ಇತ್ತೀಚಿನ ಸುದ್ದಿ
ಸುಮಾರು 29 ವರ್ಷಗಳಿಂದ ಕೋರ್ಟ್ ಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ: ಕದ್ರಿ ಪೊಲೀಸರ ಕಾರ್ಯಾಚರಣೆ
24/02/2024, 00:02
ಮಂಗಳೂರು(reporterkarnataka.com): ಸುಮಾರು 29 ವರ್ಷಗಳಿಂದ ಕೋರ್ಟ್ ಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣಕ್ಕೊಂದಕ್ಕೆ ಸಂಬಂಧಿಸಿದಂತೆ ಸೋಮವಾರಪೇಟೆಯ ಮಾದಾಪುರ ನಿವಾಸಿಯಾದ
ಆರೋಪಿ ಈರಪ್ಪ ಎಚ್.ಬಿ.ಎಂ. ಎಂಬಾತ ಕಳೆದ 29 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ. ಇದೀಗ ಆರೋಪಿಯನ್ನು ಪಿಎಸ್ ಐ ಉಮೇಶ್ ಕುಮಾರ್ ಮತ್ತು ತಂಡ ದಸ್ತಗಿರಿ ಮಾಡಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಲಾಯಿತು