ಇತ್ತೀಚಿನ ಸುದ್ದಿ
ಸುಳ್ಯ-ಸಂಪಾಜೆ ಮತ್ತೆ ಭೂಕಂಪನದ ತೀವ್ರತೆ ರಿಕ್ಟರ್ ಮಾಪಕದಲ್ಲಿ 2.1ರಷ್ಟು ದಾಖಲು
01/07/2022, 22:09
ಮಡಿಕೇರಿ(reporterkarnataka.com): ಕೊಡಗು ಮತ್ತು ದಕ್ಷಿಣಕನ್ನಡ ಜಿಲ್ಲೆಯ ಗಡಿ ಭಾಗದಲ್ಲಿ ಶುಕ್ರವಾರ ಮತ್ತೆ ಉಂಟಾದ ಭೂಕಂಪನ ರಿಕ್ಟರ್ ಮಾಪಕದಲ್ಲಿ 2.1ರಷ್ಟು ತೀವ್ರತೆ ದಾಖಲಾಗಿದೆ.
ಶುಕ್ರವಾರ ಪೂರ್ವಾಹ್ನ 10.47ರ ಸುಮಾರಿಗೆ ಭೂಕಂಪನ ಸಂಭವಿಸಿದ್ದು, ಕೊಡಗು– ದಕ್ಷಿಣ ಕನ್ನಡ ಗಡಿ ಗ್ರಾಮವಾಗಿರುವ ಚೆಂಬು ಹಾಗೂ ಪೆರಾಜೆಯಿಂದ 5.1 ಪಶ್ಚಿಮ ವಾಯುವ್ಯ ದಿಕ್ಕಿನಲ್ಲಿ ಭೂಮಿಯ 10 ಕಿಲೋಮೀಟರ್ ಆಳದಲ್ಲಿ ರಿಕ್ಟರ್ ಮಾಪಕ 2.1 ರಷ್ಟು ಭೂಕಂಪನವಾಗಿರುವುದಾಗಿ ಕೆಎಸ್‌ಎನ್‌ಡಿಎಂಸಿ ಮಾಹಿತಿ ನೀಡಿದೆ.
ಕಂಪನದ ಪರಿಣಾಮ ಮಡಿಕೇರಿ ತಾಲೂಕಿನ ಕರಿಕೆ ಭಾಗದ ಉತ್ತರ ವಾಯುವ್ಯ ದಿಕ್ಕಿನಲ್ಲಿ 9.1 ಕಿಲೋಮೀಟರ್ ವ್ಯಾಪ್ತಿಯಲ್ಲಿ, ಸಂಪಾಜೆ ಭಾಗದ ಪಶ್ಚಿಮದಲ್ಲಿ 11.6 ಕಿಲೋಮೀಟರ್ ವ್ಯಾಪ್ತಿಯಲ್ಲಿ, ಸುಳ್ಯ ತಾಲೂಕು ಭಾಗದ ಆಗ್ನೇಯದಲ್ಲಿ 11.3 ಕಿಲೋಮೀಟರ್ ವ್ಯಾಪ್ತಿಯಲ್ಲಿ ಕಾಣಿಸಿಕೊಂಡಿದ್ದು, ಈ ಪ್ರದೇಶದ 20-30 ಕಿಲೋಮೀಟರ್ ದೂರದಲ್ಲಿ ಭೂಕಂಪನದ ಅನುಭವವಾಗಿರುವುದಾಗಿ ಹೇಳಲಾಗಿದೆ.