ಇತ್ತೀಚಿನ ಸುದ್ದಿ
ಸುಳ್ಯದಲ್ಲಿ ಹಿಂದು ಮುಖಂಡನ ಕೊಲೆ ; ಬೈಕ್‌ನಲ್ಲಿ ಬಂದು ದುಷ್ಕರ್ಮಿಗಳಿಂದ ದಾಳಿ
26/07/2022, 22:40

ಬೆಳ್ಳಾರೆ(reporterkarnataka.com)
ಬೆಳ್ಳಾರೆಯಲ್ಲಿ ಯುವಕನೋರ್ವನನ್ನು ದುಷ್ಕರ್ಮಿಗಳು ಮಾರಾಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆಗೈದ ಘಟನೆ ಜು.26 ರಂದು ರಾತ್ರಿ ನಡೆದಿದೆ.
ಬಿಜೆಪಿ ಯುವ ಮೋರ್ಚಾ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ನೆಟ್ಟಾರು ಮೃತ ಯುವಕ ಎಂದು ತಿಳಿದುಬಂದಿದೆ. ಪ್ರವೀಣ್ ಅವರ ಸ್ವಂತ ಅಂಗಡಿ ಮುಂಭಾಗ ನಿಂತಿದ್ದ ವೇಳೆ ಬೈಕ್ ನಲ್ಲಿ ಮುಸುಕು ಧರಿಸಿಕೊಂಡು ಬಂದ ಮೂವರು ದುಷ್ಕರ್ಮಿಗಳು ಮಾರಾಕಾಸ್ತ್ರಗಳಿಂದ ಹಲ್ಲೆ ನಡೆಸಿ ಹತ್ಯೆಗೈದು, ಪರಾರಿಯಾಗಿದ್ದಾರೆ ಎನ್ನಲಾಗುತ್ತಿದೆ.
ಪ್ರವೀಣ್ ಸಾಮಾಜಿಕ, ರಾಜಕೀಯ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದರು.
ಚಿಂತಾಜನಕ ಸ್ಥಿತಿಯಲ್ಲಿದ್ದ ಪ್ರವೀಣ್ ನೆಟ್ಟಾರುರವರವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಅದಾಗಲೇ ಮೃತ ಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.