ಇತ್ತೀಚಿನ ಸುದ್ದಿ
ಸುಳ್ಯ: ಬಾಲಕಿಯ ಅತ್ಯಾಚಾರ ಪ್ರಕರಣ; ಇನ್ನಿಬ್ಬರು ಆರೋಪಿಗಳ ಬಂಧನ; ಬಂಧಿತರ ಸಂಖ್ಯೆ 3ಕ್ಕೇರಿಕೆ
26/06/2023, 19:41
ಸುಳ್ಯ(reporterkarnataka.com): ಬೆಳ್ಳಾರೆ ಪೊಲೀಸ್ ಠಾಣೆ ವ್ಯಾಪ್ತಿಯ ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ನಡೆದ ಅತ್ಯಾಚಾರಕ್ಕೆ ಸಂಬಂಧಿಸಿದ್ದಂತೆ ಪೊಲೀಸರು ಇನ್ನಿಬ್ಬರು ಆರೋಪಿಗಳನ್ನು ಬಂಧಿಸುವ ಮೂಲಕ ಬಂಧಿತರ ಸಂಖ್ಯೆ ಮೂರಕ್ಕೇರಿದೆ.
ಸಂತ್ರಸ್ತ ಬಾಲಕಿಯ ತಂದೆ ಪೊಲೀಸರಿಗೆ ನೀಡಿದ ದೂರಿನ ಹಿನ್ನೆಲೆಯಲ್ಲಿ ಈ ಹಿಂದೆ ಕಲ್ಮಡ್ಕದ ಚಿದಾನಂದ ಎಂಬಾತನನ್ನು ಪೊಲೀಸರು ಬಂಧಿಸಿದ್ದರು. ಈತ ಬಾಲಕಿಯನ್ನು ಪುಸಲಾಯಿಸಿ ಕರೆದು ಕೊಂಡು ಹೋಗಿ ಆಕೆಯ ಮೇಲೆ ಅತ್ಯಾಚಾರ ನಡೆಸಿದ್ದ ಎಂದು ಬಾಲಕಿಯ ತಂದೆ ದೂರು ನೀಡಿದ್ದರು. ಇದೀಗ ಬಾಲಕಿಯ ಹೇಳಿಕೆ ಪ್ರಕಾರ ಕಲ್ಮಡ್ಕದ ಚಿದಾನಂದ ಮಾತ್ರವಲ್ಲದೆ, ಬೇರೆ ಬೇರೆ ಸಂದರ್ಭದಲ್ಲಿ ಇನ್ನಿಬ್ಬರು ತನ್ನ ಮೇಲೆ ಅತ್ಯಾಚಾರ ನಡೆಸಿದ್ದರು ಎಂದು ಭಯಾನಕ ಹೇಳಿಕೆಯನ್ನು ಪೊಲೀಸರಿಗೆ ನೀಡಿದ್ದಳು. ಬಾಲಕಿಯ ಹೇಳಿಕೆ ಪ್ರಕಾರ ಇನ್ನಿಬ್ಬರು ಆರೋಪಿಗಳಾದ ಚೇತನ್ ಕಾಯರ್ತಡ್ಕ ಹಾಗೂ ದರ್ಶನ್ ಕಾಯರ್ತಡ್ಕ ಎಂಬಿಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಬೆಳ್ಳಾರೆ ಪೊಲೀಸರು ಫೋಕ್ಸೋ ಕಾಯ್ದೆ ಪ್ರಕಾರ ಕೇಸು ದಾಖಲಿಸಿದ್ದಾರೆ.