ಇತ್ತೀಚಿನ ಸುದ್ದಿ
ಮಾಜಿ ಶಾಸಕರ ಸಹೋದರ ದಿಢೀರ್ ನಾಪತ್ತೆ; ಕೂಳೂರು ಸೇತುವೆಯಲ್ಲಿ ಕಾರು ಪತ್ತೆ; ಆತ್ಮಹತ್ಯೆ ಶಂಕೆ
06/10/2024, 12:25
ಮಂಗಳೂರು(reporterkarnataka.com): ಮಾಜಿ ಶಾಸಕ ಮೊಯ್ದಿನ್ ಬಾವ ಅವರ ಸಹೋದರ ನಾಪತ್ತೆಯಾಗಿದ್ದು, ಅವರ ಕಾರು ಕೂಳೂರಿನ
ಸೇತುವೆಯ ಮೇಲೆ
ಅಪಘಾತವಾದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಮುಮ್ತಾಜ್ ಅಲಿ (52) ದಿಢೀರ್ ನಾಪತ್ತೆಯಾಗಿದ್ದು, ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಕೂಳೂರಿನ
ಸೇತುವೆಯ ಮೇಲೆ ಅಪಘಾತವಾದ ಸ್ಥಿತಿಯಲ್ಲಿ ಅವರ ಕಾರು ಪತ್ತೆಯಾಗಿದೆ. ಭಾನುವಾರ ಮುಂಜಾನೆ 3 ಗಂಟೆ ಸುಮಾರಿಗೆ ಮುಮ್ತಾಜ್ ಅಲಿ ಮನೆಯಿಂದ ತೆರಳಿದ್ದರು. ಬಳಿಕ 5 ಗಂಟೆ ಸುಮಾರಿಗೆ ಕೂಳೂರು ಸೇತುವೆ ಮೇಲೆ ಮುಮ್ತಾಜ್ ಬಿಎಂಡಬ್ಲ್ಯು ಕಾರು ದೊರೆತಿದೆ. ಅವರ ಪುತ್ರಿಗೆ ಈ ವಿಚಾರ ತಿಳಿದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.