6:40 AM Wednesday26 - November 2025
ಬ್ರೇಕಿಂಗ್ ನ್ಯೂಸ್
ಸಂತಾನ ಹರಣ ಚಿಕಿತ್ಸೆ ಬಳಿಕವೂ ಗರ್ಭಿಣಿಯಾದ ಪತ್ನಿ: ಪತಿಯಿಂದ ವೈದ್ಯರಿಗೆ ಬೆದರಿಕೆ ಆರೋಪ:… ರಾಜ್ಯದ ಕ್ರಿಕೆಟ್ ಪಟುಗಳಿಗೆ ತಲಾ 10 ಲಕ್ಷ ನಗದು ಬಹುಮಾನ ಜತೆಗೆ ಸರ್ಕಾರಿ… ಹೈವಿಷನ್ ಇಂಡಿಯಾ ಜತೆ ಕೊರಿಯನ್ ಸಂಸ್ಥೆ ಜಿಟಿಟಿಸಿ ಒಪ್ಪಂದಕ್ಕೆ ಸಹಿ |ರಾಜ್ಯದ ಪ್ರವಾಸಿ… ಗಗನಯಾನಿಯಾಗಲು ದೈಹಿಕ, ಮಾನಸಿಕ ಆರೋಗ್ಯ ಬಹಳ ಮುಖ್ಯ: ಶುಭಾಂಶು ಶುಕ್ಲಾ Kodagu | ಅಪಘಾತಕ್ಕೆ ಈಡಾಗಿ ಗಂಭೀರ ಸ್ಥಿತಿಯಲ್ಲಿ ಪುತ್ರ: ನೊಂದ ತಾಯಿ ಕೆರೆಗೆ… ಅಕ್ರಮ‌ ಆಸ್ತಿ ಸಂಪಾದನೆ ಆರೋಪ: ಕೊಡಗು ಪಿಡಬ್ಲ್ಯುಡಿ ಎಂಜಿನಿಯರ್ ಕಚೇರಿ, ಮನೆ ಮೇಲೆ… Yadagiri | ವಿದ್ಯುತ್ ಕಳ್ಳತನ ನಿಯಂತ್ರಣ, ಟಿಸಿಗಳ ಸಮರ್ಪಕ ನಿರ್ವಹಣೆಗೆ ಇಂಧನ ಸಚಿವ… ಹಿಂದೂ ಧರ್ಮ ಮತ್ತು ಭಾರತೀಯತೆ ಎರಡೂ ಒಂದೇ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಉಡುಪಿಗೆ ನ.28ರಂದು ಪ್ರಧಾನಿ ಮೋದಿ ಭೇಟಿ: ಸಾರ್ವತ್ರಿಕ ರಜೆ ಘೋಷಿಸಲು ಶಾಸಕ ಯಶ್… ಬಾಲಿವುಡ್‌ನ ದಿಗ್ಗಜ ನಟ ಧರ್ಮೇಂದ್ರ ನಿಧನ: ಭಾರತೀಯ ಚಿತ್ರರಂಗದ ‘ಹೀ-ಮ್ಯಾನ್’ಗೆ ವಿದಾಯ

ಇತ್ತೀಚಿನ ಸುದ್ದಿ

ಸುರತ್ಕಲ್‌ನಲ್ಲಿ ಮತ್ತೆ ನೈತಿಕ ಪೋಲಿಸ್‌ಗಿರಿ ; ಆರು ಮಂದಿಯ ಬಂಧನ

16/11/2021, 13:20

ಮಂಗಳೂರು, ನ.16: ನಗರ ಹೊರವಲಯದ ಸುರತ್ಕಲ್ ನಲ್ಲಿ ಮತ್ತೊಂದು ನೈತಿಕ ಪೊಲೀಸ್ ಗಿರಿ ಘಟನೆ ನಡೆದಿದೆ. ಯುವಕನೊಬ್ಬ ತನ್ನ ಗೆಳತಿಯನ್ನು ಬೈಕಿನಲ್ಲಿ ಆಕೆಯ ಅಪಾರ್ಟೆಂಟ್ ಗೆ ಬಿಡಲು ಹೋಗಿದ್ದ ಸಂದರ್ಭದಲ್ಲಿ ಆರು ಜನರ ತಂಡ ಅಡ್ಡಗಟ್ಟಿ ಇಬ್ಬರಿಗೂ ಹಲ್ಲೆ ನಡೆಸಿದೆ.

ಹಿಂದು ಸಂಘಟನೆಯ ಕಾರ್ಯಕರ್ತರು ಎನ್ನಲಾದ ಆರು ಮಂದಿ ಅನ್ಯಕೋಮಿನ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿ ಮೇಲೆ ಹಲ್ಲೆ ನಡೆಸಿದ್ದಾರೆ. ಮೊಹಮ್ಮದ್ ಯಾಸೀನ್ ಮತ್ತು ಆತನ ಸ್ನೇಹಿತೆ ಆನ್ಸಿ ವಿನ್ನಿ ಡಯಾಸ್ ಹಲ್ಲೆಗೀಡಾದವರು. ಇವರು ಮುಕ್ಕದ ಶ್ರೀನಿವಾಸ್ ಕಾಲೇಜಿನ ವಿದ್ಯಾರ್ಥಿಗಳಾಗಿದ್ದು ಸಂಜೆಯ ವಿಹಾರ ಮುಗಿಸಿ ರಾತ್ರಿ ಹತ್ತು ಗಂಟೆ ವೇಳೆಗೆ ಹುಡುಗಿಯನ್ನು ಬೈಕಿನಲ್ಲಿ ಇಡ್ಯಾದ ಕಲ್ಯಾಣಿ ಪರ್ಲ್ ಅಪಾರ್ಟ್ ಮೆಂಟಿಗೆ ಬಿಡಲು ತೆರಳುತ್ತಿದ್ದ.

ಬೈಕ್ ಅಪಾರ್ಟೆಂಟ್ ತಲುಪುತ್ತಿದ್ದಂತೆ ತಡೆದು ನಿಲ್ಲಿಸಿದ್ದು ಅವಾಚ್ಯ ಶಬ್ದಗಳಿಂದ ನಿಂದಿಸಿ ನಿಮ್ಮ ಹೆಸರೇನೆಂದು ಕೇಳಿ ಕೈಯಿಂದ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಈ ವೇಳೆ ಯುವತಿಯನ್ನು ಕೈಯಲ್ಲಿ ಹಿಡಿದು ನೆಲಕ್ಕೆ ದೂಡಿ ಹಾಕಿದ್ದು ನಿನಗೆ ಬ್ಯಾರಿಯೇ ಆಗಬೇಕಾ ಎಂದು ಪ್ರಶ್ನಿಸಿ ನಿಂದಿಸಿದ್ದಾರೆ. ಈ ಬಗ್ಗೆ ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಆರು ಮಂದಿಯನ್ನು ಬಂಧಿಸಿದ್ದಾರೆ.

ಬಂಧಿತರನ್ನು ಪ್ರಹ್ಲಾದ್, ಪ್ರಶಾಂತ್, ಗುರುಪ್ರಸಾದ್, ಪ್ರತೀಶ್, ಭರತ್, ಸುಕೇಶ್ ಎಂದು ಗುರುತಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು