3:52 PM Sunday14 - September 2025
ಬ್ರೇಕಿಂಗ್ ನ್ಯೂಸ್
Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;… Kodagu | ಕೇರಳದ ಕಸಾಯಿಖಾನೆಗೆ ಕೋಣಗಳ ಸಾಗಾಟ: 34 ಕೋಣಗಳ ರಕ್ಷಣೆ ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ ಕರಾವಳಿಯಲ್ಲಿ ಸಂಭ್ರಮದ ಮೊಂತಿ ಹಬ್ಬ: ಚರ್ಚ್ ಗಳಲ್ಲಿ ವಿಶೇಷ ಬಲಿಪೂಜೆ; ತೆನೆ ವಿತರಣೆ ಮೈಸೂರು ದಸರಾ: ಗೋಲ್ಡ್​ ಕಾರ್ಡ್​; ಟಿಕೆಟ್​ ದರ ಎಷ್ಟು? ಖರೀದಿ ಹೇಗೆ? ಇಲ್ಲಿದೆ… Kodagu | ಮಡಿಕೇರಿ: ಮಾಂದಲಪಟ್ಟಿಗೆಯಲ್ಲಿ ಪ್ರವಾಸಿಗನ ಮೇಲೆ ಜೀಪ್ ಚಾಲಕ ಹಲ್ಲೆ

ಇತ್ತೀಚಿನ ಸುದ್ದಿ

ಸುರತ್ಕಲ್ ಟೋಲ್ ತೆರವು ಆಗ್ರಹಿಸಿ ಬೃಹತ್ ಪ್ರತಿಭಟನೆ; ಖಾಕಿ ಸರ್ಪಗಾವಲು; ಲಾಠಿಚಾರ್ಜ್, 500ಕ್ಕೂ ಹೆಚ್ಚು ಮಂದಿ ಬಂಧನ

18/10/2022, 15:39

ಸುರತ್ಕಲ್(reporter Karnataka.com): ಇಲ್ಲಿನ ಎನ್ ಐಟಿಕೆ ಸಮೀಪದಲ್ಲಿರುವ ಅಕ್ರಮ ಟೋಲ್ ಗೇಟ್ ತೆರವುಗೊಳಿವಂತೆ ಆಗ್ರಹಿಸಿ ಟೋಲ್ ಸಮೀಪ ಟೋಲ್ ಗೇಟ್ ಹೋರಾಟ ಸಮಿತಿ ಬೃಹತ್ ಪ್ರತಿಭಟನೆ ನಡೆಸುತ್ತಿದ್ದು, ಪೋಲೀಸರು ಲಾಠಿ ಚಾರ್ಜ್ ನಡೆಸಿ 500ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಿದ್ದಾರೆ.
ಪ್ರತಿಭಟನಾಕಾರರನ್ನು ಮೊದಲು ಬಂಧಿಸಿ ಪಾಂಡೇಶ್ವರ ಠಾಣೆಗೆ ಕರೆದೊಯ್ಯಲಾಯಿತು. ನಂತರ ಅವರನ್ನು ಸುರತ್ಕಲ್ ಬಂಟರ ಭವನಕ್ಕೆ ಸ್ಥಳಾಂತರಿಸಲಾಯಿತತ್ ಉ.ಸ್ಥಳದಲ್ಲಿ 6 ಕೆಎಸ್‌ಆರ್‌ಪಿ ತುಕಡಿ, 5 ಸಿಎಆರ್‌, 250 ಸಿವಿಲ್‌, 4 ಮಂದಿ ಪೊಲೀಸ್ ಎಸಿಪಿ, 15 ಇನ್ಸ್ ಪೆಕ್ಟರ್‌ ಸೇರಿದಂತೆ 450 ಕ್ಕೂ ಅಧಿಕ ಪೊಲೀಸರ ಸರ್ಪಗವಲು ಹಾಕಲಾಗಿದೆ. ಸ್ಥಳಕ್ಕೆ ಮಂಗಳೂರು ನಗರ ಪೊಲೀಸ್‌ ಕಮಿಷನರ್‌ ಶಶಿಕುಮಾರ್‌ ಎನ್‌. ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.


ಟೋಲ್ ಗೇಟ್ ತೆರವು ಹೋರಾಟಕ್ಕೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಿಂದ ಸಾವಿರಾರು ಮಂದಿ ಹೋರಾಟಗಾರರು ಆಗಮಿಸಿದ್ದಾರೆ.
ಹೋರಾಟದಲ್ಲಿ ಸುರತ್ಕಲ್ ಟೋಲ್ ಗೇಟ್ ಹೋರಾಟ ಸಮಿತಿಯ ಪ್ರಮುಖರಾದ ಮುನೀರ್ ಕಾಟಿಪಳ್ಳ, ಬಿ.ಕೆ. ಇಮ್ತಿಯಾಜ್, ಸುನೀಲ್ ಕುಮಾರ್ ಬಜಾಲ್ , ಪ್ರತಿಭಾ ಕುಳಾಯಿ, ಮಾಜಿ ಶಾಸಕ ಐವನ್ ಡಿಸೋಜಾ, ಶಕುಂತಳಾ ಶೆಟ್ಟಿ, ಜೆ ಆರ್ ಲೋಬೊ, ಮೋಯ್ದಿನ್ ಭಾವ, ಶಾಲೆಟ್ ಪಿಂಟೋ, ವಿನಯ್ ಕುಮಾರ್ ಸೊರಕೆ, ಮಿಥುನ್ ರೈ, ಶ್ರೀಧರ್ ಹೆಗಡೆ, ಆಮ್ ಆದ್ಮಿ ಪಕ್ಷ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷರು ಸಂತೋಷ್ ಕುಮಾರ್ , ನ್ಯಾಯವಾದಿ ದಿನೇಶ್ ಹೆಗ್ಡೆ ಉಳಿಪಾಡಿ ಮತ್ತಿತರರು ಉಪಸಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು