6:47 PM Saturday13 - December 2025
ಬ್ರೇಕಿಂಗ್ ನ್ಯೂಸ್
ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ… ಕೆಪಿಟಿಸಿಎಲ್: 448 ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್‌ಗಳ ನೇಮಕ ಭಾರತದಲ್ಲಿ ಎಫ್ ಡಿಐ ಹೆಚ್ಚಳ: ಪ್ರಧಾನಿ ಮೋದಿಗೆ ಸಂಸದ ಬಸವರಾಜ ಬೊಮ್ಮಾಯಿ ಅಭಿನಂದನೆ ಮೈಸೂರು ಅರಮನೆ ಮುಖ್ಯ ದ್ವಾರದ ಮೇಲ್ಚಾವಣಿ ಕುಸಿತ: ವರಾಹ ಗೇಟ್ ಬಳಿ ಬ್ಯಾರಿಕೇಡ್… ಶಾಲೆಗಳ ಮೂಲಸೌಕರ್ಯಕ್ಕೆ ಕ್ರಮ; ಮಕ್ಕಳ ಶೂ-ಸಾಕ್ಸ್ ಅನುದಾನ ಪೂರ್ಣ ಬಿಡುಗಡೆ: ಸಚಿವ ಮಧು… ಹಂತ ಹಂತವಾಗಿ ಖಾಲಿ ಹುದ್ದೆಗಳ ಭರ್ತಿ: ಬೆಳಗಾವಿ ಅಧಿವೇಶನದಲ್ಲಿ ಮುಖ್ಯಮಂತ್ರಿ ಭರವಸೆ

ಇತ್ತೀಚಿನ ಸುದ್ದಿ

ಸುಳ್ಯ: ಗುಂಡು ಹಾರಿಸಿ ಪತ್ನಿಯ ಕೊಲೆ ಮಾಡಿ ಆ್ಯಸಿಡ್ ಕುಡಿದು ಪತಿ ಆತ್ಮಹತ್ಯೆ: ಮದ್ಯದ ಅಮಲಿನಲ್ಲಿ ದುಷ್ಕೃತ್ಯ

19/01/2025, 11:37

ಸುಳ್ಯ(reporterkarnataka.com)
ವ್ಯಕ್ತಿಯೊಬ್ಬರು ಕುಡಿದ ಅಮಲಿನಲ್ಲಿ ತನ್ನ ಪತ್ನಿಯನ್ನು ಗುಂಡು ಹಾರಿಸಿ ಕೊಲೆ ಮಾಡಿ ಬಳಿಕ ತಾನು ಆ್ಯಸಿಡ್ ಕುಡಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಲ್ಲಿಗೆ ಸಮೀಪದ ನೆಲ್ಲೂರು ಎಂಬಲ್ಲಿ ನಡೆದಿದೆ.


ಗಂಡನ ಗುಂಡಿನ ದಾಳಿಗೆ ಸಾವನ್ನಪ್ಪಿದ ಮಹಿಳೆಯನ್ನು
ವಿನೋದಾ ಎಂದು ಗುರುತಿಸಲಾಗಿದೆ.
ಪತಿ ರಾಮಚಂದ್ರ ಕೊಲೆಗಾರ ತಿಳಿದು ಬಂದಿದೆ.
ರಾಮಚಂದ್ರ ನಿತ್ಯ ಕುಡಿದು ಬಂದು ಪತ್ನಿ ಜೊತೆ ಜಗಳವಾಡುತ್ತಿದ್ದ ಎನ್ನಲಾಗಿದೆ. ಅದೇ ರೀತಿ ರಾತ್ರಿ ಕುಡಿದು ಬಂದು ಪತ್ನಿ ವಿನೋದಾ ಜತೆ ರಾಮಚಂದ್ರ ಗಲಾಟೆ ಮಾಡಿದ್ದ. ಜಗಳ ಬಿಡಿಸಲು ಬಂದ ಮಗ ಪ್ರಶಾಂತ್​​​ನಿಗೆ ಬಂದೂಕು ತೋರಿಸಿ ಫೈರಿಂಗ್​​ ಮಾಡುವುದಾಗಿ ರಾಮಚಂದ್ರ ಬೆದರಿಸಿದ್ದಾನೆ. ಮಗನಿಗೆ ಶೂಟ್​​ ಮಾಡಲು ಯತ್ನಿಸಿದಾಗ ತಾಯಿ ವಿನೋದಾ ಅಡ್ಡ ಬಂದಿದ್ದಾರೆ. ಈ ವೇಳೆ ಗುಂಡು ತಗುಲಿ ವಿನೋದಾ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಪಶ್ಚಿಮ ವಲಯ ಪೊಲೀಸ್‌ ಮಹಾ ನಿರೀಕ್ಷಕರಾದ ಅಮಿತ್‌ ಸಿಂಗ್‌ ಮತ್ತು ಜಿಲ್ಲಾ ಪೊಲೀಸ್‌ ಅಧೀಕ್ಷಕ ಯತೀಶ್‌ ಎನ್‌.
ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಸುಳ್ಯ ಪೊಲೀಸ್ ಠಾಣೆಯಲ್ಲಿ ಬಿಎನ್‌ಎಸ್ ಕಾಯ್ದೆ 2023ರ ಕಲಂ 103 ಮತ್ತು ಶಸ್ತ್ರಾಸ್ತ್ರ ಕಾಯ್ದೆಯ ಸೆಕ್ಷನ್ 25 ಮತ್ತು 27 ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು