ಇತ್ತೀಚಿನ ಸುದ್ದಿ
ಸುಳ್ಯ: ಮಣ್ಣು ಕುಸಿದು ಮಹಿಳೆ ಸಹಿತ 3 ಮಂದಿ ಕಾರ್ಮಿಕರ ದಾರುಣ ಸಾವು; ಘಟನಾ ಸ್ಥಳಕ್ಕೆ ಸಚಿವ ಅಂಗಾರ ಭೇಟಿ
25/03/2023, 19:10
ಸುಳ್ಯ(reporterkarnataka.com): ತಡೆಗೋಡೆ ನಿರ್ಮಾಣ ಕಾಮಗಾರಿ ವೇಳೆ ಮಣ್ಣು ಕುಸಿದು 3 ಮಂದಿ ಕಾರ್ಮಿಕರು ಮಣ್ಣಿನಡಿ ಸಿಲುಕಿ ಮೃತಪಟ್ಟ ದಾರುಣ ಸುಳ್ಯ ಸಮೀಪದ ಆಲೆಟ್ಟಿ ರಸ್ತೆಯ ಗುರುಂಪು ಎಂಬಲ್ಲಿ ನಡೆದಿದೆ. ಘಟನಾ ಸ್ಥಳಕ್ಕೆ ಸಚಿವ ಎಸ್. ಅಂಗಾರ ಭೇಟಿ ನೀಡಿದ್ದಾರೆ.
ಮನೆಯ ಹಿಂಭಾಗದಲ್ಲಿ ತಡೆಗೋಡೆ ನಿರ್ಮಾಣಕ್ಕೆ ಪಿಲ್ಲರ್ ಕಾಮಗಾರಿ ನಡೆಯುತ್ತಿತ್ತು. 7 ಮಂದಿ ಕಾರ್ಮಿಕರು ಕಾಮಗಾರಿಯಲ್ಲಿ ತೊಡಗಿದ್ದರು.
ಈ ವೇಳೆ ಏಕಾಏಕಿ ಮಣ್ಣು ಕುಸಿದ ಪರಿಣಾಮ 3 ಮಂದಿ ಕಾರ್ಮಿಕರು ಮಣ್ಣಿನಡಿ ಸಿಲುಕಿ ಜೀವಂತ ಸಮಾಧಿಯಾದರು. ಇತರ 4 ಮಂದಿ ಕಾರ್ಮಿಕರು ಓಡಿ ಹೋಗಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಮಣ್ಣಿನಡಿ ಸಿಲುಕಿದವರನ್ನು ಜೇಸಿಬಿ ಮೂಲ ಹೊರತೆಗೆಯಲಾಯಿತು. ಆದರೆ ಆ ವೇಳೆಗೆ ಅವರು ಸಾವನ್ನಪ್ಪಿದ್ದರು. ಮೃತಪಟ್ಟ ಕಾರ್ಮಿಕರನ್ನು ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಹಿರೇಗೊಡ್ಡೆಟ್ಟಿ ಸೋಮಶೇಖರ್ ರೆಡ್ಡಿ (45), ಅವರ ಪತ್ನಿ ಶಾಂತಕ್ಕ (35) ಎಂದು ಗುರುತಿಸಲಾಗಿದೆ. ಇನ್ನೊಬ್ಬರ ಗುರುತು ಪತ್ತೆ ಹಚ್ಚುವ ಕಾರ್ಯ ನಡೆದಿದೆ.
ಘಟನಾ ಸ್ಥಳಕ್ಕೆ ಸಚಿವ ಎಸ್.ಅಂಗಾರ, ತಹಶೀಲ್ದಾರ್ ಮಂಜುನಾಥ್, ತಾಲ್ಲೂಕು ಪಂಚಾಯಿತಿ ಇಒ ಭವಾನಿಶಂಕರ್, ನಗರ ಪಂಚಾಯಿತಿ ಅಧ್ಯಕ್ಷ ವಿನಯಕುಮಾರ್ ಕಂದಡ್ಕ, ಮುಖ್ಯಾಧಿಕಾರಿ ಸುಧಾಕರ್, ಸುಳ್ಯ ಪೊಲೀಸರು, ಅಗ್ನಿಶಾಮಕ ದಳ ಸಿಬ್ಬಂದಿ ಭೇಟಿ ನೀಡಿದ್ದಾರೆ.














