ಇತ್ತೀಚಿನ ಸುದ್ದಿ
ಸುಳ್ಯದಲ್ಲಿ ರಸ್ತೆ ಅಪಘಾತ: ಗಂಭೀರ ಗಾಯಗೊಂಡಿದ್ದ ಕಂಕನಾಡಿ ಠಾಣೆ ಕಾನ್ ಸ್ಟೇಬಲ್ ಹರೀಶ್ ಸಾವು
09/02/2025, 20:53
![](https://reporterkarnataka.com/wp-content/uploads/2025/02/IMG-20250209-WA0024.jpg)
ಮಂಗಳೂರು(reporterkarnataka.com): ಸುಳ್ಯ ಬಳಿ ನಡೆದ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಕಂಕನಾಡಿ ಪೊಲೀಸ್ ಸ್ಟೇಷನ್ ಕರ್ತವ್ಯ ನಿರ್ವಹಿಸುತ್ತಿದ್ದ
ಹರೀಶ್ ಅವರು ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಮೃತಪಟ್ಟಿದ್ದಾರೆ.
ಮೂಲತಃ ಮೈಸೂರು ಜಿಲ್ಲೆಯ ಕೆ.ಆರ್. ನಗರ ತಾಲೂಕು ಗಾಯನ ಹಳ್ಳಿ ಗ್ರಾಮದ ನಿವಾಸಿಯಾಗಿದ್ದಾರೆ. ಬುಧವಾರ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡು ಜೀವನ್ಮರಣ ಹೋರಾಟ ನಡೆಸುತ್ತಿದ್ದ ಅವರು ಇಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.