ಇತ್ತೀಚಿನ ಸುದ್ದಿ
ಸುಪ್ರೀಂ ಕೋರ್ಟ್ ಸೂಚಿಸಿದ ಬಳಿಕ ಕೊನೆಗೂ ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ಮಾಡಿದ ಕೇಂದ್ರ ಸರಕಾರ: 3,454 ಕೋಟಿ ಘೋಷಣೆ
27/04/2024, 14:22
ಹೊಸದಿಲ್ಲಿ(reporterkarnataka.com): ಬರ ಪರಿಹಾರ ಕುರಿತಂತೆ ಕೇಂದ್ರ ಸರಕಾರದ ವಿರುದ್ಧ ಸುಪ್ರೀಂಕೋರ್ಟ್ ನಲ್ಲಿ ಹೋರಾಟ ಮಾಡಿ ಜಯಗಳಿಸಿದ ರಾಜ್ಯ ಸರಕಾರಕ್ಕೆ ಮತ್ತೊಂದ ಜಯ ಪ್ರಾಪ್ತಿಯಾಗಿದೆ. ಕೊನೆಗೂ ಕೇಂದ್ರ ಸರ್ಕಾರ ರಾಜ್ಯಕ್ಕೆ ಬರ ಪರಿಹಾರ ಘೋಷಣೆ ಮಾಡಿದೆ.
ಹಲವು ಹೋರಾಟಗಳ ಬಳಿಕ, ರಾಜ್ಯಕ್ಕೆ ಇದೀಗ ಕೇಂದ್ರ ಸರ್ಕಾರ 3,454 ಕೋಟಿ ರೂಪಾಯಿ ಬರ ಪರಿಹಾರ ಘೋಷಿಸಿದೆ.
ಕೇಂದ್ರ ಸರ್ಕಾರದಿಂದ ಬರ ಪರಿಹಾರ ಪಡೆಯಲು
ರಾಜ್ಯ ಹಲವು ಹೋರಾಟ ಮಾಡಿ, ಕೊನೆಗೆ ಸುಪ್ರೀಂ ಕೋರ್ಟ್ ಮೊರೆ ಹೋಗಿತ್ತು. ವಿಚಾರಣೆ ನಡೆಸಿದ ನ್ಯಾಯಾಲಯ ಬರ ಪರಿಹಾರ ಬಿಡುಗಡೆ ಮಾಡುವಂತೆ ಕೇಂದ್ರ ಸರಕಾರಕ್ಕೆ ಸೂಚಿಸಿತ್ತು. ಕೇಂದ್ರ ಸರಕಾರ ಸೋಮವಾರದೊಳಗಾಗಿ ಬರ ಪರಿಹಾರ ನಿಡುವುದಾಗಿ ತಿಳಿಸಿತ್ತು. ಇದೀಗ ಕರ್ನಾಟಕಕ್ಕೆ 3,454 ಕೋಟಿ ರೂ. ಬರ ಪರಿಹಾರವನ್ನು ಘೋಷಣೆ ಮಾಡಿದೆ. ರಾಜ್ಯದಲ್ಲಿನ ಭೀಕರ ಬರ, ಕುಡಿಯುವ ನೀರಿಗೆ ಹಾಹಾಕಾರ, ರೈತರು, ಜನರು, ಜಾನುವಾರುಗಳಿಗೂ ಸಮಸ್ಯೆ ಎದುರಾಗಿರುವ ಹಿನ್ನೆಲೆಯಲ್ಲಿ ಕಳೆದ ಸೆಪ್ಟೆಂಬರ್ ನಲ್ಲಿಯೇ ಬರ ಪರಿಹಾರಕ್ಕಾಗಿ ರಾಜ್ಯ ಸರ್ಕಾರ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿತ್ತು. 18,174 ಕೋಟಿ ಬರ ಪರಿಹಾರಕ್ಕಾಗಿ ಬೇಡಿಕೆ ಇಟ್ಟಿತ್ತು. ಆದರೆ ಕೇಂದ್ರ ಸರ್ಕಾರ ಬರ ಪರಿಹಾರ ನೀಡಲು ವಿಳಂಬ ಮಾಡಿತ್ತು.