರಿತು ಕಂದಾಯ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ, ಎಲ್ಲ ಪ್ರಾದೇಶಿಕ ಆಯುಕ್ತರಿಗೆ ಪತ್ರ ಬರೆದಿದ್ದು, ರಾಜ್ಯದ ಹಲವಾರು ಕಡೆ ಅನರ್ಹರು ಬೇಡ ಜಂಗಮ ಸುಳ್ಳು ಜಾತಿ ಪ್ರಮಾಣಪತ್ರಗಳನ್ನು ಪಡೆದಿರೋ ಬಗ್ಗೆ ದಿನಾಂಕ 20-04-2022ರಂದು ನಡೆದ ಕರ್ನಾಟಕ ವಿಧಾನ ಮಂಡಲದ ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿ ಸಭೆಯಲ್ಲಿ ಚರ್ಚೆಯಾಗಿರುತ್ತದೆ.

ಅಲ್ಲದೇ ಬೇಡ ಜಂಗಮ ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದಿರುವವರ ಬಗ್ಗೆ ಕ್ರಮ ಕೈಗೊಳ್ಳುವಂತೆ ಹಾಗೂ ಬೇಡ ಜಂಗಮ ಪರಿಶಿಷ್ಟ ಜಾತಿ ಪ್ರಮಾಣ ಪತ್ರಗಳನ್ನು ನೀಡಿರುವ ಅಧಿಕಾರಿ, ನೌಕರರನ್ನು ಕೂಡಲೇ ಅಮಾನತುಗೊಳಿಸಲು, ವಾರ್ಷಿಕ ವೇತನ ಬಡ್ತಿಗಳನ್ನು ಕಡಿತಗೊಳಿಸಲು ಹಾಗೂ ಆಂತಹ ಅಧಿಕಾರಿಗಳ ಸೇವಾ ವಹಿಯಲ್ಲಿ ನಮೂದಿಸಲು ತಿಳಿಸಿರುತ್ತಾರೆ.

ಹೀಗಾಗಿ 2010ರಿಂದ ಇಲ್ಲಿಯವರೆಗೆ ಬೇಡ ಜಂಗಮ ಜಾತಿಯ ಎಷ್ಟು ಪ್ರಮಾಣ ಪತ್ರಗಳನ್ನು ವಿತರಿಸಲಾಗಿದೆ ಎಂಬ ಮಾಹಿತಿ ನೀಡುವುದು. ತಮ್ಮ ವ್ಯಾಪ್ತಿಯಲ್ಲಿ ಬರುವ ಎಲ್ಲಾ ತಾಲೂಕುಗಳಲ್ಲಿ ಬೇಡ ಜಂಗಮ ಪ್ರಮಾಣ ಪತ್ರಗಳನ್ನು ನೀಡಿದವರುಗಳ ಹಾಗೂ ಪಡೆದುಕೊಂಡಿರುವವರ ವಿವರಗಳನ್ನು ಮತ್ತು ಪ್ರಮಾಣ ಪತ್ರದ ನಕಲು ಪ್ರತಿಗಳನ್ನು ಕ್ರೂಡೀಕರಿಸಿ, ಮರು ಟಪಾಲಿನಲ್ಲಿ ಸರ್ಕಾರಕ್ಕೆ ಕಳುಹಿಸುವಂತೆ ನಿರ್ದೇಶಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು