12:35 PM Saturday8 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ಸುರತ್ಕಲ್, ಕೂಳೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಭರ್ಜರಿ ಪ್ರಚಾರ: ಬಿಸಿಲ ಬೇಗೆಗೆ ಕುಗ್ಗದೇ ಸಾಗಿದ ಪದ್ಮರಾಜ್ ಪೂಜಾರಿ ರೋಡ್ ಶೋ

15/04/2024, 21:15

ಸುರತ್ಕಲ್(reporterkarnataka.com): ಕಾಂಗ್ರೆಸ್ ರೋಡ್ ಶೋ ಸೋಮವಾರ ಸುರತ್ಕಲ್, ಮುಕ್ಕಾ, ಕೃಷ್ಣಾಪುರ, ಚಿತ್ರಾಪುರ, ಕಾಟಿಪಳ್ಳ, ಚೊಕ್ಕಬೆಟ್ಟು, ಪಣಂಬೂರು, ಕೂಳೂರು, ಕಾವೂರು, ಕುಂಜತ್ತಬೈಲ್ ಮೊದಲಾದ ಪ್ರದೇಶಗಳಲ್ಲಿ ನಡೆಯಿತು.


ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರ ಪರವಾಗಿ ನಡೆದ ರೋಡ್ ಶೋನಲ್ಲಿ ಅಭ್ಯರ್ಥಿ ತೆರೆದ ವಾಹನದಲ್ಲಿ ಸಾಗಿದರು. ಕೆಲ ಪ್ರದೇಶಗಳಲ್ಲಿ ತೆರೆದ ವಾಹನದಿಂದ ಇಳಿದು, ನೇರವಾಗಿ ಮತದಾರರ ಬಳಿಗೆ ತೆರಳಿ ಮಾತನಾಡಿಸುತ್ತಿದ್ದರು. ಮತದಾರರು ಮಾತ್ರವಲ್ಲದೇ, ಮಕ್ಕಳು, ಯುವಕರನ್ನು ಮಾತನಾಡಿಸುತ್ತಾ ಸಾಗಿದರು. ಈ ಸಂದರ್ಭ ಮತದಾರರು, ಯುವಕ – ಯುವತಿಯರು ಕೈಕುಲುಕಿ ಶುಭಹಾರೈಸಿದರು. ಇನ್ನೂ ಕೆಲವರು ಸೆಲ್ಫಿ ಕ್ಲಿಕ್ಕಿಸಿಕೊಂಡು ಹರ್ಷಿಸಿದರು.
ಸೂರ್ಯ ನೆತ್ತಿ ಮೇಲೆ ಬರುತ್ತಿದ್ದಂತೆ ಸುಡುಸುಡುವ ಅನುಭವ. ಆದರೂ ಅಭ್ಯರ್ಥಿ ತಮ್ಮ ಊರಿಗೆ ಬಂದ ಸಂಭ್ರಮದಲ್ಲಿ ಕಾರ್ಯಕರ್ತರು ಬಿಸಿಲಿನ ಪ್ರಖರತೆಯನ್ನೇ ಮರೆತುಬಿಟ್ಟು, ರೋಡ್ ಶೋ ಜೊತೆ ಸೇರಿಕೊಂಡರು. ಹೆಚ್ಚಿನ ಪ್ರದೇಶಗಳಲ್ಲಿ ಅಭ್ಯರ್ಥಿಗೆ ಹೂ ಮಾಲೆ ಹಾಕಿ, ಪಟಾಕಿ ಸಿಡಿಸಿ ಸಂಭ್ರಮಿಸಿದರು.
*ಧಾರ್ಮಿಕ ಕ್ಷೇತ್ರಗಳ ಭೇಟಿ:*
ಮುಕ್ಕ ಶ್ರೀ ರಾಮ ಮಂದಿರ, ಪಡ್ರೆ ಶ್ರೀ ಧೂಮಾವತಿ ಬಂಟರ ದೈವಸ್ಥಾನ ಭಂಡಾರ ಮನೆ, ಮುಕ್ಕ ಶ್ರೀ ಸತ್ಯಧರ್ಮ ದೇವಿ ದೇವಸ್ಥಾನ, ಕಾಟಿಪಳ್ಳ ಶ್ರೀ ಕ್ಷೇತ್ರ ಗಣೇಶಪುರ ಶ್ರೀ ಮಹಾಗಣಪತಿ ದೇವಸ್ಥಾನ, ಚಿತ್ರಾಪುರ ಪಣಂಬೂರು ಶ್ರೀ ಮಹಾವಿಷ್ಣು ಭಜನಾ ಮಂದಿರ, ಕುಂಜತ್ತಬೈಲ್ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನ ಸದ್ಭಾವನಾ ಸಮಿತಿ ಹಾಗೂ ಮುಕ್ಕ ಜುಮ್ಮಾ ಮಸೀದಿ, ಚೊಕ್ಕಬೆಟ್ಟು ಮುಹಿಯುದ್ದೀನ್ ಜುಮಾ ಮಸೀದಿಗೆ ಭೇಟಿ ನೀಡಿ, ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ, ಪ್ರತಿಭಾ ಕುಳಾಯಿ, ಪಡ್ರೆ ಶ್ರೀ ಧೂಮಾವತಿ ಬಂಟರ ದೈವಸ್ಥಾನ ಭಂಡಾರ ಮನೆಯ ಗುರಿಕಾರ ದೇವೇಂದ್ರ ಪೂಜಾರಿ, ರಮಾನಾಥ ಅಮೀನ್, ವರುಣ್ ಅಂಚನ್, ಮಹಮ್ಮದ್ ರಂಝಾ, ಸದಾಶಿವ ಜಿ. ಅಮೀನ್, ರಮೇಶ್ ಜಿ. ಅಮೀನ್, ಬೋಜ ಪಾಡಿ, ಮುಕ್ಕ ಶ್ರೀ ಸತ್ಯಧರ್ಮ ದೇವಿ ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ರವಿರಾಜ್ ಸುವರ್ಣ, ಪುರುಷೋತ್ತಮ ದೇವಾಡಿಗ, ಪಿ.ಜಿ. ಕುಂದರ್, ಸತೀಶ್ ಭಟ್, ಕಾಟಿಪಳ್ಳ ಶ್ರೀ ಕ್ಷೇತ್ರ ಗಣೇಶಪುರ ಶ್ರೀ ಮಹಾಗಣಪತಿ ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ಧರ್ಮೇಂದ್ರ ಗಣೇಶಪುರ, ಯಾದವ ಶೆಟ್ಟಿ, ಚಿತ್ರಾಪುರ ಪಣಂಬೂರು ಶ್ರೀ ಮಹಾವಿಷ್ಣು ಭಜನಾ ಮಂದಿರದಲ್ಲಿ ಪಣಂಬೂರು ಮೊಗವೀರ ಮಹಾಸಭಾ ಅಧ್ಯಕ್ಷ ಮಾಧವ ಸುವರ್ಣ ಪಿ. ದೇವೇಂದ್ರ, ಕೇಶವ ಕಾಂಚನ, ಅಮರನಾಥ ಗುರಿಕ್ಕಾರ, ಪುರುಷೋತ್ತಮ ಕೋಟ್ಯಾನ್, ಹರೀಶ್ ಪುತ್, ನಾಗೇಶ್ ಪುತ್ರನ್, ರಮೇಶ್ ಪುತ್ರನ್ ಹಾಗೂ ಮುಕ್ಕ ಜುಮ್ಮಾ ಮಸೀದಿಯ ರಝಾಕ್, ಎಂ.ಸಿ. ಉಮ್ಮರ್ ಫಾರೂಕ್ ಮೊದಲಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು