11:40 AM Monday15 - December 2025
ಬ್ರೇಕಿಂಗ್ ನ್ಯೂಸ್
ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ…

ಇತ್ತೀಚಿನ ಸುದ್ದಿ

ಸುಳ್ಳು ಮಾಹಿತಿ ಹರಡಿದ ಆರೋಪ: ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಹಾವೇರಿಯಲ್ಲಿ ಎಫ್​ಐಆರ್ ದಾಖಲು

08/11/2024, 13:00

ಹಾವೇರಿ(reporterjarnataka.com): ಸುಳ್ಳು ಮಾಹಿತಿ ಹರಡಿದ ಆರೋಪದಲ್ಲಿ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಹಾವೇರಿಯ ಸಿಇಎನ್ ಠಾಣೆಯಲ್ಲಿ ಎಫ್​ಐಆರ್ ದಾಖಲಿಸಲಾಗಿದೆ.
ರೈತರೊಬ್ಬರ ಆತ್ಮಹತ್ಯೆ ವಿಚಾರವಾಗಿ ಸಂಸದರು ತನ್ನ ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿದ್ದರು. ಹರನಗೇರಿ ರೈತ‌ ರುದ್ರಪ್ಪ ಆತ್ಮಹತ್ಯೆ ಬಗ್ಗೆ ಟ್ವೀಟ್​ ಮಾಡಿದ್ದ ತೇಜಸ್ವಿ ಸೂರ್ಯ, ವಕ್ಫ್​​ ನೋಟಿಸ್​ಗೆ ಹೆದರಿ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಬರೆದಿದ್ದರು. ರಾಜ್ಯದಲ್ಲಿ ವಕ್ಫ್ ವಿವಾದ ತೀವ್ರಗೊಳ್ಳುತ್ತಿರುವ ಸಂದರ್ಭದಲ್ಲೇ ಸಂಸದರು ಟ್ವೀಟ್ ಮಾಡಿದ್ದರು.
ರೈತ‌ ರುದ್ರಪ್ಪ ಅವರ ಪಹಣಿಯಲ್ಲಿ ವಕ್ಫ್ ಹೆಸರು ನಮೂದಾಗಿದ್ದರಿಂದ ಹೆದರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕೆಲವು ಮಾಧ್ಯಮಗಳು ವರದಿ ಮಾಡಿದ್ದವು. ಮಾಧ್ಯಮ ವರದಿಯೊಂದನ್ನು ಟ್ವೀಟ್ ಮಾಡಿದ್ದ ತೇಜಸ್ವಿ ಸೂರ್ಯ, ‘ಸಿಎಂ ಸಿದ್ದರಾಮಯ್ಯ ಮತ್ತು ವಕ್ಫ್ ಸಚಿವ ಜಮೀರ್ ಅಹ್ಮದ್ ಅವರ ಅಲ್ಪಸಂಖ್ಯಾತರ ತುಷ್ಟೀಕರಣದಿಂದ ಕರ್ನಾಟಕದಲ್ಲಿ ದುರಂತಗಳು ಸಂಭವಿಸುತ್ತಿವೆ. ಪ್ರತಿ ದಿನ ಇಂಥ ಘಟನೆಗಳು ಸಂಭವಿಸುತ್ತಿವೆ’ ಎಂದು ಬರೆದಿದ್ದರು. ಈ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬರು ನೀಡಿದ ದೂರಿನ ಆಧಾರದಲ್ಲಿ ಪೊಲೀಸರು ಎಫ್​ಐಆರ್ ದಾಖಲಿಸಿದ್ದಾರೆ. ಇದೀಗ ಈ ಟ್ವೀಟ್​ ಅನ್ನು ಅಳಿಸಿಹಾಕಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು