6:21 AM Wednesday3 - December 2025
ಬ್ರೇಕಿಂಗ್ ನ್ಯೂಸ್
ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ…

ಇತ್ತೀಚಿನ ಸುದ್ದಿ

ಸುರತ್ಕಲ್: ಜೆಡಿಎಸ್ ನಿಂದ ಕಾಂಗ್ರೆಸ್ಸಿಗೆ ಸಾಮೂಹಿಕ ವಲಸೆ; ಇನಾಯತ್ ಅಲಿ ನೇತೃತ್ವದಲ್ಲಿ ಸೇರ್ಪಡೆ

08/10/2023, 20:46

ಸುರತ್ಕಲ್(reporterkarnataka.com): ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ಸಮಿತಿಯ ಕಾರ್ಯಕರ್ತರ ಸಭೆಯು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ನೇತೃತ್ವದಲ್ಲಿ ನಡೆಯಿತು.

ಸಭೆಯಲ್ಲಿ ಬ್ಲಾಕ್ ವ್ಯಾಪ್ತಿಯ ಜೆಡಿಎಸ್ ಪಕ್ಷದ ಮುಖಂಡರು ಹಾಗೂ ಪದಾಧಿಕಾರಿಗಳು ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡರು.
ಜೆಡಿಎಸ್ ಸುರತ್ಕಲ್ ಬ್ಲಾಕ್ ಅಧ್ಯಕ್ಷ ನವಾಝ್ ಕಾಟಿಪಳ್ಳ, ಸೇವಾಂಜಲಿ ಟ್ರಸ್ಟ್‌ ಅಧ್ಯಕ್ಷೆ ರೇಷ್ಮಾ ಡಿಸೋಜ, ಸಾಮಾಜಿಕ ಕಾರ್ಯಕರ್ತೆ ಶಾಂತಿ ಡಿಸೋಜ, ಜೆಡಿಎಸ್ ಬ್ಲಾಕ್ ಪದಾಧಿಕಾರಿಗಳಾದ ಕಾಟಿಪಳ್ಳ ವಾರ್ಡ್‌ನ ಉಬೇದ್ ಹುಸೇನ್, ಎಂ.ಡಿ. ಖಾದರ್, ಅಬ್ದುಲ್ ರಹ್ಮಾನ್, ಜಂಶೀದ್, ಅಫ್ನಾನ್, ಹಸನಬ್ಬ ಹಾಗೂ ಇತರ ಪದಾಧಿಕಾರಿಗಳು ಇನಾಯತ್ ಅಲಿ ನೇತೃತ್ವದಲ್ಲಿ ಕಾಂಗ್ರೆಸ್ ಸೇರ್ಪಡೆಗೊಂಡರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪುರುಷೋತ್ತಮ ಚಿತ್ರಾಪುರ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಮೇಯರ್‌ಗಳಾದ ಶಶಿಧರ್ ಹೆಗ್ಡೆ, ಮಹಾಬಲ ಮಾರ್ಲ, ಹರಿನಾಥ್, ಕವಿತಾ ಸನಿಲ್, ಗುಲ್ಝಾರ್ ಬಾನು, ಕಾರ್ಪೋರೇಟರ್ ಅನಿಲ್ ಕುಮಾರ್, ಮುಖಂಡರಾದ ಉಮೇಶ್ ದಂಡಕೇರಿ, ಶಶಿಕಲಾ ಪದ್ಮನಾಭ, ಸಮೀರ್ ಕಾಟಿಪಳ್ಳ, ಮಲ್ಲಿಕಾರ್ಜುನ, ರಾಜೇಶ್ ಕುಳಾಯಿ, ರೆಹಮಾನ್ ಕುಂಜತ್ತಬೈಲ್ ಮೊದಲಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು