7:20 PM Monday30 - March 2026
ಬ್ರೇಕಿಂಗ್ ನ್ಯೂಸ್
ನಿಯಂತ್ರಣ ತಪ್ಪಿದ ಸರಕಾರಿ ಬಸ್: ಮಡಿಕೇರಿ ಬಸ್ ನಿಲ್ದಾಣದಲ್ಲಿ ತಪ್ಪಿದ ಭಾರಿ ದುರಂತ Madikeri | ಕೊಡಗು ಜಿಲ್ಲೆಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಡಾ. ಎಂ.… Kodagu | ಶನಿವಾರಸಂತೆ: ಟ್ರ್ಯಾಕ್ಟರ್ -ಕಾರು ಅಪಘಾತ; ಟ್ರ್ಯಾಕ್ಟರ್ ಚಾಲಕ ಸಾವು ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ… ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರಕಾರಿ ಶುಶ್ರೂಷಾ ಕಾಲೇಜು 2ನೇ ಘಟಿಕೋತ್ಸವ ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್…

ಇತ್ತೀಚಿನ ಸುದ್ದಿ

ಸುರತ್ಕಲ್ ಟೋಲ್ ಹೆಜಮಾಡಿಯಲ್ಲಿ ಪಾವತಿಸಿ: ಎನ್ ಎಚ್ ಐಎ ಸುತ್ತೋಲೆ

25/11/2022, 07:39

ಸುರತ್ಕಲ್(reporterkarnataka.com); ಸುರತ್ಕಲ್ ಟೋಲ್ ರದ್ದುಪಡಿಸಿ ಹೆಜಮಾಡಿ ಟೋಲ್ ಗೇಟಿಗೆ ವಿಲೀನ ಮಾಡಿರುವ ಹಿನ್ನೆಲೆಯಲ್ಲಿ ಸುರತ್ಕಲ್ ಟೋಲ್ ದರವನ್ನು
ಹೆಜಮಾಡಿ ಟೋಲ್ ಗೇಟ್‌ನಲ್ಲಿ ಪಾವತಿಸುವಂತೆ ಎನ್ ಎಚ್ ಐಎ ಸುತ್ತೋಲೆ ಹೊರಡಿಸಿದೆ.

ಈ ಹಿನ್ನೆಲೆಯಲ್ಲಿ ಸುರತ್ಕಲ್ ಟೋಲ್ ಗೇಟ್ ನಲ್ಲಿ ಒಂದು ಕಾರಿನ ಏಕಮುಖ ಪಾಸ್ ಗೆ 60 ರೂ. ಶುಲ್ಕ ವಿಧಿಸಲಾಗುತ್ತಿತ್ತು. ಹೆಜಮಾಡಿ ಟೋಲ್ ಗೇಟ್ ನಲ್ಲಿ 40 ರೂ. ವಿಧಿಸಲಾಗುತ್ತಿತ್ತು. ಇತ್ತೀಚಿನ ಸುತ್ತೋಲೆಯ ನಂತರ, ಹೆಜಮಾಡಿ ಟೋಲ್ ಗೇಟ್‌ನಲ್ಲಿ ಏಕಮುಖ ಪಾಸ್‌ಗೆ ರೂ. 100 ಶುಲ್ಕ ವಿಧಿಸಲಾಗುತ್ತದೆ. ಅದೇ ರೀತಿ, ಬಸ್‌ಗಳು ಮತ್ತು ಟ್ರಕ್‌ಗಳಿಗೆ ಸುರತ್ಕಲ್ ಟೋಲ್ ಗೇಟ್ ನಲ್ಲಿ 210 ರೂ. ಹೆಜಮಾಡಿ ಟೋಲ್ ಗೇಟ್‌ನಲ್ಲಿ 145 ರೂ. ವಿಧಿಸಲಾಗುತ್ತಿತ್ತು. ಪರಿಷ್ಕೃತಗೊಂಡ ಬಳಿಕ ರೂ. 355 ವಿಧಿಸಲಾಗುತ್ತಿದೆ.

ಭಾರೀ ನಿರ್ಮಾಣ ಯಂತ್ರೋಪಕರಣಗಳು, ಬೃಹತ್ ಉಪಕರಣಗಳು ಮತ್ತು ಮಲ್ಟಿಆಕ್ಸಲ್ ವಾಹನಗಳಿಗೆ ರೂ. ಸುರತ್ಕಲ್ ಟೋಲ್ ನಲ್ಲಿ 325 ರೂ., ಹೆಜಮಾಡಿ ಟೋಲ್‌ನಲ್ಲಿ 225, ವಿಧೀಸಲಾಗುತ್ತಿದ್ದರೆ ಇದೀಗ ಅದನ್ನು ರೂ. ಹೆಜಮಾಡಿ ಟೋಲ್ ಗೇಟ್ ನಲ್ಲಿ 550 ರೂ. ವಿಧಿಸಲಾಗುತ್ತಿದೆ.

ಲಘು ವಾಣಿಜ್ಯ ಮತ್ತು ಲಘು ಸರಕು ವಾಹನಗಳಿಗೆ ಸುರತ್ಕಲ್ ಟೋಲ್ ನಲ್ಲಿ 100 ರೂ. ಹೆಜಮಾಡಿ ಟೋಲ್‌ನಲ್ಲಿ 70 ರೂ. ವಿಧಿಸಲಾಗುತ್ತಿತ್ತು. ಪ್ರಸ್ತುತ ಬದಲಾವಣೆ ಬಳಿಕ ಹೆಜಮಾಡಿ ಟೋಲ್ ಗೇಟ್ ನಲ್ಲಿ 170 ರೂ ವಿಧಿಸಲಾಗುತ್ತಿದೆ ಎಂದು ಸುತ್ತೋಲೆ ಹೇಳಿದೆ.

ಇತ್ತೀಚಿನ ಸುದ್ದಿ

ಜಾಹೀರಾತು