ಇತ್ತೀಚಿನ ಸುದ್ದಿ
ಸುರತ್ಕಲ್: ಗದಗದಿಂದ ಬೈಕಂಪಾಡಿ ಎಪಿಎಂಸಿಗೆ ತೆರಳುತ್ತಿದ್ದ ಲಾರಿಯ ಟಯರ್ ಸ್ಫೋಟ
17/06/2023, 13:24

ಸುರತ್ಕಲ್(reporterkarnataka.com): ಇಲ್ಲಿಗೆ ಸಮೀಪದ ಗೋವಿಂದಾಸ್ ಕಾಲೇಜು ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿಯೊಂದರ ಟಯರ್ ಸ್ಫೋಟಗೊಂಡು ಬೆಂಕಿ ಹತ್ತಿಕೊಂಡ ಘಟನೆ ಸೋಮವಾರ ನಡೆದಿದೆ.
ಗದಗದಿಂದ ಬೈಕಂಪಾಡಿ ಎಪಿಎಂಸಿಗೆ ಕೃಷಿಯುತ್ಪನ್ನಗಳನ್ನು ಸಾಗಾಟ ಮಾಡುತ್ತಿದ್ದ ಲಾರಿಯ ಟಯರ್ ಗೋವಿಂದಾಸ್ ಕಾಲೇಜು ಬಳಿ ಫ್ಲೈ ಓವರ್ ಕೊನೆಗೊಳ್ಳುವ ಜಾಗದಲ್ಲಿ ಸ್ಫೋಟಗೊಂಡಿತು. ಬ್ಲಾಸ್ಟ್ ನ ತೀವ್ರತೆ ಬೆಂಕಿ ಕಾಣಿಸಿಕೊಂಡಿತು. ತಕ್ಷಣ ಅಗ್ನಿಶಾಮಕ ದಳದ ನೆರವಿನಿಂದ ಬೆಂಕಿ ನಂದಿಸಲಾಯಿತು. ಘಟನಾ ಸ್ಥಳಕ್ಕೆ ಎಸಿಪಿ ಗೀತಾ ಕುಲಕರ್ಣಿ ಹಾಗೂ ಸಿಬ್ಬಂದಿ ಭೇಟಿ ನೀಡಿದ್ದಾರೆ.