9:04 PM Friday23 - January 2026
ಬ್ರೇಕಿಂಗ್ ನ್ಯೂಸ್
ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು

ಇತ್ತೀಚಿನ ಸುದ್ದಿ

ಸುರತ್ಕಲ್ ಗೋವಿಂದ ದಾಸ ಪಿಯು ಕಾಲೇಜಿನಲ್ಲಿ ಬೃಹತ್ ಲಸಿಕಾ ಶಿಬಿರ

12/07/2021, 08:39

ಸುರತ್ಕಲ್ (reporterkarnataka news): ಇಲ್ಲಿನ ಗೋವಿಂದ ದಾಸ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ ಕುಳಾಯಿ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಸಹಯೋಗದೊಂದಿಗೆ ಬೃಹತ್ ಲಸಿಕಾ ಶಿಬಿರ ಕಾಲೇಜಿನಲ್ಲಿ ಜರುಗಿತು.

ಈ ಸಂದರ್ಭದಲ್ಲಿ ಹಿಂದೂ ವಿದ್ಯಾದಾಯಿನೀ ಸಂಘದ ಉಪಾಧ್ಯಕ್ಷ ಪ್ರೊ.ವೈ.ವಿ.ರತ್ನಾಕರ ರಾವ್, ಗೋವಿಂದ ದಾಸ ಕಾಲೇಜಿನ ಪ್ರಾಂಶುಪಾಲರ ಪ್ರೊ.ಕೃಷ್ಣಮೂರ್ತಿ ಪಿ ಹಾಗೂ ಪದವಿ ಪೂರ್ವ ಕಾಲೇಜಿನ ಪ್ರಾಂಶಪಾಲರಾದ ಲಕ್ಷ್ಮೀ ಪಿ. ಶುಭ ಹಾರೈಸಿದರು.

ಮಂಗಳೂರು ತಾಲೂಕು ಆರೋಗ್ಯಾಧಿಕಾರಿ ಡಾ.ಸುಜಯ್ ಭಂಡಾರಿ, ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ನಿಶ್ಚಿತ ಹಾಗೂ ಕೇಂದ್ರದ ಸಿಬ್ಬಂದಿಗಳನ್ನು ಗೌರವಿಸಲಾಯಿತು. ಆಯೋಜಕರಾದ ರಾಷ್ಟ್ರೀಯ ಸೇವಾ ಯೋಜನೆಯ ಯೋಜನಾಧಿಕಾರಿ ಪೈಕ ವೆಂಕಟರಮಣ ರಾವ್, ಉಪನ್ಯಾಸಕರಾದ ಡಾ.ಚೇತನಾ ಬಿ.ಕೆ., ಜಯಂತಿ ಅಮೀನ್, ಸಹಯೋಜನಾಧಿಕಾರಿಗಳಾದ ಕೃತಿ, ರಾಕೇಶ್ ಹೊಸಬೆಟ್ಟು ಉಪಸ್ಥಿತರಿದ್ದರು.

ಉಪನ್ಯಾಸಕಿ ಪಲ್ಲವಿ ರಾಜೇಶ್ ಗಣ್ಯರನ್ನು ಸ್ವಾಗತಿಸಿದರು. ಶಿಬಿರದಲ್ಲಿ ಕಾಲೇಜಿನ ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳನ್ನು ಒಳಗೊಂಡು ಒಟ್ಟು 380 ಅಭ್ಯರ್ಥಿಗಳಿಗೆ ಕೋವಿಶೀಲ್ಡ್ ಲಸಿಕೆ ನೀಡಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು