3:13 PM Friday16 - October 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3…

ಇತ್ತೀಚಿನ ಸುದ್ದಿ

ಸುರತ್ಕಲ್: ಹಲವು ತಿಂಗಳಿನಿಂದ ನೀರಿನ ಸಮಸ್ಯೆ; ಸ್ಪಂದಿಸದ ಪಾಲಿಕೆ; ಸಾರ್ವಜನಿಕರ ಪ್ರತಿಭಟನೆ

06/02/2025, 09:24

ಸುರತ್ಕಲ್(reporterkarnataka.com): ಸುರತ್ಕಲ್ ಪರಿಸರದಲ್ಲಿ ಹಲವಾರು ತಿಂಗಳುಗಳಿಂದ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು ಈ ಹಿನ್ನೆಲೆಯಲ್ಲಿ ನಾಗರಿಕ ಹೋರಾಟ ಸಮಿತಿ ವತಿಯಿಂದ ಬುಧವಾರ ಬೃಹತ್ ಪ್ರತಿಭಟನೆ ನಡೆಯಿತು.


ಮಂಗಳೂರು ಮಹಾನಗರ ಪಾಲಿಕೆಗೆ ಸಮಿತಿ ವತಿಯಿಂದ ಹಲವು ಬಾರಿ ಮನವಿಯನ್ನು ಸಲ್ಲಿಸಿಯು ಯಾವುದೇ ರೀತಿಯ ಸ್ಪಂದನೆ ಸಿಗದ ಕಾರಣ ಪಾಲಿಕೆ ವಿರುದ್ಧ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಮಾತಾಡಿದ ಸಂಘಟನೆಯ ಅಧ್ಯಕ್ಷ ಮುಹಮ್ಮದ್ ಹುಸೇನ್ ಅವರು, “ನೀರಿನ ಸಮಸ್ಯೆಯಿಂದಾಗಿ ಮೂರು ನಾಲ್ಕು ದಿನಗಳಿಂದ ಸ್ನಾನ ಮಾಡದೇ ಜನರು ಸಮಸ್ಯೆ ಎದುರಿಸುತ್ತಿದ್ದಾರೆ. ಕ್ಷೇತ್ರದ ಶಾಸಕರು ಇತ್ತಕಡೆ ತಿರುಗಿಯೂ ನೋಡುತ್ತಿಲ್ಲ. ಹೀಗಾದರೆ ಮುಂದಿನ ದಿನಗಳಲ್ಲಿ ಉಗ್ರ ಪ್ರತಿಭಟನೆ ನಡೆಸಬೇಕಾಗುತ್ತದೆ” ಎಂದರು.
5ನೇ ವಾರ್ಡ್ ಮಹಾನಗರ ಪಾಲಿಕೆ ಸದಸ್ಯರಾದ ಶಂಶಾದ್ ಅಬೂಬಕ್ಕರ್ ಮಾತಾಡಿ, “ಸುರತ್ಕಲ್, ಚೊಕ್ಕಬೆಟ್ಟು, ಕೃಷ್ಣಾಪುರ, ಕಾಟಿಪಳ್ಳ ಪ್ರದೇಶವು ನೀರಿನ ಸಮಸ್ಯೆಯಿಂದ ತೀವ್ರ ತೊಂದರೆಗೊಳಗಾಗಿದೆ. ಅಧಿಕಾರಿಗಳಿಂದ ಭರವಸೆಯ ಮೇಲೆ ಬರವಸೆಗಳು ಮಾತ್ರ ದೊರೆಯುತ್ತಿದೆಯೇ ಹೊರತು ಯಾವುದೇ ರೀತಿಯ ಅಭಿವೃದ್ಧಿಯ ಪ್ರತಿಕ್ರಿಯೆ ದೊರಕುತ್ತಿಲ್ಲ“ ಎಂದರು.
ಉಪ ಅಯುಕ್ತೆ ವಾಣಿ ಆಳ್ವ ಹಾಗೂ ಅಭಿಯಂತರರು ಸ್ಥಳಕ್ಕೆ ಅಗಮಿಸಿದ್ದು ಅವರಿಗೆ ಮನವಿ ಸಲ್ಲಿಸಲಾಯಿತು. ಮನವಿಯಲ್ಲಿದ್ದಂತೆ ಒಂದು ವಾರದ ಒಳಗಾಗಿ ಸಂಭಂದ ಪಟ್ಟ ಅಧಿಕಾರಿಗಳು ಸಮಸ್ಯೆ ಬಗೆಹರಿಸದಿದ್ದಲ್ಲಿ ಮುಂದಿನ ದಿನಗಳಲ್ಲಿ ಮ. ನ. ಪಾ. ಕಚೇರಿಯ ಮುಂದೆ ಧರಣಿ ಕೂರುವುದಾಗಿ ಎಚ್ಚರಿಕೆಯನ್ನು ಕೊಟ್ಟು ಪ್ರತಿಭಟನೆಯನ್ನು ಕೊನೆಗೊಳಿಸಲಾಯಿತು.
ನೌಶಾದ್ ಚೊಕ್ಕಬೆಟ್ಟು,ಚೊಕ್ಕಬೆಟ್ಟು ನವಾಝ್ ಐನೈನ್, ಫಯಾಝ್ ಕೃಷ್ಣಾಪುರ, ನವಾಝ್ ಪಜ್ಜು, ಅಬ್ದುಲ್ ಜಬ್ಬಾರ್ ಕೃಷ್ಣಾಪುರ, ಅಬ್ದುಲ್ ಸಲಾಂ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು