8:36 PM Tuesday2 - December 2025
ಬ್ರೇಕಿಂಗ್ ನ್ಯೂಸ್
ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ…

ಇತ್ತೀಚಿನ ಸುದ್ದಿ

ಸುಳ್ಳು ವದಂತಿಗಳೇ ಬಿಜೆಪಿ ಬಂಡವಾಳ: ಬಂಟ್ವಾಳ ಕಾಂಗ್ರೆಸ್ ಅಭ್ಯರ್ಥಿ ರಮಾನಾಥ ರೈ

28/04/2023, 14:14

ಬಂಟ್ವಾಳ(reporterkarnataka.com): ಸುಳ್ಳು, ವದಂತಿಗಳೇ ಬಿಜೆಪಿ ಬಂಡವಾಳ. ಆ ಮೂಲಕವೇ ಅಧಿಕಾರದಲ್ಲಿ ಮುಂದುವರಿಯಬಹುದು ಎಂದು ಅದು ಹಗಲು ಕನಸು ಕಾಣುತ್ತಿದೆ ಎಂದು ಕಾಂಗ್ರೆಸ್ ಅಭ್ಯರ್ಥಿ ಬಿ.ರಮಾನಾಥ ರೈ ಹೇಳಿದರು.
ಗೋಳ್ತಮಜಲು ವಲಯ ಕಾಂಗ್ರೆಸ್ ಚುನಾವಣಾ ಕಚೇರಿಗೆ ಚಾಲನೆ ನೀಡಿ ಅವರು ಮಾತನಾಡಿದರು.
ಜನರು ಈ ಬಾರಿ ಕಾಂಗ್ರೆಸ್ ಗೆ ಮತ ಚಲಾಯಿಸುವ ಬಗ್ಗೆ ಈಗಾಗಲೇ ನಿರ್ಧರಿಸಿದ್ದಾರೆ. ನನ್ನ ಅಧಿಕಾರಾವಧಿ ಮತ್ತು ಕಳೆದ ಐದು ವರ್ಷದ ಇನ್ನೊಬ್ಬರ ಅಧಿಕಾರಾವಧಿಯನ್ನು ಜನರು ತುಲನೆ ಮಾಡಿ ನೋಡುತ್ತಿದ್ದಾರೆ. ನನ್ನ ಅವಧಿಯಲ್ಲಾದ ಅಭಿವೃದ್ಧಿ ಕಾರ್ಯಗಳನ್ನು ಪರಿಗಣಿಸಿದರೆ, ಕಳೆದ ಐದು ವರ್ಷದಲ್ಲಿ ಬಿಜೆಪಿಗರು ಮಾಡಿರುವ ಸಾಧನೆ ಶೂನ್ಯವೆಂದು ಜನರು ಕ್ಷೇತ್ರಾದ್ಯಂತ ಮಾತನಾಡಿಕೊಳ್ಳುತ್ತಿದ್ದಾರೆ. ಹೀಗಾಗಿ ಮತ್ತೆ ಕಾಂಗ್ರೆಸ್ ಗೆಲ್ಲಿಸುವುದೊಂದೇ ಇದಕ್ಕಿರುವ ಸೂಕ್ತ ಪರಿಹಾರ ಎಂಬುದಾಗಿ ಜನತೆ ನಿರ್ಧರಿಸಿದ್ದಾರೆ ಎಂದು ರೈ ತಿಳಿಸಿದರು.

ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ನನ್ನ ಅವಧಿಯಲ್ಲಿ ಸಮಗ್ರ ಅಭಿವೃದ್ಧಿಯಾಗಿದೆ. ತಾಲೂಕು ಆಡಳಿತಕ್ಕೆ ಸಂಬಂಧಿಸಿದ ಎಲ್ಲಾ ರೀತಿಯ ಕಟ್ಟಡಗಳು, ಆರೋಗ್ಯ ಇಲಾಖೆಗೆ ಸಂಬಂಧಿಸಿದ ಆಸ್ಪತ್ರೆಗಳು, ಶಿಕ್ಷಣ ವ್ಯವಸ್ಥೆಗೆ ಪೂರಕವಾದ ಸರಕಾರಿ ಶೈಕ್ಷಣಿಕ ಸಂಸ್ಥೆಗಳ ಕಟ್ಟಡಗಳು ನನ್ನ ಅವಧಿಯಲ್ಲೇ ನಿರ್ಮಾಣಗೊಂಡಿವೆ. ಕ್ಷೇತ್ರದಾದ್ಯಂತ ಸುಸಜ್ಜಿತ ರಸ್ತೆಗಳನ್ನು ನಿರ್ಮಿಸಲಾಗಿದೆ. ನೀರಾವರಿ ವ್ಯವಸ್ಥೆಗೆ ಕಿಂಡಿ ಅಣೆಕಟ್ಟುಗಳನ್ನು ನಿರ್ಮಿಸಲಾಗಿದೆ ಎಂದು ಅವರು ಸ್ಮರಿಸಿದರು.
ಕ್ಷೇತ್ರದ ಜನತೆ ಸಾಕಷ್ಟು ವಿದ್ಯಾವಂತರು, ಬುದ್ಧಿವಂತರಿದ್ದಾರೆ. ಬಿಜೆಪಿಗರು ಪ್ರತಿ ಬಾರಿ ಇವರನ್ನು ಯಾಮಾರಿಸಲು ಸಾಧ್ಯವಿಲ್ಲ. ಈ ಬಾರಿ ಖಚಿತವಾಗಿ ಅಭಿವೃದ್ಧಿ ಪರ ನಾಯಕತ್ವದ ಜೊತೆ ಜನತೆ ನಿಲ್ಲುತ್ತಾರೆ ಎಂದು ಅವರು ಭರವಸೆ ವ್ಯಕ್ತಪಡಿಸಿದರು.
ಕೆಪಿಸಿಸಿ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ, ವಲಯ ಅಧ್ಯಕ್ಷ ಹುಸೇನ್, ಎಪಿಎಂಸಿ ಮಾಜಿ ಅಧ್ಯಕ್ಷ ಪದ್ಮನಾಭ ರೈ, ಅಂಡೇಲು ಮೋನು, ಹಿರಿಯ ಕಾಂಗ್ರೆಸಿಗ ಇಬ್ರಾಹೀಂ, ಗೋಳ್ತಮಜಲು ಯುವ ಕಾಂಗ್ರೆಸ್ ಅಧ್ಯಕ್ಷ ಜಾಫರ್, ವಲಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಇಮ್ತಿಯಾಝ್ ಕಲ್ಲಡ್ಕ, ವಲಯ ಯುವ ಕಾಂಗ್ರೆಸ್ ನ ಇಬ್ರಾಹೀಂ ಕೆ.ಸಿ., ನಝೀರ್ ಕಲ್ಲಡ್ಕ, ಅಶ್ರಫ್ ಮದಕ, ಸಿದ್ದೀಕ್ ಜಿ.ಎಸ್., ಸೂರಜ್ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು