9:26 PM Monday10 - August 2026
ಬ್ರೇಕಿಂಗ್ ನ್ಯೂಸ್
Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ…

ಇತ್ತೀಚಿನ ಸುದ್ದಿ

ಸುರತ್ಕಲ್: ಮಂಗಳೂರು ಉತ್ತರ ಕಾಂಗ್ರೆಸ್ ಅಭ್ಯರ್ಥಿ ಇನಾಯತ್ ಆಲಿ ಪರ ರಾಜಸ್ಥಾನ ಮುಖ್ಯಮಂತ್ರಿ ಗೆಹ್ಲೋಟ್ ರೋಡ್ ಶೋ; ಭಾರಿ ಜನಸ್ತೋಮ

02/05/2023, 23:24

ಸುರತ್ಕಲ್(reporterkarnataka.com): ಮಂಗಳೂರು ಉತ್ತರ ಕಾಂಗ್ರೆಸ್ ಅಭ್ಯರ್ಥಿ ಇನಾಯತ್ ಆಲಿ ಅವರ ಪರವಾಗಿ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಮಂಗಳವಾರ ಸುರತ್ಕಲ್ ನಲ್ಲಿ ಅಪಾರ ಜನಸ್ತೋಮದ ನಡುವೆ ರೋಡ್ ಶೋ ನಡೆಸಿದರು.
ಕಾನದಿಂದ ಆರಂಭಗೊಂಡ ರೋಡ್ ಶೋ ಸುರತ್ಕಲ್ ಜಂಕ್ಷನ್ ನಲ್ಲಿ ಸಮಾಪ್ತಿಗೊಂಡಿತು. ರೋಡ್ ಶೋನಲ್ಲಿ ಸಾವಿರಾರು ಮಂದಿ ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರು, ಇನಾಯತ್ ಆಲಿ ಹಿತೈಷಿಗಳು ಪಾಲ್ಗೊಂಡಿದ್ದರು.


ಈ ಸಂದರ್ಭದಲ್ಲಿ ಮಾತನಾಡಿದ ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು, ಕರ್ನಾಟಕದಲ್ಲಿ ಈ ಬಾರಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ.ಕಾಂಗ್ರೆಸ್ ಪಕ್ಷಕ್ಕೆ ತನ್ನದೇ ಆದ ಇತಿಹಾಸವಿದೆ. ಎಲ್ಲರನ್ನು ಸಮಾನವಾಗಿ ಕಾಣುವ ಕಾಂಗ್ರೆಸ್ ಪಕ್ಷ ಎಂದಿಗೂ ಧರ್ಮಗಳ ನಡುವೆ ಕಂದಕ ಸೃಷ್ಟಿಸುವ ಕೆಲಸ ಮಾಡಿಲ್ಲ. ಎಲ್ಲರನ್ನು ಸಮಾನವಾಗಿ ಕಂಡಿದೆ. ಮತದಾರ ಬಾಂಧವರು ಜಾತಿ- ಮತದ ಬೇಧವಿಲ್ಲದೆ ಇನಾಯತ್ ಆಲಿ ಅವರನ್ನು ಗೆಲ್ಲಿಸಿ ಎಂದು ಮನವಿ ಮಾಡಿದರು.
ಕಾಂಗ್ರೆಸ್ ಅಭ್ಯರ್ಥಿ ಇನಾಯತ್ ಆಲಿ ಅವರು ಮಾತನಾಡಿ, ಆಸ್ಕರ್ ಫೆರ್ನಾಂಡಿಸ್ ಹಾಗೂ ಜನಾರ್ದನ ಪೂಜಾರಿ ಅವರು ನನ್ನ ರಾಜಕೀಯ ಗುರುಗಳು. ಬಿಜೆಪಿ ಜತೆಗೆ ಸೇರಿಕೊಂಡು ಕೆಲವರು ನನ್ನ ವಿರುದ್ಧ ಷಡ್ಯಂತರ ನಡೆಸುತ್ತಿದ್ದಾರೆ. ನನ್ನನ್ನು ಎದುರಿಸಲಾಗದ ಬಿಜೆಪಿ ಪಕ್ಷವು ಜೆಡಿಎಸ್ ಅಭ್ಯರ್ಥಿ ಯನ್ನು ನನ್ನ ಎದುರು ಬಿಟ್ಟಿದೆ ಎಂದರು.
ಕಾಂಗ್ರೆಸ್ ನಾಯಕ ರಮೇಶ್ ಚೆನ್ನಿತ್ತಾಲ, ವಿಧಾನ ಪರಿಷತ್ ಸದಸ್ಯ ಡಾ. ಮಂಜುನಾಥ ಭಂಡಾರಿ, ಮಾಜಿ ಮೇಯರ್ ಗಳಾದ ಕವಿತಾ ಸನಿಲ್, ಶಶಿಧರ ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು