5:08 PM Tuesday30 - December 2025
ಬ್ರೇಕಿಂಗ್ ನ್ಯೂಸ್
ಸರ್ಕಾರದ ಜಮೀನು ಅಕ್ರಮ ಒತ್ತುವರಿಯಾದರೆ ಕಂದಾಯ ಇಲಾಖೆ ಹಾಗೂ ಪಾಲಿಕೆ ಅಧಿಕಾರಗಳ ಮೇಲೆ… ಶೂನ್ಯ ಅಡಚಣೆಯೊಂದಿಗೆ ವಿದ್ಯುತ್ ಪೂರೈಕೆಗೆ ಕ್ರಮ: ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ… ಕಾನೂನು ಸುವ್ಯವಸ್ಥೆ ವೈಫಲ್ಯಕ್ಕೆ ಗೃಹ ಸಚಿವರೇ ಹೊಣೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Bangalore | ಹೊಸ ವರ್ಷಾಚರಣೆ: ಅಹಿತಕರ ಘಟನೆ ನಡೆಯದಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ತಾಕೀತು ಕನ್ನಡ ಭಾಷೆ, ನೆಲ, ಜಲ, ಗಡಿ, ಕನ್ನಡಿಗರಿಗೆ ಉದ್ಯೋಗ ವಿಚಾರದಲ್ಲಿ ರಾಜಿ ಇಲ್ಲ:… ಮೈಸೂರು ಅರಮನೆ ಬಳಿ ಸ್ಫೋಟ: ಸಾವಿನ ಸಂಖ್ಯೆ 3ಕ್ಕೆ ಏರಿಕೆ; ಹೆಚ್ಚಿದ ಆತಂಕ ಮಂಗಳೂರು ಡೇಟಾ ಸೆಂಟರ್ ಭಾರತದ ಅತ್ಯಂತ ವೆಚ್ಚ-ದಕ್ಷ ಕೇಂದ್ರ: ಫೀಸಿಬಿಲಿಟಿ ವರದಿ ಹೊಸ ವರ್ಷಾಚರಣೆ: ರೆಸಾರ್ಟ್, ಹೋಟೆಲ್, ಹೋಂ ಸ್ಟೇ ಮಾಲೀಕರಿಗೆ ಕಟ್ಟುನಿಟ್ಟಿನ ಸೂಚನೆ ಕೊಡಗಿನಲ್ಲಿ ಅರಣ್ಯ ರಕ್ಷಕರಿಂದಲೇ ಮರಗಳ ಲೂಟಿ: ಲೋಡರ್ ಬಂಧನ; ನಾಲ್ವರು ಪರಾರಿ ಖಾಸಗಿ ವಾಹನಕ್ಕೆ ನಾಮಫಲಕ | ಪೊಲೀಸಪ್ಪನಿಂದೇ ಕಾನೂನು ಉಲ್ಲಂಘನೆ: ದಂಡ

ಇತ್ತೀಚಿನ ಸುದ್ದಿ

ಸುಳ್ಯ: 4 ವರ್ಷದ ಮಗು ಜತೆ ಬಾವಿಗೆ ಹಾರಿದ ಗೃಹಿಣಿ; ತಾಯಿ ಸಾವು, ಅದೃಷ್ಟವಶಾತ್ ಕೂಸು ಬಚಾವ್

29/06/2022, 23:11

ಸುಳ್ಯ(reporterkarnataka.com): ಸುಳ್ಯದ ದೇವಚಳ್ಳ ಗ್ರಾಮದ ತಳೂರು ಎಂಬಲ್ಲಿ ತಾಯಿಯೊಬ್ಬರು ತನ್ನ 4 ವರ್ಷದ ಹೆಣ್ಣು ಮಗುವಿನೊಂದಿಗೆ ಬಾವಿಗೆ ಹಾರಿದ್ದು, ಅದೃಷ್ಟವಶಾತ್ ಮಗು ಬದುಕುಳಿದ ಘಟನೆ ನಡೆದಿದೆ.

ಸುಳ್ಯದ ಕಾಲೇಜೊಂದರಲ್ಲಿ ಕ್ಲರ್ಕ್ ಆಗಿ ಸೇವೆ ಸಲ್ಲಿಸುತ್ತಿದ್ದ ಗೀತಾ (34) ಎಂಬವರು ಬುಧವಾರ ಮುಂಜಾನೆ ತನ್ನ 4 ವರ್ಷದ ಮಗಳು ಪೂರ್ವಿಕಾಳೊಂದಿಗೆ ಬಾವಿಗೆ ಹಾರಿದ್ದರೆನ್ನಲಾಗಿದೆ.

ಮುಂಜಾನೆ ಗೀತಾ ಅವರು ಮನೆಯಲ್ಲಿ ಇಲ್ಲದಿರುವುದನ್ನು ಗಮನಿಸಿ ಮನೆಯವರು ಹುಡುಕಾಡಿದಾಗ ಗೀತಾ ಮತ್ತು ಮಗು ಬಾವಿಯಲ್ಲಿ ಬಿದ್ದಿರುವುದು ಕಂಡುಬಂತು. ಮಗು ಪೂರ್ವಿಕಾ ಬಾವಿಯೊಳಗೆ ಇದ್ದ ಕಲ್ಲನ್ನು ಹಿಡಿದುಕೊಂಡು ಬದುಕುಳಿದಿದ್ದು, ತಕ್ಷಣ ಆಕೆಯನ್ನು ಮೇಲಕ್ಕೆತ್ತಿ ಸುಳ್ಯ ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆದೊಯ್ಯಲಾಯಿತು.

ಅದಾಗಲೇ ಗೀತಾ ನೀರಲ್ಲಿ ಮುಳುಗಿ ಅಸು ನೀಗಿದ್ದರೆನ್ನಲಾಗಿದೆ. ತೀವ್ರ ಆಘಾತಕ್ಕೊಳಗಾಗಿದ್ದ ಮಗುವನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕರೆದೊಯ್ಯಲಾಗಿದೆ.

ಮೃತ ಗೀತಾ ಅವರು ಅಗ್ನಿಶಾಮಕ ದಳದ ಸಿಬ್ಬಂದಿ ದಯಾನಂದ ಎಂಬವರ ಪತ್ನಿ ಎಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು