11:02 PM Sunday11 - October 2026
ಬ್ರೇಕಿಂಗ್ ನ್ಯೂಸ್
ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು

ಇತ್ತೀಚಿನ ಸುದ್ದಿ

ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿರುಗೇಟು

26/01/2026, 20:21

ಉಡುಪಿ(reporterkarnataka.com):ಶಾಸಕ ಸುನೀಲ್ ಕುಮಾರ್ ಅವರು ಕಾರ್ಕಳದ ಥೀಮ್ ಪಾರ್ಕ್ ನಲ್ಲಿ ಪರಶುರಾಮನ ಮೂರ್ತಿಯನ್ನು ಫೈಬರ್ ನಲ್ಲಿ ಮಾಡಿಸಿ ಕಂಚಿನ ಮೂರ್ತಿ ಎಂದು ನಂಬಿಸಿದ್ದರು. ಜನರ ದಿಕ್ಕು ತಪ್ಪಿಸಿ ರಾಜಕೀಯ ಮಾಡುತ್ತಿದ್ದಾರೆ ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.
ಕಾರ್ಕಳದ ಪರಶುರಾಮ ಥೀಂ ಪಾರ್ಕ್ ಬಗ್ಗೆ ರಾಜ್ಯ ಸರ್ಕಾರ ನಿರ್ಲಕ್ಷ್ಯ ವಹಿಸಿದೆ ಎಂಬ ಮಾಜಿ ಸಚಿವ ಸುನಿಲ್ ಕುಮಾರ್ ಆರೋಪಕ್ಕೆ ಸಚಿವರು ಮಾಧ್ಯಮ ಜತೆ ಪ್ರತಿಕ್ರಿಯಿಸಿದರು. ಪರಶುರಾಮನನ್ನು ಕರಾವಳಿಯಲ್ಲಿ ಆರಾಧಿಸಲಾಗುತ್ತದೆ. ನಮಗೂ ಕೂಡ ಈ ವಿಚಾರದಲ್ಲಿ ರಾಜಕಾರಣ ಮಾಡುವುದು ಇಷ್ಟ ಇಲ್ಲ. ಸುನೀಲ್ ಕುಮಾರ್ ಪರಶುರಾಮನ ಮೂರ್ತಿಯನ್ನು ಫೈಬರ್ ನಲ್ಲಿ ಮಾಡಿಸಿದ್ದರು. ಫೈಬರ್ ನಲ್ಲಿ ಮಾಡಿಸಿ ಕಂಚಿನ ಮೂರ್ತಿ ಎಂದು ನಂಬಿಸಿದ್ದರು. ಜನರ ದಿಕ್ಕು ತಪ್ಪಿಸಿ ರಾಜಕೀಯ ಮಾಡುತ್ತಿದ್ದಾರೆ. ಜನರನ್ನು ನಂಬಿಸಿ ಮೋಸ ಮಾಡಿದ್ದು, ರಾಜಕೀಯ ಮಾಡಿದ್ದು ಸುನೀಲ್ ಕುಮಾರ್, ಕಾಂಗ್ರೆಸ್ ನವರಿಗೆ ದೇವರ ವಿಚಾರದಲ್ಲಿ ರಾಜಕೀಯ ಮಾಡುವ ದರ್ದು ಇಲ್ಲ. ಆದಷ್ಟು ಬೇಗ ಪರಶುರಾಮ ಮೂರ್ತಿಯ ಕಾಮಗಾರಿಯನ್ನು ಪೂರ್ಣಗೊಳಿಸಿ ಲೋಕಾರ್ಪಣೆ ಮಾಡ್ತೇವೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು