6:30 AM Saturday15 - November 2025
ಬ್ರೇಕಿಂಗ್ ನ್ಯೂಸ್
Kodagu | ಮಡಿಕೇರಿ ಸಮೀಪದ ಚೆಂಬು ಗ್ರಾಮದಲ್ಲಿ ಮನೆಗಳ್ಳತನ ಪ್ರಕರಣ: ಇಬ್ಬರ ಬಂಧನ ವೈಚಾರಿಕ-ವೈಜ್ಞಾನಿಕ ಮನೋಭಾವದ ಮಕ್ಕಳ ಮೇಲೆ ದೇಶದ ಭವಿಷ್ಯ ನಿಂತಿದೆ: ಸಿಎಂ ಸಿದ್ದರಾಮಯ್ಯ ಬಿಹಾರ ಚುನಾವಣೆ ಫಲಿತಾಂಶದಿಂದ ಪ್ರಧಾನಿ ಮೋದಿಯವರ ಜನಪ್ರೀಯತೆ ಮತ್ತೆ ದೃಢಪಟ್ಟಿದೆ: ಮಾಜಿ ಸಿಎಂ… ಚಾಕುವಿನಿಂದ ಇರಿದು ಕಾರ್ಮಿಕನ ಕೊಲೆ: ಅಸ್ಸಾಂ ಮೂಲದ ಆರೋಪಿ ಅಂದರ್; ತಪ್ಪುಮಾಹಿತಿ ನೀಡಿದಾತ… ಮೇಕೆದಾಟು ವಿರುದ್ಧದ ತಮಿಳುನಾಡು ಅರ್ಜಿ ಸುಪ್ರೀಂ ಕೋರ್ಟ್ ನಿಂದ ವಜಾ: ರಾಜ್ಯಕ್ಕೆ ಮಹಾಜಯ Shivamogga | ತೀರ್ಥಹಳ್ಳಿ ಸಮೀಪದ ತಳುವೆ ಬಳಿ ಅಪಘಾತ: ವ್ಯಕ್ತಿಯೋರ್ವನ ಕಾಲು ಕಟ್ ಎಲ್ಲಾ ಶೋಷಿತ ಸಮುದಾಯಗಳ ಧ್ವನಿಯಾಗಿ ಕಾಗಿನೆಲೆ ಪೀಠ ಸ್ಥಾಪಿಸಿದ್ದು ನಾನೇ: ಸಿಎಂ ಸಿದ್ದರಾಮಯ್ಯ Bangalore | ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದಾವಣಗೆರೆ ನಡುವೆ ನೇರ ಫ್ಲೈಬಸ್… Kodagu | ವಿರಾಜಪೇಟೆ: ಆತ್ಮಹತ್ಯೆಗೆ ಯತ್ನಿಸಿದ್ದ ಗೃಹಿಣಿ 3 ದಿನಗಳ ಬಳಿಕ ಚಿಕಿತ್ಸೆ… ಕೆಂಪು ಕೋಟೆ ಬಾಂಬ್ ಬ್ಲಾಸ್ಟ್ ಪ್ರಕರಣ | ಇಡೀ ದೇಶವೇ ಖಂಡಿಸಬೇಕಿದೆ: ಮಾಜಿ…

ಇತ್ತೀಚಿನ ಸುದ್ದಿ

ಸುಳ್ಯದಲ್ಲಿ ಕೈ ಅಭ್ಯರ್ಥಿಯ ಬದಲಾಯಿಸಿ; ನಂದಕುಮಾರ್ ಗೆ ಟಿಕೆಟ್ ನೀಡಿ: ನಿಷ್ಠಾವಂತ ಕಾರ್ಯಕರ್ತರ ಸಮಾವೇಶದಲ್ಲಿ ವ್ಯಾಪಕ ಒತ್ತಾಯ

09/04/2023, 23:59

ಸುಳ್ಯ(reporterkarnataka.com): ಸುಳ್ಯ ಕಾಂಗ್ರೆಸ್ ಘೋಷಣೆ ಮಾಡಿರುವ ಕೈ ಅಭ್ಯರ್ಥಿ ಯನ್ನು ಬದಲಾವಣೆ ಮಾಡಬೇಕು, ನಂದಕುಮಾರ್ ಅವರಿಗೆ ಟಿಕೆಟ್ ನೀಡಬೇಕು ಎನ್ನುವ ಮೂಲಕ ಸುಳ್ಯ ಕಾಂಗ್ರೆಸ್ ನಲ್ಲಿ ನಂದಕುಮಾರ್ ಪರ ಕೂಗು ದಿನ ಕಳೆದಂತೆ ಗಟ್ಟಿಯಾಗುತ್ತಿದೆ. ನಂದಕುಮಾರ್ ಅವರಿಗೆ ಪಕ್ಷದ ಬಿ. ಫಾರ್ಮ್ ಕೊಟ್ಟು ಅಭ್ಯರ್ಥಿಯಾಗಿ ಘೋಷಿಸಬೇಕು. ಇಲ್ಲದಿದ್ದರೆ ಅವರನ್ನು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಸಲಾಗುವುದು ಎಂದು ನಿಷ್ಠಾವಂತ ಕಾಂಗ್ರೆಸಿಗರು ಒತ್ತಾಯಿಸಿದ್ದಾರೆ.
ಸುಳ್ಯ ವಿಧಾನ ಸಭೆ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಜತೆಗೆ ಬಿ ಫಾರ್ಮ್ ಅನ್ನು ಗೆಲ್ಲುವ ಅಭ್ಯರ್ಥಿ ನಂದಕುಮಾರ್ ಗೆ ಕೊಡಲೇ ಬೇಕು. ಒಂದು ವೇಳೆ ನಾಯಕರು ಯಾವುದೇ ಕ್ರಮಕ್ಕೆ ಮುಂದಾಗದೇ ಇದ್ದಲ್ಲಿ ತಟಸ್ಥ ಉಳಿಯುವ ಜತೆಗೆ ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ನಂದಕುಮಾರ್ ಅವರನ್ನು ಕಣಕ್ಕೆ ಇಳಿಸಲಾಗುವುದು ಎಂಬ ಖಡಕ್ ಸಂದೇಶವನ್ನು ಸುಳ್ಯ ಹಾಗೂ ಕಡಬ ಭಾಗದ ಕಾಂಗ್ರೆಸ್ ನಿಷ್ಠಾವಂತ ಕಾರ್ಯಕರ್ತರು ಭಾನುವಾರ ಹಮ್ಮಿಕೊಂಡಿದ್ದ ಸಮಾವೇಶದ ಮೂಲಕ ಕೆಪಿಸಿಸಿ ಹಾಗೂ ಹೈಕಮಾಂಡ್ ಗೆ ರವಾನೆ ಮಾಡಿದ್ದಾರೆ.
ಸುಳ್ಯ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯ ನಿಂತಿಕಲ್ಲಿನಲ್ಲಿ ಭಾನುವಾರ ನಡೆದ ನಂದಕುಮಾರ್ ಪರ ನಡೆದ ನಿಷ್ಢಾವಂತ ಕಾರ್ಯಕರ್ತರ ಸಮಾವೇಶದಲ್ಲಿ‌ ಈ ಹಕ್ಕೊತ್ತಾಯ ಮಾಡಲಾಯಿತು. ಕಾಂಗ್ರೆಸ್ ನಾಯಕರಿಗೆ ಶಕ್ತಿ ಪ್ರದರ್ಶನ ಮಾಡುವ ಮೂಲಕ ನಿಷ್ಠಾವಂತ ಕಾರ್ಯಕರ್ತರು ಸಡ್ಡು ಹೊಡೆದಿದ್ದಾರೆ. ಹಾಲಿ ಅಭ್ಯರ್ಥಿ ಕೃಷ್ಣಪ್ಪ ಅವರಿಗೆ ಘೋಷಣೆ ಮಾಡಿರುವ ಟಿಕೆಟ್ ಅನ್ನು ತಡೆ ಹಿಡಿದು ನಂದಕುಮಾರ್ ಅವರಿಗೆ ಬಿ ಫಾರ್ಮ್ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
ನಿಂತಿಕಲ್ಲಿನ ಧರ್ಮಶ್ರೀ ಆರ್ಕೇಡ್ ಸಭಾಂಗಣದಲ್ಲಿ 1500 ಕ್ಕೂ ಹೆಚ್ಚು ಕಡಬ ಹಾಗೂ ಸುಳ್ಯ ಬ್ಲಾಕ್ ಸೇರಿದಂತೆ ವಿವಿಧ ಕಡೆಗಳಿಂದ ಬಂದಿದ್ದ ಕಾರ್ಯಕರ್ತರು ಪ್ರಮುಖ ಅಜೆಂಡಾ ನಂದಕುಮಾರ್ ಅವರಿಗೆ ಬಿ ಫಾರ್ಮ್ ನೀಡಲೇಬೇಕು ಎಂಬುದಾಗಿತ್ತು.
ಕಾರ್ಯಕರ್ತರೆ ಹಣ ಹಾಕಿ ಸಮಾವೇಶ ಮಾಡಿದ್ದೇವೆ. ಇದರಲ್ಲಿ ಯಾವುದೇ ರಾಜಕೀಯ ಇಲ್ಲ ಎಂದು ಕಾಂಗ್ರೆಸ್ ಮುಖಂಡರಾದ ಭವಾನಿ ಶಂಕರ್, ಬಾಲಕೃಷ್ಣ ಬೆಲ್ಲಾರೆ, ಉಷಾ ಅಂಚನ್, ವಿಜಯಕುಮಾರ್ ಶೆಟ್ಟಿ, ಗಣೇಶ್, ಗೋಕುಲ್ ದಾಸ್ ಸೇರಿದಂತೆ ಸಮಾವೇಶದ‌ಲ್ಲಿ ಪಾಲ್ಗೊಂಡವರು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು