10:40 AM Thursday3 - July 2025
ಬ್ರೇಕಿಂಗ್ ನ್ಯೂಸ್
ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ Accident | ಸುರತ್ಕಲ್ ಬಳಿ ಎರಡು ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿ: 28… Chikkaballapura | ರಾಜ್ಯ ಸಚಿವ ಸಂಪುಟ ಸಭೆ: ಮುಖ್ಯಮಂತ್ರಿ ಘೋಷಿಸಿದ ಯೋಜನೆ, ತೀರ್ಮಾನಗಳೇನು? JDS Protest | ರಾಜ್ಯದಲ್ಲಿ ಆರ್ಥಿಕ ಅರಾಜಕತೆ: ಬೆಂಗಳೂರು ಪ್ರತಿಭಟನೆಯಲ್ಲಿ ಜೆಡಿಎಸ್ ಆರೋಪ Dharwad | ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ: ಕಾರ್ಮಿಕ… ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ… Kodagu | ಕುಶಾಲನಗರದ ಕೂಡಿಗೆಯಲ್ಲಿ ಚಿನ್ನದಂಗಡಿ ಮಾಲೀಕನ ಮನೆಗೆ ಕನ್ನ: 14 ಲಕ್ಷ… ಕವಿಕಾದಲ್ಲಿ 14 ಕೋಟಿ ರೂ. ವೆಚ್ಚದಲ್ಲಿ ವಿದ್ಯುತ್ ಪರಿವರ್ತಕ ದುರಸ್ತಿ ಕೇಂದ್ರ: ಇಂಧನ…

ಇತ್ತೀಚಿನ ಸುದ್ದಿ

Suratkal | ಸ್ಥಗಿತಗೊಂಡಿರುವ ಬಡವರ ವಸತಿ ಸಂಕೀರ್ಣ ಪೂರ್ಣಗೊಳಿಸಲು ಒತ್ತಾಯಿಸಿ ಸಿಪಿಎಂ, ಡಿವೈಎಫ್ಐ ಪ್ರತಿಭಟನೆ

24/04/2025, 10:30

ಸುರತ್ಕಲ್(reporterkarnataka.com) : ಸ್ಥಳೀಯ ಶಾಸಕರು, ಮಹಾನಗರ ಪಾಲಿಕೆಯ ಬಿಜೆಪಿ ಆಡಳಿತದ ನಿರ್ಲಕ್ಷ್ಯ ಮತ್ತು ಬೇಜವಾಬ್ದಾರಿತನದಿಂದ ಇಡ್ಯಾ ವಾರ್ಡಿನಲ್ಲಿ ಬಡವರಿಗಾಗಿ ನಿರ್ಮಿಸಲಾಗುತ್ತಿದ್ದ 600 ಮನೆಗಳುಳ್ಳ ವಸತಿ ಯೋಜನೆ ಸ್ಥಗಿತಗೊಂಡಿದೆ ಎಂದು ಆರೋಪಿಸಿ ಸಿಪಿಎಂ ಮತ್ತು ಡಿವೈಎಫ್ಐ ವಲಯ ಸಮಿತಿ ನೇತೃತ್ವದಲ್ಲಿ ಜನತಾ ಕಾಲನಿಯ ಸ್ಥಗಿತಗೊಂಡಿರುವ ವಸತಿ ಸಮುಚ್ಚಯದ ಎದುರು ಪ್ರತಿಭಟನೆ ನಡೆಯಿತು.
ಪ್ರತಿಭಟನೆ ಉದ್ದೇಶಿಸಿ ಡಿವೈಎಫ್ಐ ಜಿಲ್ಲಾಧ್ಯಕ್ಷ ಬಿ.ಕೆ. ಇಮ್ತಿಯಾಜ್ ಮಾತನಾಡಿ, ಮಂಗಳೂರು ನಗರ ಪಾಲಿಕೆಯೊಳಗೆ ಸುಮಾರು ಹದಿನೈದು ಸಾವಿರಕ್ಕೂ ಹೆಚ್ಚು ಮನೆ, ನಿವೇಶನ ರಹಿತ ಬಡವರಿದ್ದಾರೆ. ನಗರ ಪಾಲಿಕೆ ಬಡವರಿಗೆ ನಿವೇಶನ ವಿತರಿಸಲು ಪಾಲಿಕೆಯಲ್ಲಿ ಯಾವುದೇ ಯೋಜನೆಯಿಲ್ಲ. ಇರುವಂಥ ಒಂದು ಜಿ+4 ವಸತಿ ಸಮುಚ್ಚಯ ಜನಪ್ರತಿನಿದಿಗಳ ಇಚ್ಛಾಶಕ್ತಿಯ ಕೊರತೆಯಿಂದಾಗಿ ಯೋಜನೆ ನೆನೆಗುದಿಗೆ ಬಿದ್ದಿದೆ. ಶ್ರೀಮಂತ ಬಿಲ್ಡರುಗಳ ವಸತಿ ಸಂಕೀರ್ಣದ ಭೂಮಿ ಪೂಜೆಗೆ ಹೋಗುವ ಶಾಸಕರುಗಳು ಕಳೆದ 25 ವರ್ಷಗಳಿಂದ ಬಡವರಿಗೆ ವಸತಿ ಸೌಕರ್ಯಗಳು ದೊರಕಿಸಿಕೊಡಲು ವಿಫಲರಾಗಿದ್ದಾರೆ ಎಂದು ಟೀಕಿಸಿದರು.
ಮಾಜಿ ಪಾಲಿಕೆ ಸದಸ್ಯ ದಯಾನಂದ ಶೆಟ್ಟಿ ಮಾತನಾಡಿ, ಜನರಿಗೆ ವಸತಿ ನೀಡುವುದು ಭಿಕ್ಷೆಯಲ್ಲ ಸಂವಿಧಾನಬದ್ದ ಹಕ್ಕಾಗಿದೆ. ನಗರಪಾಲಿಕೆ ವ್ಯಾಪ್ತಿಯೊಳಗಿನ ನಿವೇಶನ ರಹಿತರ ಸಮಸ್ಯೆ ಗಂಭೀರವಾಗಿದೆ ಶಾಸಕರ ನೇತೃತ್ವದ ಆಶ್ರಯ ಸಮಿತಿ ಊಟಕ್ಕಿಲ್ಲದ ಉಪ್ಪಿನಕಾಯಿಯಂತಾಗಿದೆ. ಎಂದು ಆರೋಪಿಸಿದರು.
ಸಿಪಿಎಂ ದಕ್ಷಿಣ ಕಾರ್ಯದರ್ಶಿ ಯೋಗೀಶ್ ಜಪ್ಪಿನಮೊಗರು ಮಾತನಾಡುತ್ತಾ ನಗರಪಾಲಿಕೆ ವ್ಯಾಪ್ತಿಯ ಎಲ್ಲಾ ನಿವೇಶನ ರಹಿತರನ್ನು ಸಂಘಟಿಸಿ ಪಾಲಿಕೆಗೆ ಮುತ್ತಿಗೆ ಹಾಕಲಾಗುವುದು ಎಂದು ಎಚ್ಚರಿಸಿದರು.
ಸಿಪಿಎಂ ಮುಖಂಡರಾದ ಶ್ರೀನಾಥ್ ಕುಲಾಲ್, ಐ. ಮೊಹಮ್ಮದ್, ಸಲೀಮ್ ಶಾಡೋ, ಡಿವೈಎಫ್ಐ ಮುಖಂಡರಾದ ಬಿ.ಕೆ. ಮಕ್ಸೂದ್, ನವಾಜ್ ಕುಲಾಯಿ, ಇಲ್ಯಾಸ್ ಕೃಷ್ಣಾಪುರ, ಇಮ್ತಿಯಾಜ್ ಕುಳಾಯಿ, ಹನೀಫ್ ಕುಳಾಯಿ, ಸಾದಿಕ್ ಕಿಲ್ಪಾಡಿ,ಆಟೋ ರಿಕ್ಷಾ ಚಾಲಕರ ಸಂಘದ ಮುಖಂಡರಾದ ಲಕ್ಷ್ಮೀಶ್ ಅಂಚನ್, ಬಷೀರ್ ಕಾನ, ನಿವೇಶನ ರಹಿತರ ಹೋರಾಟ ಸಮಿತಿಯ ಮುಖಂಡರಾದ ಬಾಲಾಕೃಷ್ಣ ಕುಳಾಯಿ, ಭವ್ಯ ಪಂಜಿಮೊಗರು, ಜೈನಾಬು, ದಿಲ್ ದಾರ್, ಹಸೀನಾ, ನೌಸೀನ, ಮರಿಯಮ್ಮ, ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು