6:34 PM Tuesday15 - April 2025
ಬ್ರೇಕಿಂಗ್ ನ್ಯೂಸ್
ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್… Police Encounter | ಹುಬ್ಬಳ್ಳಿ: 5 ವರ್ಷದ ಬಾಲಕಿಯ ಅಪಹರಿಸಿ ಕೊಲೆ: ಆರೋಪಿ… DCM | ಬಿಜೆಪಿಗರು ತಮ್ಮ ಹೋರಾಟ ಕೇಂದ್ರ ಸರಕಾರದ ವಿರುದ್ಧ ಎಂದು ಬೋರ್ಡ್… CET | ಪಿಯುಸಿ ಅಂಕ ಕಡಿಮೆ ಬಂತೆಂದು ಸಿಇಟಿ ಮಿಸ್ ಮಾಡ್ಕೊಬೇಡಿ: ಕರ್ನಾಟಕ… ತುಮಕೂರು ರೈಲ್ವೆ ನಿಲ್ದಾಣಕ್ಕೆ ಸಿದ್ಧಗಂಗ ಶ್ರೀಗಳ ಹೆಸರಿಡುವ ಕುರಿತು ಸಿಎಂ ಜತೆ ಚರ್ಚೆ:… Karnataka BJP | ದಲಿತರ ತುಳಿದವರೇ ಕಾಂಗ್ರೆಸಿಗರು: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆರೋಪ ಜನ ಬೇಸತ್ತಿರುವುದಕ್ಕೆ ಜನಾಕ್ರೋಶ ಯಾತ್ರೆಗೆ ಸಿಗುತ್ತಿರುವ ಬೆಂಬಲವೇ ಸಾಕ್ಷಿ : ಪ್ರತಿಪಕ್ಷದ ನಾಯಕ… ಅತ್ಯಾಧುನಿಕ ಮಾಲಿನ್ಯ ನಿಯಂತ್ರಣ ತಂತ್ರಜ್ಞಾನದ ಬಾಲ್ಡೋಟಾ ಇಂಟಿಗ್ರೇಟೆಡ್ ಸ್ಟೀಲ್ ಪ್ರಾಜೆಕ್ಟ್ ಎಂಬೆಸ್ಸಿ ಗಾಲ್ಫ್ ಲಿಂಕ್ ನ ಸಿಎಸ್ಆರ್ ನಿಧಿಯಿಂದ ಮರಿಯ ನಿಕೇತನ ಶಿಕ್ಷಣ ಸಂಸ್ಥೆಗೆ… Home Minister | ಡಿಸಿಆರ್ ಇ ಪೊಲೀಸ್ ಠಾಣೆಗಳಿಗೆ ನೂತನ ವಾಹನ ಹಸ್ತಾಂತರ:…

ಇತ್ತೀಚಿನ ಸುದ್ದಿ

Suratkal | ದಸರಾ ಕ್ರೀಡಾಕೂಟದಲ್ಲಿ ಕಂಬಳ ಸೇರ್ಪಡೆಗೆ ಸೂಚನೆ: ಗುರುಪುರ ಕಂಬಳೋತ್ಸವದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್

13/04/2025, 20:16

ಸುರತ್ಕಲ್(reporterkarnataka.com): ದ.ಕ. ಜಿಲ್ಲೆಯ ಸಂಸ್ಕೃತಿಯಾಗಿರುವ ಕಂಬಳವನ್ನು ಉಳಿಸಿ ಬಳೆಸುವ ನಿಟ್ಟಿನಲ್ಲಿ ಸರಕಾರ ಪ್ರೋತ್ಸಾಹ ನೀಡಲು ನಿರ್ಧರಿಸಿದ್ದು, ದಸರಾ ಕ್ರೀಡಾಕೂಟದಲ್ಲಿ ಕಂಬಳ ಕ್ರೀಡೆಯನ್ನು ಆಯೋಜಿಸುವಂತೆ ಸೂಚನೆ ನೀಡಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಅವರು ಶನಿವಾರ ಸಂಜೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಅವರ ನೇತೃತ್ವದಲ್ಲಿ ಗುರುಪುರ ಮಾಣಿಬೆಟ್ಟು ಗುತ್ತಿನ ಗದ್ದೆಯಲ್ಲಿ ನಡೆದ ಎರಡನೇ ವರ್ಷದ ಹೊನಲು ಬೆಳಕಿನ ಮೂಳೂರು – ಅಡ್ಡೂರು ಜೋಡುಕರೆ ಕಂಬಳ “ಗುರುಪುರ ಕಂಬಳೋತ್ಸವ”ದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತಾಡಿದರು.


ದ.ಕ. ಜಿಲ್ಲೆ ವಿದ್ಯಾವಂತರು, ಬುದ್ದಿವಂತರ ಜಿಲ್ಲೆಯಾಗಿದ್ದು ಅವರ ಬುದ್ದಿವಂತಿಗೆ, ಪ್ರತಿಭೆಗಳು ಹೊರ ದೇಶಗಳಿಗೆ ಬಳಕೆಯಾಗುತ್ತಿದೆ. ಅದನ್ನು ನಮ್ಮ ರಾಜ್ಯದಲ್ಲೇ ಬಳಸಿಕೊಳ್ಳುವಂತೆ ಯೋಜನೆಗಳನ್ನು ರೂಪಿಸಲಾಗುವುದು.
ಕರಾವಳಿಯ ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಜಾತಿ ಧರ್ಮಗಳನ್ನು ಮರೆರು ಕಂಬಳ‌ ನಡೆಸಿ ಬೆಳೆಸಲು ಸರಕಾರ‌ ಎಲ್ಲಾ ರೀತಿಯ ಸಹಕಾರ ನೀಡಲಿದೆ ಎಂದು ಭರವಸೆ ನೀಡಿದರು.
*ಜಿಲ್ಲೆಯಲ್ಲಿ ಧಾರ್ಮಿಕ ಕ್ಷೇತ್ರ, ಪ್ರವಾಸೋದ್ಯಮ ಬೆಳೆಸಲು ಸೂಚನೆ:*
ದೇಶದಲ್ಲೇ ಅತೀ ಹೆಚ್ಚಿನ ಕರಾವಳಿ ಭೂಭಾಗ ದ.ಕ. ಜಿಲ್ಲೆಯಲ್ಲಿದ್ದು ಅದನ್ನು ಬಳಸಿಕೊಂಡು ಧಾರ್ಮಿಕ ಕ್ಷೇತ್ರ ಮತ್ತು ಪ್ರವಾಸೋದ್ಯಮವನ್ನು ಬೆಳಸುವ ಕುರಿತು ಈಗಾಗಲೇ ಸರಕಾರ ಮಟ್ಟದಲ್ಲಿ ಚರ್ಚಿಸಲಾಗಿದೆ. ಇದರಿಂದ ಪ್ರವಾಸೋದ್ಯಮ ಬೆಳೆಯುವ ಜೊತೆಗೆ ಕರಾವಳಿಯ ಸಂಸ್ಕೃತಿಯನ್ನು ಬೆಳೆಸುವ ಕುರಿತು ಸರಕಾರ ಒತ್ತು ನೀಡಲು ಸರಕಾರ‌ ಮುಂದಾಗಿದ್ದು, ಅದಕ್ಕಾಗಿ ಸರಕಾರ ಎಂದಿಗೂ ಜಿಲ್ಲೆಯ ಜನರೊಂದಿಗೆ ಇರಲಿದೆ ಎಂದು ಉಪ‌ಮುಖ್ಯಮಂತ್ರಿ ಡಿ.ಕೆ.‌ ಶಿವಕುಮಾರ್ ನುಡಿದರು.
“ಗುರುಪುರ ಕಂಬಳೋತ್ಸವ ಸಮಿತಿಯ ಅಧ್ಯಕ್ಷ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಮಾತಾಡಿ, ಕಂಬಳ ದಕ್ಷಿಣ ಕನ್ನಡ ಜಿಲ್ಲೆಯ ಸಂಸ್ಕೃತಿ, ಜಾನಪದ ಕ್ರೀಡೆಯಾಗಿರದೆ ನಮ್ಮ ಸಂಸ್ಕೃತಿಯಾಗಿದೆ. ತಲಪಾಡಿಯಿಂದ ಮುಲ್ಕಿ ವರೆಗಿನ ಬೀಚ್ ರಸ್ತೆ ಗಳನ್ನು ಅಭಿವೃದ್ಧಿ ಪಡಿಸಿ ಬೀಚ್ ಪ್ರಾವಾಸೋದ್ಯಮಕ್ಕೆ ಒತ್ತು ನೀಡಬೇಕು ಎಂದು ಮನವಿ ಮಾಡಿದರು.
ಕಂಬಳ ಸಮಿತಿಯ ವತಿಯಿಂದ ನೇಗಿಲು ಹಸ್ತಾಂತರಿಸಿ ಉಪಮುಖ್ಯಮಂತ್ರಿ ಅವರನ್ನು ಸನ್ಮಾನಿಸಲಾಯಿತು. ಕಂಬಳ‌ ಕ್ಷೇತ್ರದಲ್ಲಿ ವಿಶೇಷ ಸಾಧನೆ ತೋರಿದ ದೂಜ ಕೊಣವನ್ನು ಡಿಕೆಶಿ ಸನ್ಮಾನಿಸಿ ಅದರ ಪೋಸ್ಟಲ್ ಸ್ಟಾಂಪ್ ಬಿಡುಗಡೆ ಗೊಳಿಸಿದರು.
ಕಂಬಳ ಕ್ಷೇತ್ರದ ಗುಣಪಾಲ ಕಡಂಬ ಪ್ರಾಸ್ತಾವಿಕ ಮಾತನಾಡಿದರು. ಸಮಾರೋಪ ಸಮಾರಂಭದಲ್ಲಿ ಎಸ್ ಸಿಡಿಸಿಸಿ ಬ್ಯಾಂಕ್ ಅದ್ಯಕ್ಷ ರಾಜೇಂದ್ರ‌ ಕುಮಾರ್, ಮಾಜಿ ಸಚಿವರಾಗಿರುವ ರಮಾನಾಥ ರೈ, ಅಭಯಚಂದ್ರಜೈನ್, ವಿನಯ ಕುಮಾರ್ ಸೊರಕೆ, ವಿ.ಪ. ಸದಸ್ಯ ಐವನ್ ಡಿಸೋಜ, ಪದ್ಮರಾಜ್ ಪೂಜಾರಿ, ಶಕುಂತಲಾ ಶೆಟ್ಟಿ ಪುತ್ತೂರು, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ, ರಕ್ಷಿತ್ ಶಿವರಾಮ, ಮಮತಾ ಗಟ್ಟಿ, ಕಣಚೂರು ಮೋನು, ದೇವಿ ಪ್ರಸಾದ್ ಶೆಟ್ಟಿ ಮೊದಲಾದವರು ಇದ್ದರು.

ಕಂಬಳ ಜಾತಿ ಧರ್ಮಗಳ ವಿಚಾರ ಅಲ್ಲ. ಹಿರಿಯರ ಸಂಪ್ರದಾಯ. ರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿರುವ
ಜಿಲ್ಲೆಯ ಸಾಂಸ್ಕೃತಿಕ ಕ್ರೀಡೆ ಕಂಬಳ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸುವಂತೆ ಮಾಡಬೇಕಿದೆ. ಪ್ರಾಣಿಗಳ ಮನಸು ಅರಿತು ಅವುಗಳ ಮೇಲೆ ಹಿಡಿತ ಸಾಧಿಸಿ ಸೋಲುವುದನ್ನು ಕಲಿಯದಿದ್ದರೆ ಗೆಲುವು ಅಸಾಧ್ಯ. ಕ್ರೀಡೆಯಲ್ಲಿ ಹೃದಯವಂತಿಕೆ ಮುಖ್ಯ.ಕಂಬಳದ ಮೂಲಕ ಜಿಲ್ಲೆಯ ಸಂಸ್ಕೃತಿ ಉಳಿಸುವ ಕೆಲಸ ಇನಾಯತ್ ಅಲಿ ನೇತೃತ್ವದಲ್ಲಿ ನಡೆಯುತ್ತಿದೆ.


– ಡಿ.ಕೆ.ಶಿವಕುಮಾರ್
ಉಪ ಮುಖ್ಯಮಂತ್ರಿ

ಇತ್ತೀಚಿನ ಸುದ್ದಿ

ಜಾಹೀರಾತು