ಇತ್ತೀಚಿನ ಸುದ್ದಿ
ಸುಳ್ಳು ಪ್ರಮಾಣ ಪತ್ರ ಪ್ರಕರಣ: ಚಿಕ್ಕಪೇಟೆ ಬಿಜೆಪಿ ಶಾಸಕ ಗರುಡಾಚಾರ್ ಗೆ ಜೈಲು ಶಿಕ್ಷೆ
14/10/2022, 09:47
ಬೆಂಗಳೂರು(reporterkarnataka.com): ಸುಳ್ಳು ಪ್ರಮಾಣ ಪತ್ರ ನೀಡಿದ ಪ ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಉದಯ್ ಗರುಡಾಚಾರ್ ಅವರಿಗೆ ಬೆಂಗಳೂರಿನ ನ್ಯಾಯಾಲಯ ಜೈಲು ಶಿಕ್ಷೆ ವಿಧಿಸಿದೆ.
ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್, ಉದಯ್ ಗರುಡಾಚಾರ್ಗೆ 6 ತಿಂಗಳು ಜೈಲು ಹಾಗೂ 10 ಸಾವಿರ ದಂಡ ವಿಧಿಸಿ ಆದೇಶ ಹೊರಡಿಸಿದೆ.
2018ರ ಚುನಾವಣೆಯಲ್ಲಿ ಗರುಡಾಚಾರ್ ಅವರು
ಬೆಂಗಳೂರಿನ ಚಿಕ್ಕಪೇಟೆ ಕ್ಷೇತ್ರದಲ್ಲಿ 57,312 ಮತಗಳನ್ನು ಪಡೆದು ಕಾಂಗ್ರೆಸ್‌ನ ಆರ್. ವಿ. ದೇವರಾಜ್ ವಿರುದ್ಧ ಗೆಲುವು ಸಾಧಿಸಿದ್ದರು.
ಗರುಡಾಚಾರ್ 2018 ರಲ್ಲಿ ಚಿಕ್ಕಪೇಟೆ ಚುನಾವಣೆಯ್ಲಿ ಸ್ಪರ್ಧಿಸಿದ್ದಾಗ ಪ್ರಮಾಣಪತ್ರದಲ್ಲಿ ಸುಳ್ಳು ಮಾಹಿತಿ ನೀಡಿದ್ದರು. ಚುನಾವಣಾ ಆಯೋಗಕ್ಕೆ ಸಲ್ಲಿಸಿದ್ದ ಅಫಿಡವಿಟ್‌ನಲ್ಲಿ ಕ್ರಿಮಿನಲ್ ಕೇಸ್ ಗಳ ಮಾಹಿತಿ ಮುಚ್ಚಿಟ್ಟಿದ್ದರು ಎಂದು ಆರೋಪಿಸಿ ಪ್ರಕಾಶ್ ಶೆಟ್ಟಿ ಎಂಬುವರು ಅಶೋಕನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಉದಯ್ ಗರುಡಾಚಾರ್ ಅವರು ಶಿಕ್ಷೆ ಪ್ರಕಟವಾದ ಬಳಿಕ ಜಾಮೀನುಗಾಗಿ ಮನವಿ ಮಾಡಿದ್ದರು. ಇದನ್ನು ಪರಿಶೀಲಿಸಿದ ಕೋರ್ಟ್ ಜಾಮೀನು ನೀಡಿದೆ. 25,000 ರೂಪಾಯಿ ಬಾಂಡ್, ಶ್ಯುರಿಟಿ ಒದಗಿಸಲು ನ್ಯಾಯಾಧೀಶರು ಸೂಚನೆ ನೀಡಿದ್ದಾರೆ.