ಇತ್ತೀಚಿನ ಸುದ್ದಿ
ಸುರತ್ಕಲ್: ಮಹಿಳೆಯರ ಬಟ್ಟೆ ಬದಲಾಯಿಸುವ ಕೊಠಡಿಯಲ್ಲಿ ರಹಸ್ಯ ಕ್ಯಾಮೆರಾ ಪತ್ತೆ; ಒಬ್ಬನ ಬಂಧನ
08/12/2022, 12:54

ಸಾಂದರ್ಭಿಕ ಚಿತ್ರ
ಸುರತ್ಕಲ್ (reporterkarnataka.com) : ಸ್ಕ್ಯಾನಿಂಗ್ ಮಾಡಲು ಬರುವ ಮಹಿಳೆಯರು ಬಟ್ಟೆ ಬದಲಾಯಿಸುವ ಕೊಠಡಿಯಲ್ಲಿ ರಹಸ್ಯ ಕ್ಯಾಮೆರಾ ಇರಿಸಿದ ಘಟನೆ ಸುರತ್ಕಲ್ ನ ಖಾಸಗಿ ಆಸ್ಪತ್ರೆಯೊಂದರಲ್ಲಿ ಬೆಳಕಿಗೆ ಬಂದಿದ್ದು, ಆರೋಪಿಯನ್ನು ಬಂಧಿಸಲಾಗಿದೆ.
ಆರೋಪದಲ್ಲಿ 21 ವರ್ಷದ ನರ್ಸಿಂಗ್ ವಿದ್ಯಾರ್ಥಿಯನ್ನು ಪೊಲೀಸರು ಬಂಧಿಸಿದ್ದಾರೆ.ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ 21ರ ಹರೆಯದ
ನರ್ಸಿಂಗ್ ವಿದ್ಯಾರ್ಥಿ ಪವನ್ ಈ ಕೃತ್ಯವೆಸಗಿದ ಆರೋಪಿ ಎಂದು ಗುರುತಿಸಲಾಗಿದೆ.
ಮೂಲತಃ ಕಲಬುರಗಿಯವನಾದ ಪವನ್ ಬಜಪೆಯಲ್ಲಿ ವಾಸ್ತವ ಮಾಡುತ್ತಿದ್ದ. ಆಸ್ಪತ್ರೆಗೆ ತಪಾಸಣೆಗೆ ಬಂದವರು ಸ್ಕ್ಯಾನಿಂಗ್‌ಗೆ ಒಳಗಾಗುವ ಮುನ್ನ ಬಟ್ಟೆ ಬದಲಾಯಿಸಲು ಬರುವ ಕೊಠಡಿಯಲ್ಲಿ ಯಾರಿಗೂ ಗೊತ್ತಾಗದ ರೀತಿಯಲ್ಲಿ ಕ್ಯಾಮೆರಾ ಅಳವಡಿಸಿದ್ದ.
ಸ್ಕ್ಯಾನಿಂಗ್ ಮಾಡಿಸಲು ಬಂದಿದ್ದ ಯುವತಿಯೊಬ್ಬರು ಉಡುಪು ಬದಲಾಯಿಸುವ ಮೊದಲು ಕೊಠಡಿಯನ್ನು ಸೂಕ್ಷ್ಮವಾಗಿ ಪರಿಶೀಲಿಸಿದಾಗ ಮೂಲೆಯಲ್ಲಿ ರಹಸ್ಯ ಕ್ಯಾಮೆರಾ ಇರುವುದು ಪತ್ತೆಯಾಗಿದೆ. ಅವರು ಈ ವಿಷಯವನ್ನು ವೈದ್ಯರ ಗಮನಕ್ಕೆ ತಂದಿದ್ದಾರೆ. ತನಿಖೆ ನಡೆಸಿದಾಗ ಪವನ್ ಕುಮಾರ್ ಕ್ಯಾಮರಾ ಇಟ್ಟಿರುವುದು ಪತ್ತೆಯಾಗಿದೆ. ಸುರತ್ಕಲ್ ಠಾಣೆಗೆ ಅವನ ವಿರುದ್ಧ ದೂರು ನೀಡಲಾಗಿದೆ.