9:47 AM Thursday20 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಸುರತ್ಕಲ್ ಟೋಲ್ ಗೇಟ್ ಸುತ್ತಮುತ್ತಲಿನ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿ

28/10/2022, 11:19

ಮಂಗಳೂರು(reporterkarnataka.com):ಕಾನೂನು ಸುವ್ಯವಸ್ಥೆಯ ದೃಷ್ಟಿಯಿಂದ ಸುರತ್ಕಲ್ ಪೊಲೀಸ್ ಠಾಣೆ ವ್ಯಾಪ್ತಿಯ ಟೋಲ್ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ಸೆಕ್ಷನ್ 144 ಪ್ರಕಾರ ನಿಷೇಧಾಜ್ಞೆ ಜಾರಿಗೊಳಿಸಿ ಪೊಲೀಸ್ ಕಮಿಷನರ್ ಶಶಿಕುಮಾರ್ ಆದೇಶ ಹೊರಡಿಸಿದ್ದಾರೆ.

ಶುಕ್ರವಾರ (ಇಂದು) ಬೆಳಿಗ್ಗೆ 6ರಿಂದ ನವಂಬರ್ 3ರ ಸಂಜೆ 6 ಗಂಟೆಯ ತನಕ ಸುರತ್ಕಲ್ ಪೊಲೀಸ್ ಠಾಣೆಯ ಟೋಲ್ ಪ್ಲಾಜಾದ ಸುತ್ತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಸಾರ್ವಜನಿಕ ಸುರಕ್ಷತೆ ಹಾಗೂ ಕಾನೂನು ಸುವ್ಯವಸ್ಥೆ ದೃಷ್ಠಿಯಿಂದ ಹಾಗೂ ಟೋಲ್ ಗೇಟ್ ಗೆ ರಕ್ಷಣೆ ನೀಡುವ ದೃಷ್ಟಿಯಿಂದ ಸೆಕ್ಷನ್ ಜಾರಿಗೊಳಿಸಲಾಗಿದೆ ಎಂದು ಕಮಿಷನರ್ ಹೇಳಿದ್ದಾರೆ.

ನಿಷೇಧಾಜ್ಞೆ ಜಾರಿಯಲ್ಲಿರುವ ಭಾಗದಲ್ಲಿ 5ಕ್ಕಿಂತ ಹೆಚ್ಚು ಜನರು ಗುಂಪು ಸೇರುವುದು, ಘೋಷಣೆಗಳನ್ನು ಕೂಗುವುದು, ಭಿತ್ತಿ ಪತ್ರ ಪ್ರದರ್ಶನ, ಶಸ್ತ್ರಗಳನ್ನು ಕೊಂಡೊಯ್ಯುವುದು, ಪಟಾಕಿ ಸಿಡಿಸುವುದು,ಮೆರವಣಿಗೆ, ಜಾಥಾ, ರಸ್ತೆ ತಡೆ ನಡೆಸಲು ಅವಕಾಶವಿಲ್ಲ ಎಂದು ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು