ಇತ್ತೀಚಿನ ಸುದ್ದಿ
ಆದ್ಯತೆಗೆ ಅನುಗುಣವಾಗಿ ರಾಜ್ಯಾದ್ಯಂತ ಎಲ್ಪಿಜಿ ಸಿಲಿಂಡರ್ ಪೂರೈಕೆ: ಸಚಿವ ಕೆ.ಎಚ್.ಮುನಿಯಪ್ಪ
30/03/2026, 22:40
ಬೆಂಗಳೂರು(reporterkarnataka.com): ಆದ್ಯತೆಗೆ ಅನುಗುಣವಾಗಿ ರಾಜ್ಯಾದ್ಯಂತ ಎಲ್ಪಿಜಿ ಸಿಲಿಂಡರ್ ಪೂರೈಕೆ ಮಾಡಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ ಹೇಳಿದ್ದಾರೆ.
ರಾಜ್ಯಾದ್ಯಂತ ಪ್ರತಿದಿನ ಸುಮಾರು 4 ಲಕ್ಷ ಗೃಹ ಬಳಕೆ ಎಲ್ಪಿಜಿ ಸಿಲಿಂಡರ್ಗಳು ಹಾಗೂ ಸುಮಾರು 18 ಸಾವಿರ ವಾಣಿಜ್ಯ ಬಳಕೆಯ ಸಿಲಿಂಡರ್ಗಳನ್ನು ಪೂರೈಕೆ ಮಾಡಲಾಗುತ್ತಿದೆ. ಗೃಹ ಬಳಕೆದಾರರಿಗೆ ಯಾವುದೇ ತೊಂದರೆ ಆಗದಂತೆ ಎಚ್ಚರಿಕೆ ವಹಿಸಲಾಗಿದೆ. ನಗರ ಪ್ರದೇಶಗಳ ಗೃಹ ಬಳಕೆದಾರರಿಗೆ ಪ್ರತಿ 25 ದಿನಗಳಿಗೊಮ್ಮೆ ಒಂದು ಸಿಲಿಂಡರ್ ವಿತರಿಸಲಾಗುತ್ತಿದ್ದರೆ, ಗ್ರಾಮೀಣ ಪ್ರದೇಶದಲ್ಲಿ 45 ದಿನಗಳಿಗೊಮ್ಮೆ ಒಂದು ಸಿಲಿಂಡರ್ ಪೂರೈಸಲು ಕ್ರಮ ತೆಗೆದುಕೊಳ್ಳಲಾಗುತ್ತಿದೆ ಎಂದು ಮುನಿಯಪ್ಪ ತಿಳಿಸಿದ್ದಾರೆ.














