1:36 AM Tuesday8 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಸುಳ್ಳು ಮೊಕದ್ದಮೆ ವಾಪಸಾತಿಗೆ ಒತ್ತಾಯಿಸಿ ಮಂಗಳೂರು ಮಹಾನಗರ ಪಾಲಿಕೆ ಚಲೋ: ಮನವಿ ಸ್ವೀಕರಿಸಲು ಬಾರದ ಕಮಿಷನರ್

06/06/2023, 18:06

ಮಂಗಳೂರು(reporterkarnataka.com): ಮಂಗಳೂರು ಮಹಾನಗರ ಪಾಲಿಕೆಯ ಅಧಿಕಾರಿಗಳು ಪಟ್ಟಣ ವ್ಯಾಪಾರ ಸಮಿತಿಯ ಸಭೆಯನ್ನು ನಡೆಸದೆ ದಾಳಿ ನಡೆಸಿರುವ ಕ್ರಮಗಳನ್ನು ಪ್ರಶ್ನಿಸಿದ್ದಕ್ಕೆ ಬೀದಿಬದಿ ವ್ಯಾಪಾರಸ್ಥರ ಸಂಘದ ಗೌರವಾಧ್ಯಕ್ಷ ಬಿ.ಕೆ.ಇಮ್ತಿಯಾಝ್ ಹಾಗೂ ಮುಖಂಡರ ಮೇಲೆ ದಾಖಲಿಸಿರುವ ಸುಳ್ಳು ಮೊಕದ್ದಮೆ ವಾಪಾಸ್ ಪಡೆಯಬೇಕೆಂದು ಒತ್ತಾಯಿಸಿ ದ.ಕ.ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಶ್ರೇಯೋಭಿವೃದ್ಧಿ ಸಂಘದ ನೇತೃತ್ವದಲ್ಲಿ ನಗರ ಪಾಲಿಕೆ ಚಲೋ ಪ್ರತಿಭಟನೆ ಮಂಗಳವಾರ ನಡೆಯಿತು.
ಡಿವೈಎಫ್‌ಐ ರಾಜ್ಯ ಅಧ್ಯಕ್ಷ ಮುನೀರ್ ಕಾಟಿಪಳ್ಳ ಪ್ರತಿಭಟನೆಯನ್ನು ಉದ್ಘಾಟಿಸಿ ಮಾತನಾಡಿ, ಶಾಸಕ ವೇದವ್ಯಾಸ್ ಕಾಮತ್ ಸರ್ವಾಧಿಕಾರಿಯಂತೆ ವರ್ತಿಸುತ್ತಿದ್ದಾರೆ. ಅಧಿಕಾರಿಗಳನ್ನು ತಾಳಕ್ಕೆ ತಕ್ಕಂತೆ ಕುಣಿಸುತ್ತಿದ್ದಾರೆ. ಅಧಿಕಾರಿಗಳು ಕಾನೂನು ಬದ್ಧವಾಗಿ ಜನರ‌ ಸೇವೆ ಮಾಡಬೇಕೇ ಹೊರತು ರಾಜಕೀಯ ಮರ್ಜಿಗೆ ತಕ್ಕಂತೆ ವರ್ತಿಸಬಾರದು ಎಂದು ಅವರು ಬೀದಿ ವ್ಯಾಪಾರಿಗಳ ಮುಖಂಡರ ಮೇಲೆ ಕೇಸು ದಾಖಲಿಸಿದ ಕೂಡಲೇ ಅವರ ಬದುಕುವ ಹಕ್ಕುಗಳನ್ನು ನಿರಾಕರಿಸಲು ಸಾಧ್ಯವಿಲ್ಲ ಎಂದು ಹೇಳಿದರು.
ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ ಮಾತನಾಡಿ, ಬಿಜೆಪಿಯ ನಗರಾಡಳಿತ ಬೀದಿಬದಿ ವ್ಯಾಪಾರಿಗಳ ಬದುಕುವ ಹಕ್ಕುಗಳ ಮೇಲೆ ದಾಳಿ ನಡೆಸಿ ಬಡವರ ಬದುಕನ್ನು ನಾಶ ಮಾಡುತ್ತಿದೆ. ಬಿಜೆಪಿ ಶ್ರೀಮಂತರ ಪರವಾಗಿದೆ ಹೊರತು ಬಡವರ ಹಿತಾಸಕ್ತಿಯನ್ನು ಕಾಪಾಡುತ್ತಿಲ್ಲ ಎಂದು ಆರೋಪಿಸಿದರು.
ಸಂಘದ ಗೌರವಾಧ್ಯಕ್ಷ ಬಿ. ಕೆ.ಇಮ್ತಿಯಾಝ್ ಮಾತನಾಡಿ, ದೇಶದಲ್ಲಿ ಬೀದಿಬದಿ ವ್ಯಾಪಾರಕ್ಕೆ ಕಾನೂನಿನ ಮಾನ್ಯತೆ ಇದ್ದರೂ ಮಂಗಳೂರಿನಲ್ಲಿ ಕಾನೂನನ್ನು ಗಾಳಿಗೆ ತೂರಲಾಗಿದೆ. ಕಳೆದ ಒಂದು ವರ್ಷಗಳಿಂದ ಪಟ್ಟಣ ವ್ಯಾಪಾರ ಸಮಿತಿಯ ಸಭೆಯನ್ನೇ ಕರೆದಿಲ್ಲ. ಅಧಿಕಾರಿಗಳು ರಾಜಕಾರಣಿಗಳ ಒತ್ತಡದಲ್ಲಿ ಕಾನೂನು ಅನುಷ್ಠಾನ ಮಾಡಲು ಹೆದರುತ್ತಿದ್ದಾರೆ. ಪಾಲಿಕೆಯ ಅಧಿಕಾರಿಗಳಿಗೆ ಬೀದಿಬದಿ ವ್ಯಾಪಾರಸ್ಥರ ಜೀವನೋಪಾಯ ಸಂರಕ್ಷಣೆ ಮತ್ತು ನಿಯಂತ್ರಣ ಕಾಯಿದೆಯ ಬಗ್ಗೆ ಜ್ಞಾನವೇ ಇಲ್ಲದೆ ಅಕ್ರಮ ಕಾರ್ಯಾಚರಣೆಗಿಳಿದಿದ್ದಾರೆ ಎಂದು ಆರೋಪಿಸಿದರು. ಪೊಲೀಸ್ ಕೇಸುಗಳಿಂದ ಹೋರಾಟದಿಂದ ಹಿಮ್ಮೆಟ್ಟಿಸಲು ಸಾಧ್ಯವಿಲ್ಲ. ಬಡ ಬೀದಿ ವ್ಯಾಪಾರಿಗಳ ಹಕ್ಕುಗಳಿಗಾಗಿ ಎಂತಹ ಬಲಿದಾನಕ್ಕೂ ಸಿದ್ದ ಎಂದು ಹೇಳಿದರು.
ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯ ಮುಖಂಡರಾದ ಯಾದವ ಶೆಟ್ಟಿ, ಡಿವೈಎಫ್ಐ ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್ ಸಂಘದ ಅಧ್ಯಕ್ಷರಾದ ಮೊಹಮ್ಮದ್ ಮುಸ್ತಫಾ ಮಾತನಾಡಿದರು .
ಡಿವೈಎಫ್ಐ ಜಿಲ್ಲಾ ಮುಖಂಡರಾದ ಮನೋಜ್ ವಾಮಂಜೂರ್,ರಝಾಕ್ ಮೊಂಟೆಪದವು, ರಫೀಕ್ ಹರೇಕಳ, ಶ್ರೀನಾಥ್ ಕಾಟಿಪಳ್ಳ ,ತಯ್ಯೂಬ್ ಬೆಂಗರೆ,ನೌಷದ್ ಬೆಂಗರೆ,ಸಾಮಾಜಿಕ ಕಾರ್ಯಕರ್ತೆಯರಾದ ಪ್ರಮೀಳಾ ದೇವಾಡಿಗ ,ಅಸುಂತ ಡಿಸೋಜ , ಯೋಗಿತಾ ಸುವರ್ಣ, ಬೀದಿಬದಿ ವ್ಯಾಪಾರಸ್ಥರ ಸಂಘದ ಮುಖಂಡರಾದ ಆಸೀಫ್ ಬಾವ ಉರುಮನೆ,ನೌಷದ್ ಉಳ್ಳಾಲ ,ರಹಿಮಾನ್ ಅಡ್ಯಾರ್,ರೂಪೇಶ್ ,ಗಜಾನಂದ ,ಗೋಪಾಲ ಕಂಕನಾಡಿ,ಆನಂದ ಲೇಡಿಹಿಲ್,ಅನಿಲ್ ಕಂದಕ,ಶ್ರೀನಿವಾಸ್ ಕಾವೂರು,ಧನಂಜಯ ಸುರತ್ಕಲ್ ,ಮೇರಿ ಡಿಸೋಜ, ಮೇಬಲ್ ಡಿಸೋಜ, ಶೌಕತ್ ,ನವಾಝ್ ಕಣ್ಣೂರು, ಇಸ್ಮಾಯಿಲ್ ಉಳ್ಳಾಲ ಮುಂತಾದವರು ಉಪಸ್ಥಿತರಿದ್ದರು.
ಮೆರವಣಿಗೆ: ನಗರದ ಸಬ್ ಜೈಲ್ ಬಳಿಯಿಂದ ಜಮಾಯಿಸಿದ 500ಕ್ಕೂ ಅಧಿಕ ಬೀದಿಬದಿ ವ್ಯಾಪಾರಿಗಳು ಮೆರವಣಿಗೆಯಲ್ಲಿ ಘೋಷಣೆ ಕೂಗುತ್ತಾ ನಗರ ಪಾಲಿಕೆ ಕಚೇರಿ ಎದುರು ಪ್ರತಿಭಟನೆ ನಡೆಸಿದರು.


ಮನವಿ ಸ್ವೀಕರಿಸಲು ಆಯುಕ್ತರ ಆಗಮನಕ್ಕೆ ಪಟ್ಟು: ಆಯುಕ್ತರ ಅನುಪಸ್ಥಿತಿಯಲ್ಲಿ ಮನವಿ ಸ್ವೀಕರಿಸಲು ಬಂದ ಉಪ ಆಯುಕ್ತರಿಗೆ ಮನವಿ ನೀಡುವುದಿಲ್ಲ ಎಂದು ಪಟ್ಟು ಹಿಡಿದ ಪ್ರತಿಭಟನಾಕಾರರು ಉಪ ಆಯುಕ್ತರಿಗೆ ಮನವಿ ನೀಡದೆ ವಾಪಾಸ್ ಕಳುಹಿಸಿದರು. ಆಯುಕ್ತರು ಸ್ಥಳಕ್ಕೆ ಬಂದು ಪಟ್ಟಣ ವ್ಯಾಪಾರ ಸಮಿತಿ ಸಭೆಗೆ ದಿನ ನಿಗದಿಗೊಳಿಸಬೇಕೆಂದು ಪಟ್ಟು ಹಿಡಿದ ಬೀದಿ ವ್ಯಾಪಾರಿಗಳ ಘೋಷಣೆ ಕೂಗುತ್ತಾ ಪಾಲಿಕೆ ಕಚೇರಿಗೆ ಮುತ್ತಿಗೆ ಹಾಕುವ ಪ್ರಯತ್ನ ಮಾಡಿದಾಗ ಪೋಲಿಸರು ಪಾಲಿಕೆ ಅಧಿಕಾರಿಗಳಲ್ಲಿ ಮಾತುಕತೆ ನಡೆಸಿ ಜಂಟಿ ಆಯುಕ್ತರ ಮೂಲಕ ಜೂನ್ 17 ಕ್ಕೆ ಪಟ್ಟಣ ವ್ಯಾಪಾರ ಸಮಿತಿ ಸಭೆ ನಡೆಸುವುದಾಗಿ ಅಧಿಕೃತ ಘೋಷಣೆ ಮಾಡಿದ ಪ್ರತಿಭಟನೆ ಹಿಂಪಡೆಯಲಾಯಿತು.
ಬರ್ಕೆ,ಉರ್ವ, ಬಂದರು ಪೋಲಿಸರು ಬಿಗಿ ಪೋಲಿಸ್ ಬಂದೋಬಸ್ ಮಾಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು