8:15 PM Tuesday30 - December 2025
ಬ್ರೇಕಿಂಗ್ ನ್ಯೂಸ್
ಅಕ್ರಮ ವಲಸಿಗರ ಕುರಿತು ಉನ್ನತ ಮಟ್ಟದ ತನಿಖೆಯಾಗಲಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸರ್ಕಾರದ ಜಮೀನು ಅಕ್ರಮ ಒತ್ತುವರಿಯಾದರೆ ಕಂದಾಯ ಇಲಾಖೆ ಹಾಗೂ ಪಾಲಿಕೆ ಅಧಿಕಾರಗಳ ಮೇಲೆ… ಶೂನ್ಯ ಅಡಚಣೆಯೊಂದಿಗೆ ವಿದ್ಯುತ್ ಪೂರೈಕೆಗೆ ಕ್ರಮ: ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ… ಕಾನೂನು ಸುವ್ಯವಸ್ಥೆ ವೈಫಲ್ಯಕ್ಕೆ ಗೃಹ ಸಚಿವರೇ ಹೊಣೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Bangalore | ಹೊಸ ವರ್ಷಾಚರಣೆ: ಅಹಿತಕರ ಘಟನೆ ನಡೆಯದಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ತಾಕೀತು ಕನ್ನಡ ಭಾಷೆ, ನೆಲ, ಜಲ, ಗಡಿ, ಕನ್ನಡಿಗರಿಗೆ ಉದ್ಯೋಗ ವಿಚಾರದಲ್ಲಿ ರಾಜಿ ಇಲ್ಲ:… ಮೈಸೂರು ಅರಮನೆ ಬಳಿ ಸ್ಫೋಟ: ಸಾವಿನ ಸಂಖ್ಯೆ 3ಕ್ಕೆ ಏರಿಕೆ; ಹೆಚ್ಚಿದ ಆತಂಕ ಮಂಗಳೂರು ಡೇಟಾ ಸೆಂಟರ್ ಭಾರತದ ಅತ್ಯಂತ ವೆಚ್ಚ-ದಕ್ಷ ಕೇಂದ್ರ: ಫೀಸಿಬಿಲಿಟಿ ವರದಿ ಹೊಸ ವರ್ಷಾಚರಣೆ: ರೆಸಾರ್ಟ್, ಹೋಟೆಲ್, ಹೋಂ ಸ್ಟೇ ಮಾಲೀಕರಿಗೆ ಕಟ್ಟುನಿಟ್ಟಿನ ಸೂಚನೆ ಕೊಡಗಿನಲ್ಲಿ ಅರಣ್ಯ ರಕ್ಷಕರಿಂದಲೇ ಮರಗಳ ಲೂಟಿ: ಲೋಡರ್ ಬಂಧನ; ನಾಲ್ವರು ಪರಾರಿ

ಇತ್ತೀಚಿನ ಸುದ್ದಿ

ಸುರತ್ಕಲ್ : ನ.1ರಂದು “ಯಕ್ಷಸಿರಿ” ಯಕ್ಷಗಾನ ತರಬೇತಿ ಕೇಂದ್ರದ ದ್ವಿತೀಯ ವಾರ್ಷಿಕೋತ್ಸವ

27/10/2024, 23:30

ಸುರತ್ಕಲ್(reporterkarnataka.com): ಬಂಟರ ಸಂಘ (ರಿ) ಸುರತ್ಕಲ್ ಇದರ ಆಶ್ರಯದಲ್ಲಿ “ಯಕ್ಷಸಿರಿ” ಯಕ್ಷಗಾನ ತರಬೇತಿ ಕೇಂದ್ರದ ದ್ವಿತೀಯ ವಾರ್ಷಿಕೋತ್ಸವ ಸಮಾರಂಭ ನವಂಬರ್ 1ರಂದು ಸಂಜೆ 5 ಗಂಟೆಗೆ ಸುರತ್ಕಲ್ ಬಂಟರ ಭವನದಲ್ಲಿ ನಡೆಯಲಿದೆ. ಯಕ್ಷಸಿರಿಯ ವಿದ್ಯಾರ್ಥಿಗಳ ಮತ್ತು ಇತರ ಕಲಾವಿದರ ಕೂಡುವಿಕೆಯಿಂದ ರಾಕೇಶ್ ರೈ ಅಡ್ಕ ಅವರ ನಿರ್ದೇಶನದಲ್ಲಿ “ಕೃಷ್ಣಂ ವಂದೇ ಜಗದ್ಗುರು” ಯಕ್ಷಗಾನ ಬಯಲಾಟ ಪ್ರದರ್ಶನವಾಗಲಿದೆ.

ಸಭಾ ಕಾರ್ಯಕ್ರಮ ಸಂಜೆ 7 ಗಂಟೆಗೆ ನಡೆಯಲಿದೆ. ಕಾರ್ಯಕ್ರಮವನ್ನು ಮುಂಬೈ ವಿ.ಕೆ. ಸಮೂಹ ಸಂಸ್ಥೆಗಳ ಅಧ್ಯಕ್ಷ ಕರುಣಾಕರ ಎಂ ಶೆಟ್ಟಿ ಮಧ್ಯಗುತ್ತು ಉದ್ಘಾಟಿಸಲಿದ್ದಾರೆ. ಸುರತ್ಕಲ್ ಬಂಟರ ಸಂಘದ ಅಧ್ಯಕ್ಷ ಲೋಕಯ್ಯ ಶೆಟ್ಟಿ ಮುಂಚೂರು ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸುರತ್ಕಲ್ ಶ್ರೀ ಶಾರದಾ ಸೇವಾ ಟ್ರಸ್ಟ್ ನ ಅಧ್ಯಕ್ಷ ವೈ ರಾಘವೇಂದ್ರ ರಾವ್, ಶ್ರೀ ಡೆವಲಪರ್ಸ್ ಸಂಸ್ಥೆಯ ಅಧ್ಯಕ್ಷ ಗಿರೀಶ್ ಎಂ ಶೆಟ್ಟಿ ಕಟೀಲು, ಸುರತ್ಕಲ್ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಅಶೋಕ ಶೆಟ್ಟಿ ಸುರತ್ಕಲ್, ಸುಭಾಷಿತನಗರ ರೆಸಿಡೆಂಟ್ಸ್ ವೆಲ್ಫೇರ್ ಅಸೋಸಿಯೇಶನ್ (ರಿ) ನ ಕೋಶಾಧಿಕಾರಿ ನರಸಿಂಹ ಸುವರ್ಣ, ಯಕ್ಷಧ್ರುವ ಪಟ್ಲ ಫೌಂಡೇಶನ್ ನ ಟ್ರಸ್ಟಿ ಧನಂಜಯ ಶೆಟ್ಟಿ ಕಟ್ಲ, ಎಚ್ ಪಿಸಿಎಲ್ ಸಂಸ್ಥೆಯ ಮಾನವ ಸಂಪನ್ಮೂಲ ಸಹಾಯಕರಾದ ವಾಸು ನಾಯ್ಕ್ ಎಸ್, ಯಕ್ಷಗುರು ರಾಕೇಶ್ ರೈ ಅಡ್ಕ, ಸುರತ್ಕಲ್ ಬಂಟರ ಸಂಘದ ನಿಕಟಪೂರ್ವ ಅಧ್ಯಕ್ಷ ಸುಧಾಕರ ಪೂಂಜ ಭಾಗವಹಿಸಲಿದ್ದಾರೆ.
ಸಮಾರಂಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ರಾಜ್ಯ ಮತ್ತು ರಾಷ್ಟ್ರ‌ಮಟ್ಟದಲ್ಲಿ ಸಾಧನೆಗೈದ ಹಾಗೂ ಪ್ರಸಕ್ತ ಸಾಲಿನಲ್ಲಿ ಎಸ್ ಎಸ್ ಎಲ್ ಸಿಯಲ್ಲಿ ಮತ್ತು ಪಿಯುಸಿಯಲ್ಲಿ ಶೇಕಡಾ 90 ಮತ್ತು ಅದಕ್ಕಿಂತ ಹೆಚ್ಚು ಅಂಕ ಗಳಿಸಿದ ಯಕ್ಷಸಿರಿಯ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಗುವುದು ಎಂದು ಸುರತ್ಕಲ್ ಬಂಟರ ಸಂಘದ ಪ್ರಧಾನ ಕಾರ್ಯದರ್ಶಿ ಲೀಲಾಧರ ಶೆಟ್ಟಿ ಕಟ್ಲ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು